September 16, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿಸಮಸ್ಯೆ

ರೆಖ್ಯದಲ್ಲಿ ಕಾಡಾನೆ ದಾಳಿ: ಇಡ್ಮಾಲು ನಿವಾಸಿ ಬಾಲಕೃಷ್ಣ ಗೌಡ ಬಲಿ

ರೆಖ್ಯ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ನೇಲಡ್ಕ ಸಮೀಪದ ಮುಚ್ಚಿರಡ್ಕ ಎಂಬಲ್ಲಿ ಕಾಡಾನೆ ದಾಳಿಗೆ ಓರ್ವ ವ್ಯಕ್ತಿ ಮೃತಪಟ್ಟ ದಾರುಣ ಘಟನೆ ಶನಿವಾರ ಸಂಜೆ ಸಂಭವಿಸಿದೆ. ಮೃತರನ್ನು ಇಡ್ಮಾಲು ನಿವಾಸಿ ಬಾಲಕೃಷ್ಣ ಗೌಡ (55) ಎಂದು ಗುರುತಿಸಲಾಗಿದೆ.

ಬಾಲಕೃಷ್ಣ ಗೌಡ ಅವರು ಎಂದಿನಂತೆ ದಿನಗೂಲಿ ಕೆಲಸಕ್ಕೆ ತೆರಳಿದ್ದು, ಕೆಲಸ ಮುಗಿಸಿ ಸಂಜೆ ಮನೆಗೆ ಮರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಸಂಜೆ ಆದರೂ ಅವರು ಮನೆಗೆ ಬಾರದ ಹಿನ್ನೆಲೆಯಲ್ಲಿ ಮನೆಯವರು ಹಾಗೂ ಸ್ಥಳೀಯರು ಹುಡುಕಾಟ ಆರಂಭಿಸಿದ್ದರು.

Oplus_131072

ಈ ವೇಳೆ ಅವರು ಧರಿಸಿದ್ದ ಪ್ಲಾಸ್ಟಿಕ್ ರೈನ್‌ಕೋಟ್ ದಾರಿಯ ಮಧ್ಯೆ ಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅದರ ಸಮೀಪದಲ್ಲೇ ಕಾಡಾನೆಯ ಹೆಜ್ಜೆ ಗುರುತುಗಳು ಕಂಡುಬಂದಿದ್ದವು. ಇದರಿಂದ ಕಾಡಾನೆ ದಾಳಿ ನಡೆಸಿರಬಹುದೆಂಬ ಅನುಮಾನ ವ್ಯಕ್ತವಾಗಿತ್ತು.

Oplus_131072

ಅನುಮಾನದ ಮೇರೆಗೆ ಸ್ಥಳೀಯರು ಸುತ್ತಮುತ್ತ ಹುಡುಕಾಟ ನಡೆಸಿದಾಗ ಸಮೀಪದ ಕಣಿಯೊಂದರಲ್ಲಿ ಬಾಲಕೃಷ್ಣ ಗೌಡ ಅವರ ಮೃತದೇಹ ಪತ್ತೆಯಾಗಿದೆ. ಕಾಡಾನೆ ದಾಳಿಯಿಂದಲೇ ಅವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಭಾರತೀಯ ಸೈನ್ಯದ ಅಭ್ಯುದಯಕ್ಕಾಗಿ ಸೀಯಾಳಭಿಷೇಕದ ಮೂಲಕ ವಿಶೇಷ ಪ್ರಾರ್ಥನೆ

Suddi Udaya

ಬೆಳ್ತಂಗಡಿ: ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ, ಹೊಗೆ ರಹಿತ ವಾಹನ ನಿರ್ಮಲ ಪರಿಸರದ ಜೀವನ ಬಗ್ಗೆ ಕಾರ್ಯಕ್ರಮ

Suddi Udaya

ಬಂದಾರು: ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ: ಆರೋಪಿಗಳ ಬಂಧನ, ಸೊತ್ತುಗಳು ವಶಕ್ಕೆ

Suddi Udaya

ಅರಣ್ಯ ಇಲಾಖೆ ಸಹಯೋಗದಲ್ಲಿ ರೈನಾಥಾನ್ ತಂಡದಿಂದ ವನಮಹೋತ್ಸವ ಹಾಗೂ ಬಿತ್ತೋತ್ಸವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಜಯಲಕ್ಷ್ಮಿ ಲೇತ್ ಅಂಡ್ ಇಂಜಿನಿಯರಿಂಗ್ ವರ್ಕ್ ಶಾಪ್ ಪುನರಾರಂಭ

Suddi Udaya

ಕಳೆಂಜ ನಂದಗೋಕುಲ ಗೋಶಾಲೆ ವತಿಯಿಂದ ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಡಿ. ಪುಷ್ಪಗಿರಿ ರವರಿಗೆ ಗೌರವಾರ್ಪಣೆ

Suddi Udaya
error: Content is protected !!