25.2 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರೀ ಮಳೆ ಹಿನ್ನೆಲೆ: ಬೆಳ್ತಂಗಡಿ ತಾಲೂಕಿಗೆ ದ.ಕ. ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಭೇಟಿ

ಬೆಳ್ತಂಗಡಿ: ತಾಲೂಕಿನದ್ಯಾಂತ ಮಳೆ ಆರ್ಭಟ ಮುಂದುವರಿದಿದ್ದು ಆ. 1 ರಂದು ಸುರಿದ ಕುಂಭದ್ರೋಣ ಮಳೆಗೆ ತಾಲೂಕಿನ ನಾನಾ ಕಡೆಗಳಲ್ಲಿ ಸಂಪರ್ಕ ಕಡಿತ, ಗುಡ್ಡ ಜರಿತ, ತೋಟ, ಮನೆಗಳು ಜಲಾವೃತಗೊಂಡು ಹಾನಿಯಾದ ಹಿನ್ನಲೆ ದ.ಕ. ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಅವರು ಆ.3 ರಂದು ಬೆಳ್ತಂಗಡಿ ತಾಲೂಕಿನ ಲಾಯಿಲ ಮತ್ತು ಮುಂಡಾಜೆ ಗ್ರಾಮಗಳಿಗೆ ಭೇಟಿ ನೀಡಿದರು.

ಲಾಯಿಲ ಗ್ರಾಮದ ಪುತ್ರಬೈಲು ಹಾಗೂ ಗುರಿಂಗಾನ ಪರಿಸರದಲ್ಲಿ 17 ಮನೆಗಳಿಗೆ ನದಿ ನೀರುನುಗ್ಗಿತ್ತು, ಕಿಲ್ಲೂರು ರಸ್ತೆ ಜಲಾವೃತಗೊಂಡು ಸಂಪರ್ಕ ಕಡಿತಗೊಂಡಿತ್ತು. ಈ ಹಿನ್ನಲೆ ಸದ್ರಿ ಸ್ಥಳಕ್ಕೆ ಭೇಟಿ ನೀಡಿದ ಅವರು ಕಿಂಡಿ ಅಣೆಕಟ್ಟನ್ನು ಪರಿಶೀಲನೆ ನಡೆಸಿ ಅಧಿಕಾರಗಳೊಂದಿಗೆ ಮಾಹಿತಿ ಪಡೆದರು.

ದೇಶದಲ್ಲಿ ಅತೀ ಹೆಚ್ಚು ಮಳೆಯಾದ ಎರಡನೇ ಸ್ಥಳ ಮುಂಡಾಜೆ ಗ್ರಾಮಕ್ಕೆ ಭೇಟಿ ನೀಡಿ ಮಳೆಯಿಂದ ಹಾನಿಗೀಡಾದ ಪ್ರದೇಶವನ್ನು ಪರಿಶೀಲನೆ ನಡೆಸಿದರು.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಜೊತೆಯಲ್ಲಿ ಬೆಳ್ತಂಗಡಿ ತಹಶೀಲ್ದಾರ್ ಎಸ್.ಎನ್.ನರಗುಂದ, ಬೆಳ್ತಂಗಡಿ ತಾಲೂಕು ಪಂಚಾಯತ್ ಇಒ ಭವಾನಿಶಂಕರ್, ಬೆಳ್ತಂಗಡಿ ಕಂದಾಯ ನಿರೀಕ್ಷಕ ರಾಜು ಲಮಾಣಿ, ಲಾಯಿಲ ಪಿಡಿಒ ತಾರಾನಾಥ್ ನಾಯ್ಕ್, ಲಾಯಿಲ ಗ್ರಾಮ ಆಡಳಿತಾಧಿಕಾರಿ ರನಿತಾ, ಮುಂಡಾಜೆ ಪಿಡಿಒ ಗಾಯತ್ರಿ, ಇಂಜಿನಿಯರ್ ಸಂದೀಪ್, ಪಿ.ಆರ್.ಡಿ.ಇ. ನ ಎಇಇ ಜನಾರ್ಧನ್ ಹಾಗೂ ಮತ್ತಿತರ ಅಧಿಕಾರಿಗಳು ಭಾಗಿಯಾಗಿದ್ದರು.

Related posts

ಮುಹಿಯುದ್ದೀನ್ ಜುಮಾ ಮಸ್ಜಿದ್ ಹಳೆಪೇಟೆ ಉಜಿರೆ ಇದರ ನೂತನ ಅಧ್ಯಕ್ಷರಾಗಿ ಸಾಮಾಜಿಕ,ಶೈಕ್ಷಣಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಯುವ ಉದ್ಯಮಿ ಯು.ಹೆಚ್ ಅಬೂಬಕ್ಕರ್ ಆಯ್ಕೆ

Suddi Udaya

ಕಲ್ಮಂಜ ಬೆರ್ಕೆಯಲ್ಲಿ ಕೃಷಿ ತೋಟಕ್ಕೆ ಆನೆ ದಾಳಿ: ಅಪಾರ ಪ್ರಮಾಣ ಕೃಷಿ ನಾಶ

Suddi Udaya

ಜ.25: ಧರ್ಮಸ್ಥಳದಲ್ಲಿ ಶ್ರೀ ಶಿವಶಕ್ತಿ ಅಯ್ಯಂಗಾರ್ ಬೇಕರಿ ಶುಭಾರಂಭ

Suddi Udaya

ಕಟೀಲ್ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಾನಕ್ಕೆ ಗರ್ಡಾಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಿಂದ ಸುಮಾರು 30 ಭಕ್ತರಿಂದ ಪಾದಯಾತ್ರೆ

Suddi Udaya

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಮತ್ತು ರಾಜ ಕೇಸರಿ ಸಂಘಟನೆ ವತಿಯಿಂದ ಬೆಳ್ತಂಗಡಿ ಆಸ್ಪತ್ರೆಯ ಹೊರಾಂಗಣದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಕಾಂಗ್ರೆಸ್ ನ ಸಕ್ರೀಯ ಕಾರ್ಯಕರ್ತೆ ಸಾವಿತ್ರಿ ಬಿಜೆಪಿ ಸೇರ್ಪಡೆ

Suddi Udaya
error: Content is protected !!