September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರುಡ್‌ಸೆಟ್ ಉಜಿರೆಯ 1000ನೇ ತರಬೇತಿ ಕಾರ್ಯಕ್ರಮಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ

ಧರ್ಮಸ್ಥಳ: ರುಡ್‌ಸೆಟ್ ಸಂಸ್ಥೆ, ಉಜಿರೆಯ 44 ವರ್ಷಗಳ ಸಾಧನೆಯ ಮೈಲಿಗಲ್ಲಾದ 1000ನೇ ತರಬೇತಿ ಕಾರ್ಯಕ್ರಮವಾದ ಛಾಯಾಗ್ರಹಣ ಮತ್ತು ವೀಡಿಯೋಗ್ರಾಫಿ ತರಬೇತಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪದ್ಮವಿಭೂಷಣ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಕ್ಯಾಮೆರಾದಲ್ಲಿ ಛಾಯಾಚಿತ್ರವನ್ನು ಸೆರೆಹಿಡಿಯುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಛಾಯಾಗ್ರಾಹಕರು ತಾಳ್ಮೆ, ಏಕಾಗ್ರತೆ ಹಾಗೂ ಸೃಜನಶೀಲತೆಯನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಉತ್ತಮ ಛಾಯಾಚಿತ್ರವು ಕೇವಲ ಕ್ಯಾಮೆರಾದಿಂದ ಮೂಡುವುದಿಲ್ಲ; ನೋಡುವ ದೃಷ್ಟಿಕೋನ, ಸಮಯಪ್ರಜ್ಞೆ ಹಾಗೂ ವಿಷಯದ ಆಳವಾದ ಅರಿವಿನಿಂದ ಮೂಡುತ್ತದೆ ಎಂದು ಹೇಳಿದರು. ವಿವಿಧ ಕೋನಗಳಿಂದ ವಿಷಯವನ್ನು ಅವಲೋಕಿಸಿ, ಸೂಕ್ತ ಕ್ಷಣವನ್ನು ಸೆರೆಹಿಡಿಯುವ ಸಾಮರ್ಥ್ಯವನ್ನು ಛಾಯಾಗ್ರಾಹಕರು ರೂಢಿಸಿಕೊಳ್ಳಬೇಕು ಎಂದು ತಿಳಿಸಿದರು.

ರುಡ್‌ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಪಿ. ವಿಜಯಕುಮಾರ್ ಸ್ವಾಗತಿಸಿ, ರುಡ್‌ಸೆಟ್ ಉಜಿರೆಯ 44 ವರ್ಷಗಳ ಸೇವಾ ಪಯಣ ಹಾಗೂ 1000ನೇ ತರಬೇತಿ ಕಾರ್ಯಕ್ರಮದ ಮಹತ್ವವನ್ನು ವಿವರಿಸಿದರು.
ಕಾರ್ಯಕ್ರಮದಲ್ಲಿ ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರಾದ ಸುನಿಲ್ ಜಿ. ನಾಯ್ಕ್, ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್, ಲೋಹಿತ್ ಜೈನ್ ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರು ಶೆಟ್ಟಿ ಉಪಸ್ಥಿತರಿದ್ದರು.
ಹಿರಿಯ ಉಪನ್ಯಾಸಕರಾದ ಕೆ. ಕರುಣಾಕರ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ಮಂಗಳೂರು, ಜೆಡಿಎಸ್ ಮಹಿಳಾ ಘಟಕದ ಮಾಜಿ ಜಿಲ್ಲಾಧ್ಯಕ್ಷೆಯಾಗಿದ್ದ ಅಳದಂಗಡಿಯ ಸುಮತಿ ಹೆಗ್ಡೆ ಎಸ್.ಡಿ.ಪಿ.ಐ ಗೆ ಸೇರ್ಪಡೆ

Suddi Udaya

ಹೈನುಗಾರಿಕೆಯ ಸಾಧಕ ಪಿ.ನಾರಾಯಣ ರಾವ್ ಧರ್ಮಸ್ಥಳ ವಿಧಿವಶ

Suddi Udaya

ಉಜಿರೆ: ಗಾಳಿ ಮಳೆಗೆ ರಸ್ತೆಗೆ ಬಿದ್ದ ಮರ ಉಜಿರೆ ಗ್ರಾ.ಪಂ. ನಿಂದ ತೆರವು ಕಾರ್ಯ

Suddi Udaya

ಯುವ ಸಂಸತ್ತು ಸ್ಪರ್ಧೆ: ಅರ್ಪಿತಾ ಎ. ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಪರಸ್ಪರ ಯುವಕ ಮಂಡಲ ಈದು-ನಾರಾವಿ ಇದರ ನೇತೃತ್ವದಲ್ಲಿ “ಮಹಾ ಚಂಡಿಕಾಯಾಗ”ದ ವೈಭವದ ಹಸಿರುವಾಣಿ ಹೊರೆಕಾಣಿಕೆ

Suddi Udaya

ಮರೋಡಿ: ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಬೃಹತ್‌ ಗಾತ್ರದ ಮರ, ಪ್ರಾಣಪಾಯದಿಂದ ಪಾರಾದ ಮನೆಯವರು: ಮನೆ ಸಂಪೂರ್ಣ ಹಾನಿ, ಲಕ್ಷಾಂತರ ರೂ. ನಷ್ಟ

Suddi Udaya
error: Content is protected !!