September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯವರದಿ

ಆನೆದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಗೌಡರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ ಕುಟುಂಬಸ್ಥರಿಗೆ ಸಾಂತ್ವನ – ಪರಿಹಾರ ಧನದ ಚೆಕ್ ಹಸ್ತಾಂತರ

ಬೆಳ್ತಂಗಡಿ: ತಾಲೂಕಿನ ರೆಖ್ಯಾ ಗ್ರಾಮದ ಕೃಷಿ ಕಾರ್ಮಿಕರಾದ ಬಾಲಕೃಷ್ಣ ಗೌಡ ಅವರು ಆ.1ರಂದು ರಾತ್ರಿ ನಡೆದ ಕಾಡಾನೆ ದಾಳಿಯಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ, ಶಾಸಕ ಹರೀಶ್ ಪೂಂಜ ಅವರು ಇಂದು ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಮೃತರ ಕುಟುಂಬಕ್ಕೆ ಸರ್ಕಾರದ ವತಿಯಿಂದ ಒಟ್ಟು ರೂ.20 ಲಕ್ಷ ಪರಿಹಾರವನ್ನು ಮಂಜೂರು ಮಾಡುವ ಕುರಿತು ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸ್ಥಳದಲ್ಲೇ ಚರ್ಚಿಸಿ, ಪ್ರಥಮ ಹಂತವಾಗಿ ರೂ.5 ಲಕ್ಷ ಪರಿಹಾರ ಧನದ ಚೆಕ್ ಅನ್ನು ಕುಟುಂಬದ ಸದಸ್ಯರಿಗೆ ಹಸ್ತಾಂತರಿಸಲಾಯಿತು. ಉಳಿದ ರೂ.15 ಲಕ್ಷ ಪರಿಹಾರವನ್ನು ನೇರವಾಗಿ ಮೃತರ ವಾರೀಸುದಾರರ ಬ್ಯಾಂಕ್ ಖಾತೆಗೆ ಜಮಾ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಶಾಸಕ ಹರೀಶ್ ಪೂಂಜ ಅವರು ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ (DFO) ರವಿಶಂಕ‌ರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ACF) ಸುಬ್ಬಯ್ಯ ನಾಯ್ಕ ವಲಯ ಅರಣ್ಯಾಧಿಕಾರಿ (RFO), ತಹಶೀಲ್ದಾರ್ ಎಸ್‌.ಎನ್. ನರಗುಂದ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.ಮೃತ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಅಗತ್ಯವಿರುವ ಎಲ್ಲಾ ಸರ್ಕಾರಿ ನೆರವು ಮತ್ತು ಸೌಲಭ್ಯಗಳನ್ನು ತ್ವರಿತವಾಗಿ ಒದಗಿಸುವಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಶಾಸಕ ಹರೀಶ್ ಪೂಂಜ ಅವರು ನಿರ್ದೇಶನ ನೀಡಿದರು.

ಭಾನುವಾರ ಘಟನಾ ಸ್ಥಳಕ್ಕೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ಬಯ್ಯ ನಾಯ್ಕ, ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಎಚ್.ಪಿ., ಉಪವಲಯ ಅರಣ್ಯಾಧಿಕಾರಿಗಳು, ಧರ್ಮಸ್ಥಳ ಪೊಲೀಸ್‌ ಸಬ್ ಇನ್‌ಸ್ಪೆಕ್ಟರ್ ಸಮರ್ಥ ಗಾಣಿಗೇರ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅರಸಿನಮಕ್ಕಿ-ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಅವಿನಾಶ್ ಭಿಡೆ, ರಮೇಶ್ ಬೈರಕಟ್ಟ ಹಾಗೂ ಸದಸ್ಯರು ಹಾಗೂ ಸ್ಥಳೀಯ ಸಾರ್ವಜನಿಕರು ಶೋಧ ಕಾರ್ಯದಲ್ಲಿ ಭಾಗಿಯಾಗಿದ್ದರು. ಮೃತದೇಹವನ್ನು ಸ್ಥಳದಲ್ಲೇ ಮಹಜರು ನಡೆಸಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಯಿತು. ಘಟನೆ ಕುರಿತು ಅರಣ್ಯ ಇಲಾಖೆ ಹಾಗೂ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಬಳಿಕ ಸ್ಥಳಕ್ಕೆ ಶಾಸಕರು ಭೇಟಿ ನೀಡಿ ಮೃತ ಬಾಲಕೃಷ್ಣ ಗೌಡ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಡಿಎಫ್‌ಒ ರವಿಶಂಕ‌ರ್, ಎಸಿಎಫ್ ಸುಬ್ಬಯ್ಯ ನಾಯ್ಕ, ಆರ್‌ಎಫ್‌ಒ ರಾಘವೇಂದ್ರ, ಫಾರೆಸ್ಟ‌ರ್ ಯತೀಂದ್ರ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ, ಸ್ಥಳೀಯ ಮುಖಂಡರಾದ ಬೇಬಿ ಕಿರಣ್, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನವೀನ್ ರೆಖ್ಯ, ಚೇತನ್ ಕೊಳೆಚ್ಚಾವು, ತಹಸೀಲ್ದಾ‌ರ್ ಎಸ್‌.ಎನ್‌. ನರಗುಂದ, ಗ್ರಾಮ ಆಡಳಿತಾಧಿಕಾರಿ ವಿಜೇತ್ ಹಾಗೂ ಪಿಡಿಒ ರಾಘವೇಂದ್ರ ಗೌಡ ಉಪಸ್ಥಿತರಿದ್ದರು.

Related posts

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಭಾಷಾ ಕೈ ಬರಹದ ತರಬೇತಿ ಕಾರ್ಯಾಗಾರ

Suddi Udaya

ಅಳದಂಗಡಿ ಅರಮನೆಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ

Suddi Udaya

ಬೆಳ್ತಂಗಡಿ : ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ

Suddi Udaya

ಮಾಲಾಡಿಯಲ್ಲಿ ಹಿಂದೂ ರುದ್ರಭೂಮಿ ಲೋಕಾರ್ಪಣೆ

Suddi Udaya

ಕಿಡ್ನಿ ಹಾಗೂ ಲಿವರ್ ಸಮಸ್ಯೆಯಿಂದ ಬಳಲುತ್ತಿರುವ ನಾವೂರಿನ ಯಶೋಧಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಬೆಳ್ತಂಗಡಿ ಕೂಟ ಮಹಾ ಜಗತ್ತು ಮಹಿಳಾ ವೇದಿಕೆಯ ನೇತೃತ್ವದಲ್ಲಿ ಆಟಿ ಕೂಟ

Suddi Udaya
error: Content is protected !!