November 4, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಂದಾರು: ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ: ಆರೋಪಿಗಳ ಬಂಧನ, ಸೊತ್ತುಗಳು ವಶಕ್ಕೆ

ಬೆಳ್ತಂಗಡಿ: ಬಂದಾರು ಗ್ರಾಮದ ನಿರ್ಮುಡ ಎಂಬಲ್ಲಿ ಅಕ್ರಮವಾಗಿ ಕೋಳಿ ಅಂಕ ಜೂಜಾಟ ನಡೆಸುತ್ತಿದ್ದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಆ.3ರಂದು ಸಂಜೆ 5.15 ರ ಸುಮಾರಿಗೆ ಬೀಟ್ ಸಿಬ್ಬಂದಿಯಿಂದ ಬಂದ ಖಚಿತ ಮಾಹಿತಿಯ ಮೇರೆಗೆ ಧರ್ಮಸ್ಥಳ ಸಬ್ ಇನ್ಸ್‌ಪೆಕ್ಟರ್ ಸಮರ್ಥ್ ಆರ್ ಗಾಣಿಗೇರ ನೇತೃತ್ವದ ಪೊಲೀಸರು ನಿರ್ಮುಡ ಪ್ರದೇಶಕ್ಕೆ ದಾಳಿ ನಡೆಸಿದಾಗ ಆರೋಪಿಗಳು ಕೋಳಿಗಳ ಕಾಲುಗಳಿಗೆ ಬಾಳು (ಸಣ್ಣ ಕತ್ತಿ) ಕಟ್ಟಿ ಪರಸ್ಪರ ಕಾದಾಟಕ್ಕೆ ಬಿಡುವುದರ ಮೂಲಕ ಹಣವನ್ನು ಪಣವಾಗಿಟ್ಟುಕೊಂಡು ಸಂಘಟಿತವಾಗಿ ಕೋಳಿ ಅಂಕ ಜೂಜಾಟ ನಡೆಸುತ್ತಿರುವುದು ಪತ್ತೆಯಾಗಿದೆ.

ಪೊಲೀಸರನ್ನು ಕಂಡ ಕೂಡಲೇ ಕೆಲವರು ಸ್ಥಳದಿಂದ ಪರಾರಿಯಾಗಿದ್ದು, ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರನ್ನು ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದ ನಿರ್ಮುಡ ನಿವಾಸಿ ಧರ್ಣಪ್ಪ ಗೌಡ (38) ಹಾಗೂ ಪುತ್ತೂರು ತಾಲೂಕಿನ ನೆಕ್ಕಿಲಾಡಿ ಗ್ರಾಮದ ಬೊಳ್ಳಾರು ನಿವಾಸಿ ಹರೀಶ್ ಎಸ್. (30) ಎಂದು ಗುರುತಿಸಲಾಗಿದೆ.

ದಾಳಿಯ ವೇಳೆ ಜೂಜಾಟಕ್ಕೆ ಬಳಸಲಾಗಿದ್ದ 350 ನಗದು, ಎರಡು ಬಾಳು (ಸಣ್ಣ ಕತ್ತಿ), ವಿವಿಧ ಜಾತಿಯ ನಾಲ್ಕು ಕೋಳಿಗಳು ಹಾಗೂ ಮೂರು ದ್ವಿಚಕ್ರ ವಾಹನಗಳು ಸೇರಿದಂತೆ ಒಟ್ಟು 74,370 ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ ಕಲಂ 112, ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 87 ಹಾಗೂ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ-1960ರ ಕಲಂ 11(1) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಸ್ಪಂದನ ಪಾಲಿಕ್ಲಿನಿಕ್ ವತಿಯಿಂದ ಮನೆ ಬಾಗಿಲಿಗೆ ಬಂದು ರಕ್ತದ ಸ್ಯಾಂಪಲ್ ಸಂಗ್ರಹಿಸುವ ವ್ಯವಸ್ಥೆ

Suddi Udaya

ಪಾಲಡ್ಕ ಯಕ್ಷಮಿತ್ರ ಯಕ್ಷಗಾನ ಬಯಲಾಟ ಸಮಿತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya

ನಾಳೆ(ಅ.31): ರಾಷ್ಟ್ರೀಯ ಏಕತಾ ದಿವಸ್” ದಿನದ ಆಚರಣೆ ಪ್ರಯುಕ್ತ ಉಜಿರೆಯಲ್ಲಿ “ಏಕತಾ ಓಟ”

Suddi Udaya

ಕೆಪಿಎಸ್ ಪುಂಜಾಲಕಟ್ಟೆ (ಪ್ರೌಢಶಾಲಾ ವಿಭಾಗ) ಶಾಲಾ ಮಂತ್ರಿಮಂಡಲದ ಚುನಾವಣೆ

Suddi Udaya

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ 7 ನೇ ವರ್ಷದ ದೀಪಾವಳಿ ದೋಸೆ ಹಬ್ಬ 2026, ಡ್ರಗ್ಸ್ ವಿರುದ್ಧ ಅಭಿಯಾನ ಮ್ಯಾರಥಾನ್ ಬಗ್ಗೆ ಶಾಸಕ ಹರೀಶ್ ಪೂಂಜಾರವರ ಮಾರ್ಗದರ್ಶನದಲ್ಲಿ ಪೂರ್ವಭಾವಿ ಸಭೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾ.ಸೇ. ಯೋಜನೆಯ ಬಗ್ಗೆ ವಿಶೇಷ ಕಾರ್ಯಾಗಾರ

Suddi Udaya
error: Content is protected !!