32 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರಿ ಮಳೆ ಹಿನ್ನಲೇ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ತುರ್ತು ಸಭೆ

ಬೆಳ್ತಂಗಡಿ ತಾಲೂಕಿನಾದ್ಯಂತ ಕಳೆದ 48 ಗಂಟೆಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದ ಸಾರ್ವಜನಿಕರ ಜನಜೀವನ, ರಸ್ತೆ ಸಂಪರ್ಕ, ಸರ್ಕಾರಿ ಮೂಲಸೌಕರ್ಯ ಹಾಗೂ ಸಾರ್ವಜನಿಕ ಮತ್ತು ಖಾಸಗಿ ಆಸ್ತಿಪಾಸ್ತಿಗಳಿಗೆ ಹಾನಿಯಾಗುತ್ತಿರುವ ಹಿನ್ನೆಲೆಯಲ್ಲಿ, ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಆ. 3ರಂದು ಬೆಳ್ತಂಗಡಿ ತಾಲೂಕು ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಅಧಿಕಾರಿಗಳ ತುರ್ತು ಸಭೆ ನಡೆಯಿತು.

ಮಳೆಯಿಂದ ಉಂಟಾಗಿರುವ ಪರಿಸ್ಥಿತಿಯ ಸಮಗ್ರ ಪರಿಶೀಲನೆ ನಡೆಸಿ, ಮುನ್ನೆಚ್ಚರಿಕೆ ಕ್ರಮಗಳು, ರಕ್ಷಣಾ ಕಾರ್ಯಾಚರಣೆ, ಪರಿಹಾರ ವ್ಯವಸ್ಥೆ ಹಾಗೂ ವಿವಿಧ ಇಲಾಖೆಗಳ ನಡುವಿನ ಸಮನ್ವಯ ಕುರಿತು ಚರ್ಚಿಸಿ ಅಗತ್ಯ ನಿರ್ದೇಶನಗಳನ್ನು ಅಧಿಕಾರಿಗಳಿಗೆ ಶಾಸಕರು ನೀಡಿದರು.

ತಾಲೂಕು ಪಂಚಾಯತ್ ಇಓ ಭವಾನಿ ಶಂಕರ್, ತಹಶೀಲ್ದಾರ್ ಎಸ್. ಎನ್. ನರಗುಂದ, ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ ಬಿ. ಎಸ್. ತಾಲೂಕು ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು, ಶೌರ್ಯ ವಿಪತ್ತು ನಿರ್ವಹಣಾ ತಂಡ ಸೇರಿದಂತೆ ವಿಪತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲ ತಂಡಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

ಭಾರೀ ಮಳೆಯ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಅಗತ್ಯ ಸಮನ್ವಯ ಮತ್ತು ತ್ವರಿತ ಕ್ರಮಗಳ ಕುರಿತು ಮಹತ್ವದ ಚರ್ಚೆಯನ್ನು ಶಾಸಕರು ಅಧಿಕಾರಿಗಳೊಂದಿಗೆ ನಡೆಸಿದರು.

Related posts

ಹಣ ದ್ವಿಗುಣ ಮಾಡುವುದಾಗಿ ಮೋಸ ಮಾಡಿದ ಪ್ರಕರಣ: ನೊಂದ ಮಹಿಳೆ ವೀಟಾ ಮರೀನಾ ಡಿಸೋಜ ನದಿಗೆ ಹಾರಿ ಆತ್ಮಹತ್ಯೆ

Suddi Udaya

ಉಜಿರೆ ರಾಜಾರಾಂ ಶೋ ರೂಂ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಡಿಸ್ಕೌಂಟ್ ಸೇಲ್

Suddi Udaya

ಚಿನ್ನಯ್ಯನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಎಸ್.ಐ.ಟಿ; 14 ದಿನಗಳ ನ್ಯಾಯಾಂಗ ಬಂಧನ

Suddi Udaya

ನಾರಾವಿ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಚಂದ್ರಾವತಿ ಆಚಾರ್ಯ ನಿಧನ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಗಾನವಿ ಡಿ. ರವರಿಗೆ ಪಿಎಚ್.ಡಿ ಪದವಿ

Suddi Udaya

ಇಂದಬೆಟ್ಟು: ಶ್ರೀ ವೀರಭದ್ರ ದೇವಸ್ಥಾನ ಲಿಂಗತ್ಯಾರು ಶ್ರದ್ದಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!