26 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಸಿಬ್ಬಂದಿ ಸಾಮರ್ಥ್ಯ ವೃದ್ಧಿ ತರಬೇತಿ ಕಾರ್ಯಾಗಾರಕ್ಕೆ ಚಾಲನೆ

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಗಳು ಕಕ್ಯಪದವು ಇಲ್ಲಿನ ಸಿಬ್ಬಂದಿಗಳಿಗೆ ವೃತ್ತಿಪರ ಸಾಮರ್ಥ್ಯ ವೃದ್ಧಿ ಹಾಗೂ ಕೌಶಲ್ಯಾಧರಿತ ಅಭಿವೃದ್ಧಿ ತರಭೇತಿಯ ಕುರಿತು ಕಾರ್ಯಗಾರಕ್ಕೆ ಚಾಲನೆ ನೀಡಲಾಯಿತು.

ವೈದ್ಯಕೀಯ ಸೂಕ್ಷ್ಮ ಜೀವಶಾಸ್ತ್ರಜ್ಞರು ಹಾಗೂ ಪ್ರಾಧ್ಯಾಪಕರು, ತರಭೇತುದಾರರಾದ ರೋಮೊ ನಾಯಕ್ ಇವರು ಸಂಸ್ಥೆಗೆ ಆಗಮಿಸಿ ಬೋಧಕ ವೃಂದದವರಿಗೆ ಶೈಕ್ಷಣಿಕ ಚಟುವಟಿಕೆಗಳಿಗೆ ಬೇಕಾದ ಭಾಷಾ ಕೌಶಲ್ಯ, ಉತ್ತಮ ಸಂವಹನ ಕಲೆ, ನಾಯಕತ್ವದ ಕುರಿತಾದ ವೃತ್ತಿಪರ ಹಾಗೂ ಕೌಶಲ್ಯಾಧರಿತ ವೈಯಕ್ತಿಕ ಅಭಿವೃದ್ಧಿಗೆ ಬೇಕಾದ ಮಾಹಿತಿ ಕಾರ್ಯಗಾರದೊಂದಿಗೆ ಉದ್ಯೋಗ ಅವಕಾಶಗಳನ್ನು ಹೇಗೆ ಸೃಷ್ಟಿಸಿಕೊಳ್ಳಬಹುದು ಹಾಗೂ ಭಾಷಾ ಕೌಶಲ್ಯಕ್ಕೆ ಎದುರಾಗುವ ಸವಾಲುಗಳ ಬಗ್ಗೆ ಉಪಯುಕ್ತ ಮಾಹಿತಿಯನ್ನು ನೀಡಿದರು.

ಸಂಸ್ಥೆಯ ಕಾರ್ಯದರ್ಶಿಗಳಾದ ಶಿವಾನಿ ಆರ್ ನಾಥ್, ಟ್ರಸ್ಟಿ ಯಜ್ಞೇಶ್ ರಾಜ್ ,ಪ್ರಾಂಶುಪಾಲರಾದ ಜೋಸ್ಟನ್ ಲೋಬೊ, ಸಂಯೋಜಕರಾದ ಯಶವಂತ ಜಿ.ನಾಯಕ್, ಮುಖ್ಯೋಪಾಧ್ಯಾಯಿನಿ ವಿಜಯ.ಕೆ ಉಪಸ್ಥಿತರಿದ್ದರು. ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೊ ಸ್ವಾಗತಿಸಿ,ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಸಂಯೋಜಕರಾದ ಯಶವಂತ್ ಜಿ. ನಾಯಕ್ ವಂದಿಸಿದರು.

Related posts

ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ವಶಕ್ಕೆ

Suddi Udaya

ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಉಪಾಧ್ಯಕ್ಷರಾಗಿ ಲೋಕೇಶ್ ಗೌಡ

Suddi Udaya

ಕ್ಲಸ್ಟರ್ ಮಟ್ಟದ ವಾರ್ಷಿಕ ಕ್ರೀಡಾಕೂಟ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

Suddi Udaya

ಮಚ್ಚಿನ: ಕಲ್ಲಗುಡ್ಡೆ ರಸ್ತೆಯಲ್ಲಿ ತುಂಬಿದ ನೀರು

Suddi Udaya

ಫೆ.1-2: ಚಿಬಿದ್ರೆ ಪರನೀರು ನಾಗಬ್ರಹ್ಮ ಪರಿವಾರ ದೇವರ ಸಾನಿಧ್ಯದಲ್ಲಿ ನಾಗಬ್ರಹ್ಮ ಪರಿವಾರ ದೇವರ ಸಾನಿಧ್ಯದ ಪ್ರತಿಷ್ಠೆ ಹಾಗೂ ರಕೇಶ್ವರಿ ಪ್ರಾರ್ಥನೆ

Suddi Udaya

ಲಾಯಿಲ ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya
error: Content is protected !!