26 C
ಪುತ್ತೂರು, ಬೆಳ್ತಂಗಡಿ
September 19, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗುರುವಾಯನಕೆರೆ ಪೊಟ್ಟುಕೆರೆ ನಿಷೇಧಿತ ಮಾದಕ ವಸ್ತು ಸೇವಿಸಿದ ವ್ಯಕ್ತಿ ಮೇಲೆ ಪ್ರಕರಣ ದಾಖಲು

ಗುರುವಾಯನಕೆರೆ: ಇಲ್ಲಿಯ ಪೊಟ್ಟುಕೆರೆ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತುಗಳನ್ನು ಸೇವಿಸಿದ್ದ ವ್ಯಕ್ತಿಯನ್ನು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ಬಿಡುಗಡೆ ಗೊಳಿಸಿದ ಘಟನೆ ಆ.2 ರಂದು ಸಂಜೆ ನಡೆದಿದೆ.


ಬೆಳ್ತಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಆನಂದ ಎಂ ರವರು ಆ.2 ರಂದು ಸಂಜೆ ಸಿಬ್ಬಂದಿಗಳೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿದ್ದಾಗ, ಗುರುವಾಯನಕೆರೆಯ ಪೊಟ್ಟುಕೆರೆ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಓರ್ವ ವ್ಯಕ್ತಿ ಅಮಲಿನಲ್ಲಿರುವುದನ್ನು ಕಂಡು ವಿಚಾರಿಸಿದಾಗ ನಶೆಯ ಅಮಲಿನಲ್ಲಿದ್ದ ಸದ್ರಿ ವ್ಯಕ್ತಿಯು ನಿಷೇದಿತ ಮಾದಕ ವಸ್ತುವನ್ನು ಸೇವನೆ ಮಾಡಿರುವುದಾಗಿ ಒಪ್ಪಿಕೊಂಡಿರುತ್ತಾರೆ. ಆತನ ಹೆಸರು ವಿಳಾಸ ಕೇಳಲಾಗಿ, ಕುವೆಟ್ಟು ನಿವಾಸಿ ಶ್ರೀರಾಜ್ ಶೆಟ್ಟಿ (36ವ) ಎಂಬುದಾಗಿ ತಿಳಿಸಿರುತ್ತಾನೆ. ಸದ್ರಿ ಆಪಾದಿತನನ್ನು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಯವರ ಮುಂದೆ ಹಾಜರುಪಡಿಸಿದಾಗ, ಆತನು ಮಾದಕವಸ್ತು ಸೇವನೆ ಮಾಡಿರುವುದು ದೃಢಪಟ್ಟಿರುತ್ತದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆ ಅ ಕ್ರ ನಂ : ೮೩/೨೦೨೬ ಕಲಂ: ೨೭(b) ಮತ್ತು ೨೨(ಚಿ) ಎನ್.ಡಿ.ಪಿ.ಎಸ್ ಆಕ್ಟ್ ಯಂತೆ ಪ್ರಕರಣ ದಾಖಲಿಸಿ ಬಿಡುಗಡೆಗೊಳಿಸಿದ್ದಾರೆ.

Related posts

ಮಾ.1 : ಎಸ್.ಡಿ.ಪಿ.ಐ. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಪಕ್ಷ ಸಮಾವೇಶ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಸರ್ಕಾರಿ ಬಸ್ಸುಗಳ ಮುಖಾಮುಖಿ ಡಿಕ್ಕಿ: ಪ್ರಯಾಣಿಕರು ಸಣ್ಣಪುಟ್ಟ ಗಾಯಾಗಳಿಂದ ಪಾರು

Suddi Udaya

ಕೆರೆ ಹಾವನ್ನು ಅಟ್ಟಿಸಿಕೊಂಡು ಮನೆಯಂಗಳಕ್ಕೆ ಬಂದ ಕಾಳಿಂಗ ಸರ್ಪ

Suddi Udaya

ಪಣಕಜೆಯ ಅರ್ಕಜೆ ಬಳಿ ಮನೆಗೆ ಗುಡ್ಡ ಕುಸಿದು ಹಾನಿ: ಮಡಂತ್ಯಾರು ಶೌರ್ಯ ಘಟಕದ ಸ್ವಯಂ ಸೇವಕರಿಂದ ಮಣ್ಣು ತೆರವು ಕಾರ್ಯ

Suddi Udaya

ಅರಸಿನಮಕ್ಕಿ: ವಾತ್ಸಲ್ಯ ಮನೆಗೆ ಅಡಿಗಲ್ಲು ಕಾರ್ಯಕ್ರಮ

Suddi Udaya

ಉಜಿರೆ: ದ. ಕ. ಮತ್ತು ಉಡುಪಿ ಅಂತರ್ ಜಿಲ್ಲಾ ಪಾಲಿಟೆಕ್ನಿಕ್ ಪುರುಷರ ವಾಲಿಬಾಲ್ ಮತ್ತು ಕಬಡ್ಡಿ ಪಂದ್ಯಾಟದ ಉದ್ಘಾಟನೆ

Suddi Udaya
error: Content is protected !!