22.6 C
ಪುತ್ತೂರು, ಬೆಳ್ತಂಗಡಿ
September 16, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್‌.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದ ನೂತನ ಪ್ರಾಂಶುಪಾಲರಾಗಿ ಡಾ. ಸಂದೀಪ್ ಆರ್. ಅಧಿಕಾರ ಸ್ವೀಕಾರ

ಉಜಿರೆ,ದಿ. : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ನೂತನ ಪ್ರಾಂಶುಪಾಲರಾಗಿ ಎರಡು ದಶಕಗಳಿಗೂ ಹೆಚ್ಚಿನ ಬೋಧನಾ, ಸಂಶೋಧನೆ ಹಾಗೂ ಶೈಕ್ಷಣಿಕ ಆಡಳಿತದ ಅನುಭವ ಹೊಂದಿರುವ, ಕಾಲೇಜಿನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ಸಂದೀಪ್ ಆರ್. ಅವರು ಅಧಿಕಾರ ಸ್ವೀಕರಿಸಿದರು.

ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿಗಳಾದ ಡಾ. ಡಿ. ಹರ್ಷೇಂದ್ರ ಕುಮಾರ್ ಕಾರ್ಯದರ್ಶಿಗಳಾದ ಡಾ. ಸತೀಶ್ಚಂದ್ರ ಎಸ್. ಮತ್ತು ಕಾಲೇಜಿನ ಆಡಳಿತ ಮಂಡಳಿಯ ಸಮ್ಮುಖದಲ್ಲಿ ನೂತನ ಅಧಿಕಾರ ವಹಿಸಿಕೊಟ್ಟು, ಅವರ ಶೈಕ್ಷಣಿಕ ಸಾಧನೆ, ಸಂಶೋಧನಾ ದೃಷ್ಟಿಕೋನ ಹಾಗೂ ಆಡಳಿತಾತ್ಮಕ ಅನುಭವವು ಸಂಸ್ಥೆಯ ಶೈಕ್ಷಣಿಕ ಬೆಳವಣಿಗೆ ಹಾಗೂ
ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಗೆ ಹೊಸ ಚೈತನ್ಯ ನೀಡಲಿದೆ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಐಟಿ ಮತ್ತು ಹಾಸ್ಟೆಲ್ ಆಡಳಿತ ವಿಭಾಗದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪೂರನ್ ವರ್ಮ, ಶೈಕ್ಷಣಿಕ ಸಂಯೋಜಕರಾದ ಪ್ರೋ. ಶಶಿಶೇಖರ್ ಎನ್ ಕಾಕತ್ಕಾರ್ ಹಾಗು ಈ ಹಿಂದಿನ ಪ್ರಾಂಶುಪಾಲರಾದ ಡಾ. ಅಶೋಕ್ ಟಿ ಸೇರಿದಂತೆ ಕಾಲೇಜಿನ ಆಡಳಿತ ಮಂಡಳಿಯ ಇತರೆ ಸದಸ್ಯರು ಉಪಸ್ಥಿತರಿದ್ದರು.

ಡಾ. ಸಂದೀಪ್ ಆರ್. ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್‌ನಲ್ಲಿ ಬಿ.ಇ., ಎಲೆಕ್ಟ್ರಾನಿಕ್ಸ್‌ನಲ್ಲಿ ಎಂ.ಟೆಕ್. ಹಾಗೂ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಗುವಾಹಟಿಯಿಂದ Perceptual Video Hashing ವಿಷಯದಲ್ಲಿ ಪಿಎಚ್.ಡಿ. ಪದವಿ ಪಡೆದಿದ್ದಾರೆ. ವಿಡಿಯೋ ಭದ್ರತೆ (Video Security), ಡಿಜಿಟಲ್ ವಾಟರ್‌ಮಾರ್ಕಿಂಗ್ (Digital Watermarking) ಹಾಗೂ ಬಯೋಮೆಟ್ರಿಕ್ ದೃಢೀಕರಣ (Biometric Authentication) ಕ್ಷೇತ್ರಗಳಲ್ಲಿ ವಿಶೇಷ ಪರಿಣತಿ ಹೊಂದಿರುವ ಡಾ. ಸಂದೀಪ್ ಆರ್. ಅವರು ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಖ್ಯಾತಿಯ ಸಂಶೋಧನಾ ಜರ್ನಲ್‌ಗಳು ಮತ್ತು ಸಮ್ಮೇಳನಗಳಲ್ಲಿ ಹಲವಾರು ಸಂಶೋಧನಾ ಲೇಖನಗಳನ್ನು ಪ್ರಕಟಿಸಿದ್ದಾರೆ.

ಇದೇ ಸಂದರ್ಭದಲ್ಲಿ ಮಹಾವಿದ್ಯಾಲಯದ ವಿವಿಧ ವಿಭಾಗಗಳ ಮುಖ್ಯಸ್ಥರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ನೂತನ ಪ್ರಾಂಶುಪಾಲರನ್ನು ಸ್ವಾಗತಿಸಿ ಶುಭ ಕೋರಿದರು.

ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಡಾ. ಸಂದೀಪ್ ಆರ್. ಅವರು, ವಿದ್ಯಾರ್ಥಿ ಕೇಂದ್ರಿತ ಶಿಕ್ಷಣ, ಗುಣಮಟ್ಟದ ಬೋಧನೆ, ಸಂಶೋಧನೆ, ನವೋದ್ಯಮ, ಕೈಗಾರಿಕಾ ಸಹಭಾಗಿತ್ವ, ಮೌಲ್ಯಾಧಾರಿತ ಶಿಕ್ಷಣ ಹಾಗೂ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದ ಶೈಕ್ಷಣಿಕ ಉತ್ಕೃಷ್ಟತೆಗೆ ಹೆಚ್ಚಿನ ಆದ್ಯತೆ ನೀಡಿ, ಎಲ್ಲರ ಸಹಕಾರದೊಂದಿಗೆ ಎಸ್‌.ಡಿ.ಎಂ. ತಾಂತ್ರಿಕ ಮಹಾವಿದ್ಯಾಲಯವನ್ನು ಮನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲು ಬದ್ಧನಾಗಿರುವುದಾಗಿ ತಿಳಿಸಿದರು.

Related posts

ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಆಗಮಿಸಿದ ಅತಿಥಿ ತನ್ವೀರ್ ಅಹಮ್ಮದ್ ಉಲ್ಲಾ ಅವರಿಗೆ ರಸ್ತೆಯುದ್ದಕ್ಕೂ ಭವ್ಯ ಸ್ವಾಗತ

Suddi Udaya

ಸರಕಾರಿ ನೌಕರರ ಜಿಲ್ಲಾ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆ: ಹೇಮಚಂದ್ರರಿಗೆ ಪ್ರಥಮ ಸ್ಥಾನ

Suddi Udaya

ಸುಲ್ಕೇರಿಮೊಗ್ರು ನಾಯಿಜೆ ಚಂದಯ್ಯ ಮಡಿವಾಳ ಮನೆಯ ಹತ್ತಿರ ಭಾರಿ ಮಳೆಗೆ ಗುಡ್ಡ ಕುಸಿತ

Suddi Udaya

ಬೆಳ್ತಂಗಡಿ ಜೆಸಿ ಸಪ್ತಾಹದಲ್ಲಿ ಡ್ರೀಮ್ ಡೀಲ್ ಗ್ರೂಪ್ ಎಂಡಿ ಮಹಮ್ಮದ್ ಸುಹೈಲ್‌ರವರಿಗೆ ಸನ್ಮಾನ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಪುದುವೆಟ್ಟು: ಶ್ರೀಮತಿ ಯಶೋದಾ ನಿಧನ

Suddi Udaya
error: Content is protected !!