September 17, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಭಾರೀ ಮಳೆ ಹಿನ್ನೆಲೆ: ನಾಳೆ(ಆ. 3)ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ತುರ್ತು ಸಭೆ

ಬೆಳ್ತಂಗಡಿ ತಾಲೂಕಿನಾದ್ಯಂತ ಕಳೆದ 48 ಗಂಟೆಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದ ಸಾರ್ವಜನಿಕರ ಜನಜೀವನ, ರಸ್ತೆ ಸಂಪರ್ಕ, ಸರ್ಕಾರಿ ಮೂಲಸೌಕರ್ಯ ಹಾಗೂ ಸಾರ್ವಜನಿಕ ಮತ್ತು ಖಾಸಗಿ ಆಸ್ತಿಪಾಸ್ತಿಗಳಿಗೆ ಹಾನಿಯಾಗುತ್ತಿರುವ ಹಿನ್ನೆಲೆಯಲ್ಲಿ, ಶಾಸಕ ಹರೀಶ್ ಪೂಂಜ ಅವರ ಅಧ್ಯಕ್ಷತೆಯಲ್ಲಿ ಆಗಸ್ಟ್ 3ರಂದು ತುರ್ತು ಸಭೆ ನಡೆಯಲಿದೆ.

ಆಗಸ್ಟ್ 3, 2026ರಂದು ಬೆಳಿಗ್ಗೆ 10.30 ಗಂಟೆಗೆ ಬೆಳ್ತಂಗಡಿ ತಾಲೂಕು ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಸಭೆ ನಡೆಯಲಿದ್ದು, ಮಳೆಯಿಂದ ಉಂಟಾಗಿರುವ ಪರಿಸ್ಥಿತಿಯ ಸಮಗ್ರ ಪರಿಶೀಲನೆ ನಡೆಸಿ, ಮುನ್ನೆಚ್ಚರಿಕೆ ಕ್ರಮಗಳು, ರಕ್ಷಣಾ ಕಾರ್ಯಾಚರಣೆ, ಪರಿಹಾರ ವ್ಯವಸ್ಥೆ ಹಾಗೂ ವಿವಿಧ ಇಲಾಖೆಗಳ ನಡುವಿನ ಸಮನ್ವಯ ಕುರಿತು ಚರ್ಚಿಸಿ ಅಗತ್ಯ ನಿರ್ದೇಶನಗಳನ್ನು ನೀಡಲಾಗುವುದು.

ಈ ಸಭೆಗೆ ತಾಲೂಕು ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು, ಗ್ರಾಮ ಪಂಚಾಯಿತಿಗಳ ಆಡಳಿತಾಧಿಕಾರಿಗಳು, ಟಾಸ್ಕ್ ಫೋರ್ಸ್ ತಂಡಗಳ ಮುಖ್ಯಸ್ಥರು, ರೋವರ್ಸ್ ಮತ್ತು ರೇಂಜರ್ಸ್, ಎನ್‌ಸಿಸಿ, ಎನ್‌ಎಸ್‌ಎಸ್, ಶೌರ್ಯ ವಿಪತ್ತು ನಿರ್ವಹಣಾ ತಂಡ ಸೇರಿದಂತೆ ವಿಪತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲ ತಂಡಗಳ ಮುಖ್ಯಸ್ಥರು ಕಡ್ಡಾಯವಾಗಿ ಹಾಜರಾಗುವಂತೆ ಸೂಚಿಸಲಾಗಿದೆ. ಅಲ್ಲದೆ, ದೃಶ್ಯ ಹಾಗೂ ಮುದ್ರಣ ಮಾಧ್ಯಮಗಳ ಪ್ರತಿನಿಧಿಗಳಿಗೂ ಸಭೆಯಲ್ಲಿ ಭಾಗವಹಿಸುವಂತೆ ಆಹ್ವಾನಿಸಲಾಗಿದ್ದು, ಭಾರೀ ಮಳೆಯ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಅಗತ್ಯ ಸಮನ್ವಯ ಮತ್ತು ತ್ವರಿತ ಕ್ರಮಗಳ ಕುರಿತು ಮಹತ್ವದ ಚರ್ಚೆ ನಡೆಯಲಿದೆ ಎಂದು ಶಾಸಕ ಹರೀಶ್ ಪೂಂಜ ಅವರ ಕಚೇರಿ ಶ್ರಮಿಕ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಸತ್ಯದ ಮುಂದೆ ತಲೆಬಾಗಿದ ಕೇಂದ್ರ ಸರ್ಕಾರ – ಧರ್ಮೇಂದ್ರ ಪ್ರಧಾನ ರಾಜೀನಾಮೆ ನೈತಿಕ ಹೊಣೆಗಾರಿಕೆಯ ಒಪ್ಪಿಗೆ- ರಕ್ಷಿತ್ ಶಿವರಾಂ

Suddi Udaya

ಶಿಶು ವೈದ್ಯೆ ಡಾ.ಶಿಲ್ಪಾ ಹೆಗ್ಡೆ ನೇತೃತ್ವದ ಮಕ್ಕಳ ಸ್ನೇಹಿ‌ ಕಲರವ ಸೆಂಟರ್ ಬೆಳ್ತಂಗಡಿಯಲ್ಲಿ ಪ್ರಾರಂಭ

Suddi Udaya

ಬಾರ್ಯ : ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಶ್ರೀ ಗಣೇಶ ಭಜನಾ ಮಂಡಳಿ ಕುಪ್ಪೆಟ್ಟಿ, ಶ್ರೀ ದುರ್ಗಾ ಗಣೇಶ ಮಾತೃ ಮಂಡಳಿ ಮತ್ತು ಕಟ್ಟಡ ಅಭಿವೃದ್ಧಿ ಸಮಿತಿ ಕುಪ್ಪೆಟ್ಟಿ ವತಿಯಿಂದ 37ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಎಸ್ ಕೆ ಎಸ್ ಎಸ್ ಎಫ್ ಕಕ್ಕಿಂಜೆ ಶಾಖೆಯಿಂದ ಕನ್ನಡ ರಾಜ್ಯೋತ್ಸವ ಆಚರಣೆ: ಮಾದಕ ವ್ಯಸನ ಮುಕ್ತ ಪ್ರತಿಜ್ಞಾ ವಿಧಿ ಸ್ವೀಕಾರ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಗೆ ರಾಜ್ಯಮಟ್ಟದ ಪ್ರಾಜೆಕ್ಟ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya
error: Content is protected !!