September 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ‘ ರಾಜ್ಯರಂಗ ‘ ವಿದ್ಯಾರ್ಥಿ ಸಂಘ ಉದ್ಘಾಟನೆ

ಉಜಿರೆ : ವಿದ್ಯಾರ್ಥಿ ಸಮೂಹ ನಕರಾತ್ಮಕ ಚಿಂತನೆಗಳಿಂದ ದೂರವಿದ್ದು, ಏಕಾಗ್ರತೆಯನ್ನು ಬೆಳೆಸಿಕೊಳ್ಳುವುದರ ಜೊತೆಗೆ ಮೌಲ್ಯಯುತ ಜೀವನವನ್ನು ನಮ್ಮದಾಗಿಸಿಕೊಳ್ಳಬೇಕು. ನಮ್ಮೊಳಗಿನ ಸಣ್ಣ ಪ್ರತಿಭೆಯೂ ಮುಂದೊಂದು ದಿನ ಹೆಮ್ಮರವಾಗುವುದು. ವಿದ್ಯಾರ್ಥಿ ಜೀವನಲ್ಲಿನ ಪಠ್ಯೇತರ ಚಟುವಟಿಕೆಗಳು ಪ್ರತಿಭಾ ಅನಾವರಣಕ್ಕಿರುವ ಬಹುದೊಡ್ಡ ವೇದಿಕೆ ಎಂದು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಧನ್ಯ ಕುಮಾರ್ ಅಭಿಪ್ರಾಯಪಟ್ಟರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಕಾಲೇಜಿನ ಸಮ್ಯಗ್ದರ್ಶನ ಸಭಾಂಗಣದಲ್ಲಿ ಆಯೋಜಿಸಿದ್ದ ‘ರಾಜ್ಯ ರಂಗ’ ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ಎಸ್.ಡಿ.ಎಂ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗಾಗಿ ನಾನ ರೀತಿಯ ವ್ಯವಸ್ಥೆಗಳನ್ನು ಕಲ್ಪಿಸಿಕೊಟ್ಟಿದೆ. ಮನುಷ್ಯನ ಸರ್ವತೋಮುಖ ಬೆಳವಣಿಗೆಗೆ ಶಿಕ್ಷಣ ಬಹುಮುಖ್ಯ. ಭವಿಷ್ಯವನ್ನು ಶಸಕ್ತಗೊಳಿಸಲು ವಿದ್ಯಾರ್ಥಿಗಳು ಜ್ಞಾನದ ಮೈಲಿಗಲ್ಲನ್ನು ಸ್ಥಾಪಿಸುವ ಜೊತೆಗೆ ಕೌಶಲ್ಯ ಭರಿತರಾಗಿ ರೂಪುಗೊಳ್ಳಬೇಕು. ಸವಾಲುಗಳನ್ನು ನಿವಾರಿಸುವ ನಾಯಕತ್ವ ಗುಣವನ್ನು ಬೆಳೆಸಿಕೊಂಡು ಉನ್ನತ ಮಟ್ಟದ ವ್ಯಕ್ತಿತ್ವವನ್ನು ನಮ್ಮದಾಗಿಸಿಕೊಳ್ಳಬೇಕು.

ಪ್ರತಿಯೊಂದು ಕ್ಷೇತ್ರವೂ ನಮ್ಮೊಳಗಿನ ಕೌಶಲ್ಯ ಮತ್ತು ಪ್ರತಿಭೆಯನ್ನು ನಿರೀಕ್ಷಿಸುತ್ತದೆ. ಆ ಹಾದಿಯಲ್ಲಿ ನಡೆದಾಗ ಅವಕಾಶಗಳು ತೆರೆದುಕೊಳ್ಳುತ್ತದೆ. ಆ ಅವಕಾಶಗಳು ಉತ್ತಮ ಉದ್ಯೋಗವನ್ನು ಕಂಡುಕೊಳ್ಳಲು ಸಹಕಾರಿಯಾಗುತ್ತದೆ ಎಂದು ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮವನ್ನು ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ನಟರಾಜ್ ಎಚ್ ಕೆ ಮಾತನಾಡಿ, ಕಾಲೇಜಿನಲ್ಲಿ ರಾಜ್ಯ ಶಾಸ್ತ್ರ ವಿಭಾಗದ ವತಿಯಿಂದ ಪ್ರತಿ ವರ್ಷವೂ ಮಾದರಿ ಸಂಸತ್ತಿನಂತಹ ವಿಶೇಷ ಪ್ರಾಯೋಗಿಕ ಚಟುವಟಿಕೆಗಳ ಜೊತೆಗೆ ಗ್ರಾಮ ಪಂಚಾಯತ್, ಆರಕ್ಷಕ ಠಾಣೆ, ನ್ಯಾಯಾಲಯ ಇತ್ಯಾದಿ ಸರ್ಕಾರಿ ಕಛೇರಿಗಳಿಗೆ ವಿದ್ಯಾರ್ಥಿ ಸಮೂಹದೊಂದಿಗೆ ಭೇಟಿ ಕೊಟ್ಟು ಪ್ರಾಯೋಗಿಕ ಅನುಭವವನ್ನು ನೀಡಲು ಅನುವು ಮಾಡಿಕೊಡಲಾಗಿದೆ. ಇಂತಹ ಪಠ್ಯೇತರ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಜ್ಞಾನದ ಜೊತೆಗೆ ಪ್ರಸ್ತುತ ವಿದ್ಯಮಾನಗಳನ್ನು ಅರಿತುಕೊಳ್ಳಲು ಸಹಕಾರಿಯಾಗಲಿದೆ ಎಂದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ರಚನೆಯ ‘ ರಾಜ್ಯ ರಂಗ – 2026’ ಭಿತ್ತಿ ಪತ್ರಿಕೆಮನ್ನು ಅನಾವರಣಗೊಳಿಸಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ವಿಭಾಗದ ಉಪನ್ಯಾಸಕ ಡಾ. ಶಿವಕುಮಾರ್ ಪಿ ಪಿ ಸೇರಿದಂತೆ ವಿದ್ಯಾರ್ಥಿ ನಾಯಕರು ಉಪಸ್ಥಿತರಿದ್ದರು. ವಿಭಾಗದ ಹೆಚ್ಚಿನ ವಿದ್ಯಾರ್ಥಿಗಳು ಸೇರಿದಂತೆ ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಭಾಗಿಯಾಗಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿ ತನು ಕೆ ಸಿ ಹೆಗ್ಡೆ ನಿರೂಪಿಸಿ, ವಂದಿಸಿದರು.

Related posts

ಬೆಳಾಲು ಅಯ್ಯಪ್ಪ ಭಕ್ತ ವೃಂದ ಸಮಿತಿ ರಚನೆ: ಅಧ್ಯಕ್ಷರಾಗಿ ಶ್ರೀನಿವಾಸ್ ಗೌಡ, ಕಾರ್ಯದರ್ಶಿಯಾಗಿ ಶಶಿಧರ್ ಆಚಾರ್ಯ ಆಯ್ಕೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸುರಕ್ಷಾ ಚೆಕ್ ವಿತರಣೆ

Suddi Udaya

ಪಟ್ರಮೆಯಲ್ಲಿ ಅನುಮಾನಸ್ಪದ ಸಾವಿಗೀಡಾದ ರಕ್ಷಿತಾ ಹಾಗೂ ಲಾವಣ್ಯ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಉಪವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ಸುರೇಶ ಗೌಡ್ರ ರವರಿಗೆ ಸನ್ಮಾನ

Suddi Udaya

ಉಜಿರೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಶ್ರೀ ಮಂಜುನಾಥ ಬನ್ನಿಸ್ ಟಂಟೋಲ’ ಘಟಕಕ್ಕೆ ಚಾಲನೆ

Suddi Udaya

ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ ನೋಂದಣಿ ಕಛೇರಿ ಉದ್ಘಾಟನೆ

Suddi Udaya
error: Content is protected !!