September 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಶ್ರೀ ಮಂಜುನಾಥ ಬನ್ನಿಸ್ ಟಂಟೋಲ’ ಘಟಕಕ್ಕೆ ಚಾಲನೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗಾಗಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ “ಶ್ರೀ ಮಂಜುನಾಥ ಬನ್ನಿಸ್ ಟಂಟೋಲ” ಘಟಕಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು.

ಶಾಲೆಯ ಮುಖ್ಯೋಪಾಧ್ಯಾಯರಾದ ಮನಮೋಹನ್ ನಾಯಕ್ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಕ್ಕಳಿಗೆ ಬನ್ನಿಸ್ ಎಪ್ರೋನ್ ಧರಿಸುವ ಮೂಲಕ ಘಟಕವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬಾಲ್ಯದಲ್ಲಿಯೇ ಮಕ್ಕಳಲ್ಲಿ ಶಿಸ್ತು, ಸೇವಾ ಮನೋಭಾವ, ನಾಯಕತ್ವದ ಗುಣಗಳು ಹಾಗೂ ಉತ್ತಮ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಬನ್ನಿಸ್ ಚಟುವಟಿಕೆಗಳನ್ನು ಆರಂಭಿಸಲಾಗಿದೆ ಎಂದು ತಿಳಿಸಿದರು.

ಶಾಲೆಯ ಶಿಕ್ಷಕರು ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಉನ್ನತ ತರಬೇತುದಾರರಾದ ಗೈಡ್ ಕ್ಯಾಪ್ಟನ್ ಶಮೀಮ್ ಬಾನು ಹಾಗೂ ಕಬ್ ಕ್ಯಾಪ್ಟನ್ ಮಮತ ಅವರ ನೇತೃತ್ವದಲ್ಲಿ ಮಕ್ಕಳಿಗೆ ವಿವಿಧ ಬನ್ನಿಸ್ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು. ಪ್ರಿ-ಕೆ.ಜಿ. ಹಾಗೂ ಎಲ್.ಕೆ.ಜಿ. ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟು ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕ ವೃಂದದವರು ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ವಿ ಆಯೋಜನೆಗೆ ಸಹಕಾರ ನೀಡಿದರು.

Related posts

ಪುಂಜಾಲಕಟ್ಟೆ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ: ಅಧ್ಯಕ್ಷರಾಗಿ ಚಿದಾನಂದ ಮಾಣಿಂಜ ಆಯ್ಕೆ

Suddi Udaya

ಮುಗೇರಡ್ಕ: ಸ್ಪಂದನ ಚಾರಿಟೇಬಲ್ ಟ್ರಸ್ಟ್ , ಬೆಂಗಳೂರು ಮತ್ತು ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ಇದರ ಆಶ್ರಯದಲ್ಲಿ ಮನೆ ಹಸ್ತಾಂತರ ಕಾರ್ಯಕ್ರಮ

Suddi Udaya

ಅಕ್ಷಯ ಕೆರಿಯರ್ ಅಕಾಡೆಮಿಯ “ಡಿಪ್ಲೊಮ ಇನ್ ಏವಿಯೇಷನ್” ಶಾರ್ಟ್ ಟಾರ್ಮ್ ಕೋರ್ಸ್ ನ ಹೊಸ ಬ್ಯಾಚ್ ಪ್ರಾರಂಭ

Suddi Udaya

ಬೆಳಾಲು ಎನ್ ಎಸ್ ಎಸ್ ಶಿಬಿರಾರ್ಥಿ ಮತ್ತು ಪಂಚಾಯತ್ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya

ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ರೂ. 3 ಕೋಟಿ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಫುಟ್ಬಾಲ್ ಕ್ರೀಡಾಂಗಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya
error: Content is protected !!