September 17, 2026
ಕರಾವಳಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭಾರೀ ಮಳೆ ಹಿನ್ನೆಲೆ: ನಾಳೆ(ಆ.3) ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ತುರ್ತು ಸಭೆ

ಬೆಳ್ತಂಗಡಿ ತಾಲೂಕಿನಾದ್ಯಂತ ಕಳೆದ 48 ಗಂಟೆಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದ ಸಾರ್ವಜನಿಕರ ಜನಜೀವನ, ರಸ್ತೆ ಸಂಪರ್ಕ, ಸರ್ಕಾರಿ ಮೂಲಸೌಕರ್ಯ ಹಾಗೂ ಸಾರ್ವಜನಿಕ ಮತ್ತು ಖಾಸಗಿ ಆಸ್ತಿಪಾಸ್ತಿಗಳಿಗೆ ಹಾನಿಯಾಗುತ್ತಿರುವ ಹಿನ್ನೆಲೆಯಲ್ಲಿ, ಶಾಸಕ ಶ್ರೀ ಹರೀಶ್ ಪೂಂಜ ಅವರ ಅಧ್ಯಕ್ಷತೆಯಲ್ಲಿ ಆಗಸ್ಟ್ 3ರಂದು ತುರ್ತು ಸಭೆ ನಡೆಯಲಿದೆ.

ಆಗಸ್ಟ್ 3, 2026ರಂದು ಬೆಳಿಗ್ಗೆ 10.30 ಗಂಟೆಗೆ ಬೆಳ್ತಂಗಡಿ ತಾಲೂಕು ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಸಭೆ ನಡೆಯಲಿದ್ದು, ಮಳೆಯಿಂದ ಉಂಟಾಗಿರುವ ಪರಿಸ್ಥಿತಿಯ ಸಮಗ್ರ ಪರಿಶೀಲನೆ ನಡೆಸಿ, ಮುನ್ನೆಚ್ಚರಿಕೆ ಕ್ರಮಗಳು, ರಕ್ಷಣಾ ಕಾರ್ಯಾಚರಣೆ, ಪರಿಹಾರ ವ್ಯವಸ್ಥೆ ಹಾಗೂ ವಿವಿಧ ಇಲಾಖೆಗಳ ನಡುವಿನ ಸಮನ್ವಯ ಕುರಿತು ಚರ್ಚಿಸಿ ಅಗತ್ಯ ನಿರ್ದೇಶನಗಳನ್ನು ನೀಡಲಾಗುವುದು.

ಈ ಸಭೆಗೆ ತಾಲೂಕು ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು, ಗ್ರಾಮ ಪಂಚಾಯಿತಿಗಳ ಆಡಳಿತಾಧಿಕಾರಿಗಳು, ಟಾಸ್ಕ್ ಫೋರ್ಸ್ ತಂಡಗಳ ಮುಖ್ಯಸ್ಥರು, ರೋವರ್ಸ್ ಮತ್ತು ರೇಂಜರ್ಸ್, ಎನ್‌ಸಿಸಿ, ಎನ್‌ಎಸ್‌ಎಸ್, ಶೌರ್ಯ ವಿಪತ್ತು ನಿರ್ವಹಣಾ ತಂಡ ಸೇರಿದಂತೆ ವಿಪತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲ ತಂಡಗಳ ಮುಖ್ಯಸ್ಥರು ಕಡ್ಡಾಯವಾಗಿ ಹಾಜರಾಗುವಂತೆ ಸೂಚಿಸಲಾಗಿದೆ.

ಅಲ್ಲದೆ, ದೃಶ್ಯ ಹಾಗೂ ಮುದ್ರಣ ಮಾಧ್ಯಮಗಳ ಪ್ರತಿನಿಧಿಗಳಿಗೂ ಸಭೆಯಲ್ಲಿ ಭಾಗವಹಿಸುವಂತೆ ಆಹ್ವಾನಿಸಲಾಗಿದ್ದು, ಭಾರೀ ಮಳೆಯ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಅಗತ್ಯ ಸಮನ್ವಯ ಮತ್ತು ತ್ವರಿತ ಕ್ರಮಗಳ ಕುರಿತು ಮಹತ್ವದ ಚರ್ಚೆ ನಡೆಯಲಿದೆ ಎಂದು ಶಾಸಕ ಹರೀಶ್ ಪೂಂಜ ಅವರ ಕಚೇರಿ ಶ್ರಮಿಕ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವತಿಯಿಂದ ಶಾಸಕರಿಗೆ ಅಭಿನಂದನೆ

Suddi Udaya

ಸೋಮಂತಡ್ಕ: ನಿಯಂತ್ರಣ ತಪ್ಪಿ ಚರಂಡಿಗೆ ಗುದ್ದಿದ ಕೆಎಸ್ಆರ್ ಟಿಸಿ ಬಸ್

Suddi Udaya

ಎ. 17-20: ಬಂದಾರು ಬಟ್ಲಡ್ಕ ಜಮಾಅತ್ ನಲ್ಲಿ ಉರೂಸ್ ಕಾರ್ಯಕ್ರಮ

Suddi Udaya

ಮೊಗ್ರು: ಅಲೆಕ್ಕಿ ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಇದರ ಬೆಳ್ಳಿಹಬ್ಬದ ಪ್ರಯುಕ್ತ ರಜತ ಮಹೋತ್ಸವ ಪ್ರತಿಬಿಂಬ ವಿಜ್ಞಾಪನ ಪತ್ರ ಬಿಡುಗಡೆ

Suddi Udaya

ಮಲೆಂಗಲ್ಲು ಬ್ರಹ್ಮಕಲಶೋತ್ಸವ-ಧಾರ್ಮಿಕ ಸಭಾ ಕಾರ್ಯಕ್ರಮ: ಶ್ರದ್ಧಾ ಭಕ್ತಿಯಿಂದ ಭಗವಂತನನ್ನು ಆರಾಧಿಸಿ – ಶ್ರೀ ಡಾ.ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು

Suddi Udaya

ಫೆ.6 : ನಡ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!