30.4 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್‌.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ಕಿಂಡರ್‌ಗಾರ್ಟನ್‌ನಲ್ಲಿ ಪ್ರಥಮ ಪೋಷಕರ-ಶಿಕ್ಷಕರ ಸಭೆ

ಉಜಿರೆ: ಆ. 3 ರಂದು ಉಜಿರೆ ಎಸ್‌.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯ ಕಿಂಡರ್‌ಗಾರ್ಟನ್ ವಿಭಾಗದಲ್ಲಿ 2026–27ನೇ ಶೈಕ್ಷಣಿಕ ವರ್ಷದ ಪ್ರಥಮ ಪೋಷಕರ-ಶಿಕ್ಷಕರ ಸಭೆ ನಡೆಯಿತು.

ಕಾರ್ಯಕ್ರಮಕ್ಕೆ ಉಜಿರೆ ಎಸ್‌.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯ ವಿಶೇಷ ಶಿಕ್ಷಕಿ (Special Educator) ಅಲೀನಾ ಜಾನ್ ಮುಖ್ಯ ಅತಿಥಿಯಾಗಿ ಆಗಮಿಸಿ, ಸಕಾರಾತ್ಮಕ ಪೋಷಕತ್ವ (Positive Parenting), ಮಕ್ಕಳ ಆರೋಗ್ಯ, ಶಿಸ್ತು ಹಾಗೂ ಉತ್ತಮ ಮೌಲ್ಯಗಳ ಬೆಳವಣಿಗೆ ಕುರಿತು ಪೋಷಕರಿಗೆ ಮೌಲ್ಯಯುತ ಮಾರ್ಗದರ್ಶನ ನೀಡಿದರು. ಮಕ್ಕಳ ಭಾವನಾತ್ಮಕ, ಬೌದ್ಧಿಕ ಹಾಗೂ ಸಾಮಾಜಿಕ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಅವರು ತಿಳಿಸಿದರು.

ಶಾಲೆಯ ಪ್ರಾಂಶುಪಾಲರಾದ ಮನಮೋಹನ್ ನಾಯಕ್ ಕೆ.ಜಿ. ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳ ಸರ್ವತೋಮುಖ ಬೆಳವಣಿಗೆಗಾಗಿ ಪೋಷಕರು ಮತ್ತು ಶಿಕ್ಷಕರು ಪರಸ್ಪರ ಸಹಕಾರ, ನಿರಂತರ ಸಂವಹನ ಹಾಗೂ ಜವಾಬ್ದಾರಿಯುತ ಪಾಲ್ಗೊಳ್ಳುವಿಕೆಯೊಂದಿಗೆ ಕಾರ್ಯನಿರ್ವಹಿಸುವುದು ಅಗತ್ಯ ಎಂದು ತಿಳಿಸಿದರು.

ಸಭೆಯಲ್ಲಿ ಮಕ್ಕಳೊಂದಿಗೆ ಗುಣಮಟ್ಟದ ಸಮಯ ಕಳೆಯುವುದು, ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳುವುದು, ಪ್ರೋತ್ಸಾಹದ ಮೂಲಕ ಶಿಸ್ತು, ಆತ್ಮವಿಶ್ವಾಸ ಹಾಗೂ ಉತ್ತಮ ನಡವಳಿಕೆಯನ್ನು ಬೆಳೆಸುವ ಕುರಿತು ಪೋಷಕರಿಗೆ ಉಪಯುಕ್ತ ಮಾಹಿತಿ ನೀಡಲಾಯಿತು. ಪೋಷಕರು ಉತ್ಸಾಹದಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಸಂದೇಹಗಳಿಗೆ ಸಮರ್ಪಕ ಉತ್ತರಗಳನ್ನು ಪಡೆದುಕೊಂಡರು.

ಕಾರ್ಯಕ್ರಮದಲ್ಲಿ ಕಿಂಡರ್‌ಗಾರ್ಟನ್ ವಿಭಾಗದ ಎಲ್ಲಾ ಶಿಕ್ಷಕಿಯರು ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಕಿಂಡರ್‌ಗಾರ್ಟನ್ ಸಂಯೋಜಕ ಶಿಕ್ಷಕಿ ಸ್ಮೃತಿ ಜೈನ್ ಕಾರ್ಯಕ್ರಮವನ್ನು ನಿರೂಪಿಸಿದರು. ಶಿಕ್ಷಕಿ ಜಿಜಿ ಜೋಸ್ ಮುಖ್ಯ ಅತಿಥಿಯನ್ನು ಪರಿಚಯಿಸಿದರು. ಶಿಕ್ಷಕಿ ಮಮತಾ ಶೆಟ್ಟಿ ವಂದನಾರ್ಪಣೆ ಸಲ್ಲಿಸಿದರು.

Related posts

ವಸಂತ ಬಂಗೇರ ಕುಟುಂಬಸ್ಥರಿಂದ ಕೃತಜ್ಞತಾ ಪತ್ರ

Suddi Udaya

ತಾಲ್ಲೂಕು ಮಟ್ಟದ ಕರಾಟೆ ಪಂದ್ಯಾಟ: ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಮುಂಡಾಜೆ : ಕುರುಡ್ಯ ಎಂಬಲ್ಲಿ ಗುಡ್ಡಕ್ಕೆ ಬೆಂಕಿ

Suddi Udaya

ನೂತನ ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಹ್ಲಾದ್ ಜೋಶಿ ನೇಮಕ

Suddi Udaya

ಮ್ಯಾರಥಾನ್ ಯೋಗ ಬೋಧನೆಯಿಂದ ರೂ.2,52,525 ದೇಣಿಗೆ ಸರಕಾರಿ ಶಾಲಾಭಿವೃದ್ಧಿಗೆ ಹಸ್ತಾಂತರ

Suddi Udaya

ಚಾರ್ಮಾಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸದಾಶಿವ ಕೆವುಟಾಜೆ ಆಯ್ಕೆ

Suddi Udaya
error: Content is protected !!