September 15, 2026
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಲೇ ಆತ್ಮಹತ್ಯೆಗೆ ಶರಣಾದ ಕಾಜೂರಿನ ಸಯ್ಯದ್ ಅನ್ವರ್

ಬೆಳ್ತಂಗಡಿ: ಬೆಳುವಾಯಿ ಗ್ರಾಮದ ನಾಣಿಲ್ ಎಂಬಲ್ಲಿ ಯುವಕನೊಬ್ಬ ತನ್ನ ಅಕ್ಕನಿಗೆ ವಿಡಿಯೋ ಕಾಲ್ ಮೂಲಕ ಮಾತನಾಡುತ್ತಲೇ ಆತ್ಮಹತ್ಯೆಗೆ ಶರಣಾದ ಘಟನೆ ಜು.31ರಂದು ಮುಂಜಾನೆ ನಡೆದಿದೆ.

ಸಯ್ಯದ್ ಅನ್ವರ್ ಬೆಳ್ತಂಗಡಿ ತಾಲೂಕಿನ ಕಾಜೂರು ಮೂಲದ (25) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕಳೆದ ಕೆಲವು ಸಮಯದಿಂದ ಇಸ್ಮಾಯಿಲ್ ಅವರ ಬಾಡಿಗೆ ಮನೆಯಲ್ಲಿ ಪತ್ನಿ ಮಗುವಿನೊಂದಿಗೆ ವಾಸವಾಗಿದ್ದು ಪತಿ-ಪತ್ನಿ ನಡುವೆ ಆಗಾಗ ಜಗಳವಾಗುತ್ತಿತ್ತೆನ್ನಲಾಗಿದೆ. ಈ ಸಂಬಂಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಮೀನಿನ ಟೆಂಪೊದಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಅನ್ವರ್ ಕಳೆದ ಕೆಲವು ಸಮಯದಿಂದ ಕೆಲಸವಿಲ್ಲದೆ ಮನೆಯಲ್ಲಿದ್ದು ಒಂದೆರಡು ದಿನಗಳ ಹಿಂದೆ ಬೆಂಗಳೂರಿಗೆ ಹೋಗಿ ಬಂದಿದ್ದರು. ಗುರುವಾರ ಮತ್ತೆ ಪತಿ- ಪತ್ನಿ ನಡುವೆ ಜಗಳವಾಗಿದ್ದು ಪತ್ನಿ ತನ್ನ
ಎರಡು ವರ್ಷದ ಪುತ್ರನೊಂದಿಗೆ ತವರು ಮನೆಗೆ ತೆರಳಿದ್ದರು.

ಈ ಹಿನ್ನೆಲೆಯಲ್ಲಿ ತನ್ನಕ್ಕನಿಗೆ ವಿಡಿಯೊ ಕರೆ ಮಾಡಿ ಪತ್ನಿ ಮನೆಯವರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದಾರೆನ್ನಲಾಗಿದೆ. ಆತಂಕಕ್ಕೊಳಗಾದ ಮನೆಯವರು ಬಾಡಿಗೆ ಮನೆ ಬಳಿ ಬಂದಾಗ ಆಗಲೇ ಆತ್ಮಹತ್ಯೆ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ. ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ಪಾಲಡ್ಕ ಹಾಲು ಉತ್ಪಾದಕರ ಸಹಕಾರ ಸಂಘ: ಅಧ್ಯಕ್ಷರಾಗಿ ಧರ್ಣಪ್ಪ ಕುಲಾಲ್, ಉಪಾಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ

Suddi Udaya

ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಜಿತೇಶ್‌ನ ಮನೆಗೆ ಭೇಟಿ ನೀಡಿದ ಕಿರಣ್‌ಚಂದ್ರ ಪುಷ್ಪಗಿರಿ

Suddi Udaya

ಕನ್ಯಾಡಿ ಸೇವಾನಿಕೇತನಕ್ಕೆ ಭೋರುಕಾ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ ಭೇಟಿ

Suddi Udaya

ರೆಖ್ಯ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು: 6 ಮಂದಿಗೆ ಗಂಭೀರ ಗಾಯ

Suddi Udaya
error: Content is protected !!