30.4 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯಲ್ಲಿ ಆಟಿಡೊಂಜಿ ದಿನ ಆಚರಣೆ

ಉಜಿರೆ: ಮಿತ್ರ ಮಹಿಳಾ ಮಂಡಳಿ ಉಜಿರೆ ಹಾಗೂ ಮಿತ್ರ ಯುವಕ ಮಂಡಳಿ ಅರಳಿ, ಉಜಿರೆ ಇವರ ಜಂಟಿ ಆಶ್ರಯದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ ಆ 2ರಂದು ನಡೆಯಿತು.

ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲೀಕ ಮೋಹನ್ ಕುಮಾರ್ ಅಧ್ಯಕ್ಷತೆ ವಹಿಸಿ, ಸಾಂಪ್ರದಾಯಿಕ ಚೆನ್ನೆ ಮನೆ ಆಟ ಆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಇಂದಿನ ಮಕ್ಕಳು ಮತ್ತು ಯುವಜನತೆಗೆ ಸಂಸ್ಕಾರ ಹಾಗೂ ಸಂಸ್ಕೃತಿಯ ಪಾಠ ಮೊದಲು ಮನೆಯಿಂದಲೇ ದೊರೆಯಬೇಕು. ನಮ್ಮ ಪರಂಪರೆ, ಆಚಾರ-ವಿಚಾರ ಮತ್ತು ಗ್ರಾಮೀಣ ಕ್ರೀಡೆಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ಇಂತಹ ಕಾರ್ಯಕ್ರಮಗಳು ಹೊಸ ತಲೆಮಾರಿಗೆ ನಮ್ಮ ಸಂಸ್ಕೃತಿಯನ್ನು ಪರಿಚಯಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಹೇಳಿದರು.

ಮಿತ್ರ ಮಹಿಳಾ ಮಂಡಳಿಯ ಕಾರ್ಯದರ್ಶಿ ಪವಿತ್ರ ಸ್ವಾಗತಿಸಿದರು. ಆಟಿ ತಿಂಗಳ ವಿಶೇಷ ತಿಂಡಿ-ತಿನಿಸುಗಳ ಪ್ರದರ್ಶನ ಎಲ್ಲರ ಗಮನ ಸೆಳೆಯಿತು. ಕೆಸರುಗದ್ದೆ ಕ್ರೀಡಾಕೂಟ ಹಾಗೂ ವಿವಿಧ ಒಳಾಂಗಣ ಆಟಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಜಂಟಿ ಸಂಘಟನೆಯ ಅಧ್ಯಕ್ಷ ಅನಿಲ್ ಹಾಗೂ ಭಾಗೀರಥಿ ಶುಭ ಹಾರೈಸಿದರು. ಮಹಿಳಾ ಮಂಡಳಿಯ ಲೋಲಾಕ್ಷಿ ಕಾರ್ಯಕ್ರಮ ನಿರೂಪಿಸಿದರೆ, ಪ್ರತಿಮಾ ವಂದಿಸಿದರು.

Related posts

ಕರಾಯ ತ್ರಿವರ್ಣ ಸಂಗಮ ಆಟೋ ಚಾಲಕ ಮಾಲಕ ಸಂಘದ ಸಮಿತಿ ರಚನೆ: ಅಧ್ಯಕ್ಷರಾಗಿ ವೆಂಕಟೇಶ್ ಪೂಜಾರಿ ಅವಿರೋಧ ಆಯ್ಕೆ

Suddi Udaya

ತೆಲಂಗಾಣ ಚುನಾವಣಾ ವಾರ್ ರೂಮ್ ಸಂಯೋಜಕರಾಗಿ ರಕ್ಷಿತ್ ಶಿವರಾಂ ನೇಮಕ

Suddi Udaya

ಉರುವಾಲುಪದವು ಶ್ರೀ ಮಹಮ್ಮಾಯಿ ದೇವಸ್ಥಾನದ ಆಡಳಿತ ಸಮಿತಿ ಮತ್ತು ಸಂಘ-ಸಂಸ್ಥೆಗಳ ಜಂಟಿ ಸಭೆ

Suddi Udaya

ಬೆಳ್ತಂಗಡಿ ಕ್ಯಾಂಪ್ಕೋ ದಿಂದ ಸಹಾಯಧನ ಹಸ್ತಾಂತರ

Suddi Udaya

ಕುವೆಟ್ಟು: ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಮಹಾದ್ವಾರ ನಿರ್ಮಾಣಕ್ಕೆ ಶಂಕುಸ್ಥಾಪನೆ

Suddi Udaya

ಮಲವಂತಿಗೆ: ದಿಡುಪೆ ನಿವಾಸಿ ಶ್ರೀಮತಿ ಸಾವಿತ್ರಿ ಮರಾಠೆ ನಿಧನ

Suddi Udaya
error: Content is protected !!