28.8 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೃಹಜ್ಯೋತಿ ಯೋಜನೆ: ಉಳಿದ ಅರ್ಹ ಫಲಾನುಭವಿಗಳು ಶೀಘ್ರವೇ ಅರ್ಜಿ ಸಲ್ಲಿಸಿ : ಬಿ. ಪದ್ಮನಾಭ ಸಾಲ್ಯಾನ್

ಬೆಳ್ತಂಗಡಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಜಾರಿಗೊಂಡಿರುವ ಪಂಚ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಹೆಚ್ಚುವರಿ ಮಾಹಿತಿ ಸಂಗ್ರಹಣೆ ಕಾರ್ಯವು ಬೆಳ್ತಂಗಡಿ ತಾಲೂಕಿನಲ್ಲಿ ಮುಂದುವರಿದಿದೆ.

ತಾಲೂಕಿನಾದ್ಯಂತ ಮನೆ ಮನೆಗೆ ಭೇಟಿ ನೀಡಿ ಫಲಾನುಭವಿಗಳ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ. ಮಳೆಗಾಲದ ಹಿನ್ನೆಲೆಯಲ್ಲಿ ಹಲವಾರು ಗ್ರಾಮೀಣ ಪ್ರದೇಶಗಳಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆ ಉಂಟಾಗಿರುವುದರಿಂದ, ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ಚರ್ಚಿಸಿ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಮೆಸ್ಕಾಂ ಹಾಗೂ ಗ್ರಾಮ ಪಂಚಾಯಿತಿ ಆಡಳಿತದ ಸಮನ್ವಯದಲ್ಲಿ ನೋಂದಣಿ ವ್ಯವಸ್ಥೆ ಕಲ್ಪಿಸಲಾಗಿದೆ.

ಈಗಾಗಲೇ ಒಟ್ಟು 73,068 ಅರ್ಹ ಫಲಾನುಭವಿಗಳ ಪೈಕಿ ಸುಮಾರು 56,000 ಅರ್ಜಿಗಳು ನೋಂದಣಿಯಾಗಿವೆ. ಉಳಿದಿರುವ ಅರ್ಹ ಫಲಾನುಭವಿಗಳು ಅಗತ್ಯ ದಾಖಲೆಗಳೊಂದಿಗೆ ಕೂಡಲೇ ತಮ್ಮ ಅರ್ಜಿಯನ್ನು ನೋಂದಾಯಿಸಿಕೊಳ್ಳುವಂತೆ ಬೆಳ್ತಂಗಡಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಬಿ. ಪದ್ಮನಾಭ ಸಾಲ್ಯಾನ್ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ಮನೆ ಮನೆಗೆ ಭೇಟಿ ಕಾರ್ಯಕ್ರಮ ಮುಂದುವರಿಯಲಿದ್ದು, ನೆಟ್ವರ್ಕ್ ಸಮಸ್ಯೆ ಇರುವ ಪ್ರದೇಶಗಳಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೇ ವಿಶೇಷ ನೋಂದಣಿ ವ್ಯವಸ್ಥೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಇದೇ ವೇಳೆ, ತಾಂತ್ರಿಕ ಸಮಸ್ಯೆಯಿಂದ “Data Not Found” ಎಂದು ತೋರಿಸುತ್ತಿರುವ ಫಲಾನುಭವಿಗಳ ಅರ್ಜಿಗಳ ಕುರಿತು ಸರ್ಕಾರದ ಮೇಲಾಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರದಲ್ಲೇ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Related posts

ವಿದ್ಯಾಶ್ರೀ ಅಡೂರ್ ಅವರ 3 ನೇ ಕವನಸಂಕಲನ “ಪಯಣ” ಕವನಗಳ ಹಾದಿಯಲ್ಲಿ ಬಿಡುಗಡೆ

Suddi Udaya

ಆಶುಭಾಷಣ ಸ್ಪರ್ಧೆ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಸುಮೇದ ಕೃಷ್ಣ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಎಸೋಸಿಯೇಶನ್ ಬೆಳ್ತಂಗಡಿ ಕ್ಷೇತ್ರದ ಸಾಮಾನ್ಯ ಸಭೆ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯ ಸಹಸಂಸ್ಥೆ ಸಾಯಿಕೃಷ್ಣ ಹೆಲ್ತ್ ಸೆಂಟರ್ ಬಣಕಲ್ ನಲ್ಲಿ ಉದ್ಘಾಟನೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮದಿನಾಚರಣೆ

Suddi Udaya

ಮುದ್ದುಕೃಷ್ಣ ಸ್ಪರ್ಧೆಯಲ್ಲಿ ಶಿವಂಶಾಗೆ ಹಲವು ಪ್ರಶಸ್ತಿ: ಲಾಯಿಲದಲ್ಲಿ ಪ್ರಥಮ, ಮಹಿಳಾ ವೃಂದದಲ್ಲಿ ತೃತೀಯ, ಎಕ್ಸೆಲ್‌ನಲ್ಲಿ ಆರನೇ ಸ್ಥಾನ

Suddi Udaya
error: Content is protected !!