September 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಡಿ.ಎಂ ಕಾಲೇಜಿನಲ್ಲಿ ರೋವರ್ಸ್ & ರೇಂಜರ್ಸ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ: ಪ್ರತಿಜ್ಜಾ ವಿಧಿ ಸ್ವೀಕಾರ, ಬಿತ್ತಿ ಪತ್ರಿಕೆ ಅನಾವರಣ

ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ವತಿಯಿಂದ 2026–27ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಹಾಗೂ “Empowering Leaders: A Workshop on Teamwork and Communication” ಎಂಬ ವಿಷಯದ ನಾಯಕತ್ವ ಕಾರ್ಯಾಗಾರವು ಕಾಲೇಜಿನ ಸಮ್ಯಗ್ದರ್ಶನ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಮಂಗಳೂರಿನ ಸ್ವಸ್ತಿಕ ನ್ಯಾಷನಲ್ ಬಿಸಿನೆಸ್ ಸ್ಕೂಲ್ ರೇಂಜರ್ ಲೀಡರ್ ಹಾಗೂ ಲೈಫ್ ಸ್ಕಿಲ್ಸ್ ತರಬೇತುದಾರರಾದ ಪ್ರೀತಿ ಶೆಟ್ಟಿಗಾರ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿ, ಸ್ಪರ್ಧಾತ್ಮಕ ಯುಗದಲ್ಲಿ ಸಾರ್ವಜನಿಕ ಸಂಪರ್ಕ ಮತ್ತು ಸಂವಹನ ಕಲೆಯನ್ನು ಕರಗತ ಮಾಡಿಕೊಂಡು ವೃತ್ತಿಪರತೆಯನ್ನು ಬೆಳೆಸಿಕೊಳ್ಳಬೇಕು.


ಪ್ರತಿಯೊಂದು ಕ್ಷೇತ್ರವೂ ನಮ್ಮೊಳಗಿನ ಕೌಶಲ್ಯ ಮತ್ತು ಪ್ರತಿಭೆಯನ್ನು ನಿರೀಕ್ಷಿಸುತ್ತದೆ. ಆ ಹಾದಿಯಲ್ಲಿ ನಡೆದಾಗ ಅವಕಾಶಗಳು ತೆರೆದುಕೊಳ್ಳುತ್ತದೆ. ಆ ಅವಕಾಶಗಳು ಉತ್ತಮ ಉದ್ಯೋಗವನ್ನು ಕಂಡುಕೊಳ್ಳಲು ಸಹಕಾರಿಯಾಗುತ್ತದೆ ಎಂದರು.

ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಶ್ವನಾಥ ಪಿ. ವಹಿಸಿ, ವಿದ್ಯಾರ್ಥಿಗಳು ರೋವರ್ಸ್ ಮತ್ತು ರೇಂಜರ್ಸ್ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳುವಂತೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಅತಿಥಿಗಳ‌ ಸಮ್ಮುಖದಲ್ಲಿ ರೋವರ್ಸ್ ಮತ್ತು ರೇಂಜರ್ಸ್ ಘಟಕದ ಭಿತ್ತಿಪತ್ರಿಕೆಯನ್ನು ಅನಾವರಣಗೊಳಿಸಲಾಯಿತು. ಇದೇ ಸಂದರ್ಭದಲ್ಲಿ 2026–27ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಘೋಷಿಸಿ, ಪ್ರಮಾಣ ವಚನ ಬೋಧಿಸಲಾಯಿತು.

ಸಭಾ ಕಾರ್ಯಕ್ರಮದ ಬಳಿಕ ನಡೆದ ಕಾರ್ಯಾಗಾರದಲ್ಲಿ ತಂಡದ ಕಾರ್ಯಕ್ಷಮತೆ, ನಾಯಕತ್ವ, ಸಂವಹನ ಕೌಶಲ್ಯ, ಪರಸ್ಪರ ವಿಶ್ವಾಸ ಹಾಗೂ ಸಮಸ್ಯೆ ಪರಿಹಾರ ಕುರಿತಂತೆ ಸಂವಾದಾತ್ಮಕ ಚಟುವಟಿಕೆಗಳು ಮತ್ತು ಪ್ರಾಯೋಗಿಕ ಅಭ್ಯಾಸಗಳನ್ನು ನಡೆಸಲಾಯಿತು. ಮಂಗಳೂರಿನ ಸ್ವಸ್ತಿಕ ನ್ಯಾಷನಲ್ ಬಿಸಿನೆಸ್ ಸ್ಕೂಲ್ ರೇಂಜರ್ ಲೀಡರ್ ಹಾಗೂ ಲೈಫ್ ಸ್ಕಿಲ್ಸ್ ತರಬೇತುದಾರರಾದ ಪ್ರೀತಿ ಶೆಟ್ಟಿಗಾರ್ ಕಾರ್ಯಗಾರವನ್ನು ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ 100ಕ್ಕೂ ಅಧಿಕ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳು ಭಾಗವಹಿಸಿ ಪ್ರಯೋಜನ ಪಡೆದರು. ಕಾರ್ಯಕ್ರಮವನ್ನು ರಸಾಯನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಹಾಗೂ ರೇಂಜರ್ ಲೀಡರ್ ಡಾ. ಗಾನವಿ ಡಿ., ರೋವರ್ ಸ್ಕೌಟ್ ಲೀಡರ್ ಪ್ರಸಾದ್ ಕುಮಾರ್ ಸಂಯೋಜಿಸಿದರು.

Related posts

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ರವರ ಜನ್ಮ ದಿನಾಚರಣೆ

Suddi Udaya

ಪಿಲಾತಬೆಟ್ಟು: ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ-ರಕ್ಷಕ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಐತಿಹಾಸಿಕ ಕಾರ್ಯಕ್ರಮ: ಸ್ವಸಹಾಯ ಸಂಘಗಳಿಗೆ ರೂ.605 ಕೋಟಿ ಲಾಭಾಂಶ ವಿತರಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

Suddi Udaya

ಶಿಶಿಲ: ಕೃಷಿಕ ಆನಂದ ಕೆದಿಲ್ಲಾಯ ನಿಧನ

Suddi Udaya

ಬೆಳ್ತಂಗಡಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪ್ರಖಂಡ ಮತ್ತು ಘಟಕ ಸಮಿತಿಗಳ ಸಮಾಲೋಚನಾ ಬೈಠಕ್

Suddi Udaya

ದೇಶದ ಸೈನ್ಯದಲ್ಲಿ ಅನನ್ಯ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಮುಗೇರಡ್ಕ ಅಶೋಕ್ ಪಿ.ಎಲ್ ರವರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಂದ ಗೌರವಾರ್ಪಣೆ

Suddi Udaya
error: Content is protected !!