24.6 C
ಪುತ್ತೂರು, ಬೆಳ್ತಂಗಡಿ
August 1, 2026
Uncategorized

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ವತಿಯಿಂದ ಆಟಿಡೊಂಜಿ ದಿನ

ಬೆಳ್ತಂಗಡಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಬೆಳ್ತಂಗಡಿ ಮತ್ತು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮವು ಆ. 1ರಂದು ಒಕ್ಕೂಟದ ಸಭಾಭವನದಲ್ಲಿ ಜರುಗಿತು.

ಬೆಳ್ತಂಗಡಿ ಡಿ.ವೈ.ಎಸ್ ಪಿ.ರೋಹಿಣಿ ಸಿಕೆ ಅವರು ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ವೇದಿಕೆಯಲ್ಲಿ ಬೆಳ್ತಂಗಡಿ ತಹಶೀಲ್ದಾರ್ ಎಸ್.ಎನ್. ನರಗುಂದ, ವಿಧಾನ ಪರಿಷತ್ ಮಾಜಿ ಸದಸ್ಯ ಪ್ರತಾಪ್ ಸಿಂಹ ನಾಯಕ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಬೆಳ್ತಂಗಡಿ ಇದರ ಸಿ.ಡಿ.ಪಿ.ಒ. ಪ್ರೀಯಾ ಆಗ್ನೇಸ್, ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ ಅಧ್ಯಕ್ಷೆ ಉಮಾ ಆರ್ ರಾವ್, ತಾಲೂಕು ಮಹಿಳಾ ಒಕ್ಕೂಟದ ಮಹಾ ಪೋಷಕರಾದ ಲೋಕೇಶ್ವರಿ ವಿನಯಚಂದ್ರ, ಒಕ್ಕೂಟದ ಕಾರ್ಯದರ್ಶಿ ಶಾಂತ ಬಂಗೇರ ಉಪಸ್ಥಿತರಿದ್ದರು.

ಒಕ್ಕೂಟದ ಸದಸ್ಯರಾದ ಸಂಧ್ಯಾ ಪಾಳಂದೆ ಪ್ರಾರ್ಥಿಸಿದರು. ಒಕ್ಕೂಟದ ನಿರ್ದೇಶಕರಾದ ನೇತ್ರಾ ಅಶೋಕ್ ಸ್ವಾಗತಿಸಿದರು. ಲೋಕೇಶ್ವರಿ ವಿನಯಚಂದ್ರ ಪ್ರಸ್ತಾವಿಸಿದರು. ವೀಣಾ ರವರು 33 ಖಾದ್ಯಗಳ ಪಟ್ಟಿಯನ್ನು ತಿಳಿಸಿದರು. ಕಾರ್ಯಕ್ರಮವನ್ನು ಉಷಾ ಲಕ್ಷಣ ಗೌಡ ನಿರೂಪಿಸಿದರು.

Related posts

ಚಾರ್ಮಾಡಿ : ಬಂಟ್ವಾಳ ಗ್ರಾಮದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಯಕ್ಷಾಶ್ರಯ ಯೋಜನೆ ಅಡಿಯಲ್ಲಿ ಗುರುವಾಯನಕೆರೆ ದೇವಿಪ್ರಸಾದ್ ಆಚಾರ್ಯರಿಗೆ ಮನೆ ಹಸ್ತಾಂತರ

Suddi Udaya

ಧರ್ಮಸ್ಥಳ: 26ನೇ ವರ್ಷದ ‘ಭಜನಾ ತರಬೇತಿ ಕಮ್ಮಟ’ ಕಾರ್ಯಾಗಾರದ ಉಪನ್ಯಾಸ ಸರಣಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕ ಹುದ್ದೆಗಾಗಿ ಉರ್ದು ಭಾಷೆ ಕಡ್ಡಾಯ ರದ್ದುಗೊಳಿಸುವಂತೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ತಹಶೀಲ್ದಾರರಿಗೆ ಮನವಿ

Suddi Udaya

ಸಾಮಾಜಿಕ ಮತ್ತು ಆಧ್ಯಾತ್ಮಿಕ ಸೇವೆಗಾಗಿ ಲ| ಬಿ.ಕೆ ವಿಶ್ವನಾಥ ಆರ್. ನಾಯಕ್‌ರಿಗೆ ಡಾಕ್ಟರೇಟ್ ಪದವಿ

Suddi Udaya

ಸ್ವಚ್ಛತಾ ಕೀ ಸೇವಾ ಆಂದೋಲನ

Suddi Udaya
error: Content is protected !!