28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಡ ಗ್ರಾಮ ಪಂಚಾಯತ್ ಗ್ರಾಮ ಸಭೆ

ನಡ: ನಡ ಗ್ರಾಮ ಪಂಚಾಯತ್ ನ 2026-27ನೇ ಸಾಲಿನ ಪ್ರಥಮ ಗ್ರಾಮ ಸಭೆಯು ನಡ ಗ್ರಾ.ಪಂ. ಸಭಾಂಗಣದಲ್ಲಿ ಆ. 4 ರಂದು ಆಡಳಿತಾಧಿಕಾರಿ ರಮೇಶ್ ಪಿ. ಕೆ ರವರ ಅಧ್ಯಕ್ಷತೆಯಲ್ಲಿ ಜರುಗಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಸಹಕಾರಿ ಅಭಿವೃದ್ಧಿ ಅಧಿಕಾರಿ ಪ್ರತಿಮಾ ಆಗಮಿಸಿದ್ದರು.

ಗ್ರಾಮಸಭೆಗೆ ಇಲಾಖಾಧಿಕಾರಿಗಳು ಬರದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಗ್ರಾಮಸ್ಥರು, ನಮ್ಮ ಸಮಸ್ಯೆಗಳನ್ನು ಹೇಳಲು ಇಲಾಖಾಧಿಕಾರಿಗಳೇ ಬರದಿದ್ದರೆ ಮತ್ತೆ ಗ್ರಾಮಸಭೆ ಯಾಕೆ ಎಂದು ಪ್ರಶ್ನಿಸಿದಾಗ ಪಿಡಿಒ ಕೆಲ ಇಲಾಖೆಗಳ ಅಧಿಕಾರಿಗಳನ್ನು ಸಂಪರ್ಕಿಸಿದರು. ನಂತರ ಇಲಾಖಾಧಿಕಾರಿಗಳಿಂದ ಮಾಹಿತಿ ನಡೆಯಿತು.


ಈ ಸಂದರ್ಭದಲ್ಲಿ ಕಳೆದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625ರಲ್ಲಿ 625 ಅಂಕ ಪಡೆದ ಕನ್ಯಾಡಿ ಗ್ರಾಮದ ಕೈಲಾಜೆ ಹರ್ಷೆಂದ್ರ ಮತ್ತು ಶಾರದಾ ದಂಪತಿಯ ಪುತ್ರಿ ಅನನ್ಯ ಇವರನ್ನು ಸನ್ಮಾನಿಸಲಾಯಿತು.

ಪಂ. ಅಭಿವೃದ್ಧಿ ಅಧಿಕಾರಿ ತಾರಾನಾಥ್ ಕೆ. ನಾಯ್ಕ್ ಸ್ವಾಗತಿಸಿದರು. ಕಾರ್ಯದರ್ಶಿ ಕಿರಣ್ ಎಂ. ರವರು ಅನುಪಾಲನಾ & ವಾರ್ಡ್ ಸಭೆ ವರದಿ ನೀಡಿದರು. ಸಿಬ್ಬಂದಿ ಭಾರತಿ ಜಮಾ – ಖರ್ಚು ವರದಿ ನೀಡಿದರು. ಸಿಬ್ಬಂದಿ ಮೀನಾಕ್ಷಿ ಕಾರ್ಯಕ್ರಮ ನಿರೂಪಿಸಿ , ಧನ್ಯವಾದವಿತ್ತರು.

Related posts

ಕನ್ಯಾಡಿ ಸುಮತಿ ಎಸ್. ಜೈನ್ ನಿಧನ

Suddi Udaya

ಚಾರ್ಮಾಡಿ ಬೂತ್ ಸಂಖ್ಯೆ 21ರಲ್ಲಿ ಕೈ ಕೊಟ್ಟ ಮತ ಯಂತ್ರ

Suddi Udaya

ಜ.7 : ಧರ್ಮಸ್ಥಳದಲ್ಲಿ ನೂತನ ಸಂಕೀರ್ಣ ಶ್ರೀ ಸಾನ್ನಿಧ್ಯ ಉದ್ಘಾಟನೆ ಹಾಗೂ ಜ್ಞಾನ ದೀಪ ಕಾರ್ಯಕ್ರಮ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಬೆಳಾಲು: ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಹಸಿರುವಾಣಿ ಹೊರಕಾಣಿಕೆಗೆ ಚಾಲನೆ

Suddi Udaya
error: Content is protected !!