22.6 C
ಪುತ್ತೂರು, ಬೆಳ್ತಂಗಡಿ
September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್.ಡಿ.,ಎಂ ಪಿಯು ಕಾಲೇಜಿನಲ್ಲಿ ಲಿಂಗಸೂಕ್ಷ್ಮತೆ ಅರಿವು ತರಬೇತಿ ಕಾರ್ಯಕ್ರಮ

ಉಜಿರೆ: ‘ ಅನೇಕ ವಿದ್ಯಾರ್ಥಿಗಳು ಹದಿಹರೆಯದಲ್ಲಿ ವಿವಿಧ ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ಬಾಹ್ಯ ಆಕರ್ಷಣೆಗೆ ಒಳಗಾಗುತ್ತಿದ್ದಾರೆ. ಇಂತಹ ವಯಸ್ಸಿನಲ್ಲಿ ಸರಿಯಾದ ಮಾರ್ಗದರ್ಶನ ಪಡೆದುಕೊಂಡರೆ ಅನೇಕ ಅನಾಹುತಗಳನ್ನು ತಡೆಯಬಹುದು. ದೈಹಿಕ ಹಾಗೂ ಮಾನಸಿಕ ಆರೋಗ್ಯ ಅತಿ ಮುಖ್ಯ. ಅದಕ್ಕೆ ಇಂತಹ ಕಾರ್ಯಕ್ರಮ ಸಹಕಾರಿ ‘ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ. ಇವರು ನುಡಿದರು.

ಇವರು ಕಾಲೇಜಿನ ಮಾನವ ಸಂಪನ್ಮೂಲ , ಮಹಿಳಾ ಅಭಿವೃದ್ಧಿ ಹಾಗೂ ವೃತ್ತಿಮಾರ್ಗದರ್ಶನ ಕೋಶಗಳ ವತಿಯಿಂದ ಎರಡು ದಿನಗಳಲ್ಲಿ ನಡೆಯುವ ಲಿಂಗಸೂಕ್ಷ್ಮತೆ ಅರಿವು ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಅಭ್ಯಾಗತರಾದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಹಾಗೂ ಸ್ನಾತ್ತಕೋತ್ತರ ಕಾಲೇಜಿನ ಮನಃಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ವಂದನಾ ಜೈನ್ ಅವರು ಮಾತನಾಡಿ ‘ ಹದಿಹರಯದ ಕಾಲದಲ್ಲಿ ಮಾನಸಿಕ ಹಾಗೂ ಸಾಮಾಜಿಕ ಹೊಣೆಗಾರಿಕೆ ಮುಖ್ಯ. ಈ ಸಂದರ್ಭದಲ್ಲಿ ಆಯಾ ಹೊಣೆಗಾರಿಕೆ ಅರಿತು ವ್ಯವಹರಿಸಬೇಕು ಎಂದು ಹೇಳಿದರು.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತ್ತಕೋತ್ತರ ಕಾಲೇಜಿನ ಮನಃಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಅಶ್ವಿನಿ ಕಾರಂತ್ ಉಪಸ್ಥಿತರಿದ್ದರು.


ಕಾಲೇಜಿನ ಮಾನವ ಸಂಪನ್ಮೂಲ , ಮಹಿಳಾ ಅಭಿವೃದ್ಧಿ ಹಾಗೂ ವೃತ್ತಿಮಾರ್ಗದರ್ಶನ ಕೋಶಗಳ ಸಂಚಾಲಕರಾದ ಡಾ.ಪ್ರಸನ್ನಕುಮಾರ ಐತಾಳ್ ಸ್ವಾಗತಿಸಿದರು. ಸದಸ್ಯರಾದ ಉಪನ್ಯಾಸಕಿ ಸ್ಮಿತಾ ಬೇಡೇಕರ್ ನಿರೂಪಿಸಿ , ಉಪನ್ಯಾಸಕಿ ಪಲ್ಲವಿ ವಂದಿಸಿದರು.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತ್ತಕೋತ್ತರ ಹಾಗೂ ಪದವಿ ಕಾಲೇಜಿನ ಮನಃಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಎಲ್ಲ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಲಿಂಗಸೂಕ್ಷ್ಮತೆ ಅರಿವು ತರಬೇತಿ ನೀಡಿದರು.

Related posts

ಅರಸಿನಮಕ್ಕಿ ಶ್ರೀಗೋಪಾಲಕೃಷ್ಣ ಹಿರಿಯ ಪ್ರಾಥಮಿಕ ಶಾಲಾ ಮಂತ್ರಿಮಂಡಲ ರಚನೆ

Suddi Udaya

ರಿಕ್ಷಾದಲ್ಲಿ ಬಿಟ್ಟು ಹೋದ ಬ್ಯಾಗ್ ನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ ನಾಗರಾಜ್ ಮರಕಡ

Suddi Udaya

ಶ್ರೀ.ಧ.ಮಂ. ಕಾಲೇಜಿನಲ್ಲಿ ‘ತೆರಿಗೆಯ ಮೂಲಭೂತ ಅಂಶಗಳು’ ಕುರಿತು ಅತಿಥಿ ಉಪನ್ಯಾಸ ಕಾರ್ಯಕ್ರಮ

Suddi Udaya

ಎಸ್‌ಡಿಯಂ ಇಂಜಿನಿಯರಿಂಗ್ ಕಾಲೇಜು: ಸ್ಟಾರ್ಟಅಪ್‌ಗಾಗಿ ಒಡಂಬಡಿಕೆ ಸಹಿ

Suddi Udaya

ಬೆಳ್ತಂಗಡಿ: ಹಸಿರು ಕ್ರಾಂತಿಯ ಹರಿಕಾರ ದಿ. ಡಾ. ಬಾಬು ಜಗಜೀವನ್ ರಾಮ್ ಜಯಂತಿ ಆಚರಣೆ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ

Suddi Udaya
error: Content is protected !!