September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ: ಮೊಬೈಲ್ ಟವರ್ ಕುಸಿಯುವ ಭೀತಿ-ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

ಮುಂಡಾಜೆ: ಮುಂಡಾಜೆ ಗ್ರಾಮ ವ್ಯಾಪ್ತಿಯ ಸೋಮಂತ್ತಡ್ಕ ಪ್ರದೇಶದಲ್ಲಿ ಕಳೆದ ಹಲವಾರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಕಂಪನಿಯ ಮೊಬೈಲ್ ಟವರ್ ಕುಸಿಯುವ ಹಂತದಲ್ಲಿದ್ದು ಗ್ರಾಮದ ಜನರು ಹಾಗೂ ವಾಹನ ಸವಾರರು ಆತಂಕದಲ್ಲಿದ್ದಾರೆ.

ಕೆಲ ವರ್ಷಗಳ ಹಿಂದೆ ಪ್ರಾರಂಭಗೊಂಡ ಪುಂಜಾಲಕಟ್ಟೆ-ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ಸೋಮಂತ್ತಡ್ಕ ಪ್ರದೇಶದಲ್ಲಿ ರಸ್ತೆಗಳ ತಿರುವುಗಳನ್ನು ತಪ್ಪಿಸುವ ದೃಷ್ಟಿಯಿಂದ ಎತ್ತರ ಪ್ರದೇಶದ ಮಣ್ಣುಗಳನ್ನು ತೆಗೆದು ರಸ್ತೆ ನಿರ್ಮಾಣ ಮಾಡಿ ತಡೆಗೋಡೆ ನಿರ್ಮಿಸಿದ್ದರು ಸಹ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ತಡೆಗೋಡೆಯ ಮೇಲ್ಬಾಗದಲ್ಲಿರುವ ಮಣ್ಣು ಸಂಪೂರ್ಣವಾಗಿ ಸಡಿಲಗೊಂಡಿದ್ದು ಮೊಬೈಲ್ ಟವರ್ ಸದ್ಯ ಕುಸಿಯುವ ಹಂತದಲ್ಲಿದೆ. ಜೊತೆಗೆ ವಿದ್ಯುತ್ ತಂತಿಗಳು, ರಸ್ತೆಯಲ್ಲಿ ಸಂಚಾರಿಸುವ ವಾಹನ ಸವಾರರಿಗೆ ಹಾನಿಯಾಗುವ ಸಾಧ್ಯತೆಯೂ ಇದೆ. ಕೂಡಲೇ ಅಧಿಕಾರಿಗಳು ಬಂದು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ತಾಲೂಕಿನಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಕೆಲವು ಗ್ರಾಮೀಣ ಪ್ರದೇಶಗಳಲ್ಲಿ ಗುಡ್ಡ ಕುಸಿತ ಘಟನೆಗಳು ನಡೆದಿವೆ. ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು ತುರ್ತು ದುರಸ್ತಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ.


ಹವಾಮಾನ ಇಲಾಖೆ ಮುಂದಿನ ಕೆಲ ದಿನಗಳವರೆಗೆ ಸಾಧಾರಣ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ನದಿ ತೀರ ಹಾಗೂ ಗುಡ್ಡಪ್ರದೇಶಗಳಲ್ಲಿ ವಾಸಿಸುವ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ತಾಲೂಕು ಆಡಳಿತ ಮನವಿ ಮಾಡಿದೆ. ಪರಿಸ್ಥಿತಿ ಸದ್ಯ ನಿಯಂತ್ರಣದಲ್ಲಿದ್ದರೂ ಮುನ್ನೆಚ್ಚರಿಕೆ ಕ್ರಮ ಮುಂದುವರಿಸಲಾಗಿದೆ.

Related posts

ಡಿ. 8: ನಮ್ಮೂರ ಜಾತ್ರೆ ಕುಂಭಶ್ರೀ ವೈಭವ ಹಾಗೂ ಮಾತ-ಪಿತಾ-ಗುರುದೇವೋಭವ ಹೃದಯಸ್ಪರ್ಶಿ ಕಾರ್ಯಕ್ರಮ

Suddi Udaya

ಶಿಬಾಜೆ ಶ್ರೀ ರಾಜರಾಜೇಶ್ವರಿ ಭಜನಾ ಮಂದಿರ ಭಜನೋತ್ಸವ: ಶೌರ್ಯ ವಿಪತ್ತು ತಂಡದಿಂದ ಶ್ರಮದಾನ

Suddi Udaya

ಬಂದಾರು ಗ್ರಾ.ಪಂ. ಜಮಾಬಂದಿ ಹಾಗೂ ರಾಜ್ಯ ಮಟ್ಟದ ಪ್ರಶಸ್ತಿ ಪಡೆದ ಯುವ ಸಾಹಿತಿ ಚಂದ್ರಹಾಸ ಕುಂಬಾರ ಹಾಗೂ ರಾಜ್ಯ ಮಟ್ಟದ ವೆಟ್ ಲಿಫ್ಟಿಂಗ್ ನಲ್ಲಿ ಅವಳಿ ಚಿನ್ನದ ಪದಕ ವಿಜೇತೆ ಕು. ತೇಜಶ್ವಿನಿ ಪೂಜಾರಿ ರವರಿಗೆ ಸನ್ಮಾನ

Suddi Udaya

ಗೇರುಕಟ್ಟೆ ಕೀರ್ತಿ ಶೇಷ ನರಸಿಂಹ ಮೂರ್ತಿ ಹಾಗೂ ಕೀರ್ತಿ ಶೇಷ ಸುರೇಶ್ ಪೈಯವರಿಗೆ ನುಡಿನಮನ ಹಾಗೂ ಸಂಸ್ಮರಣೆ ಯಕ್ಷಗಾನ ತಾಳಮದ್ದಳೆ 

Suddi Udaya

ಕೆಸರಲ್ಲಿ ಜೊತೆಯಾಗಿ ಸಂಭ್ರಮ: ನಾವೂರಿನಲ್ಲಿ ಎಸ್‌ಡಿಪಿಐ ವತಿಯಿಂದ ಸಾರ್ವಜನಿಕ ಕ್ರೀಡಾಕೂಟ

Suddi Udaya

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya
error: Content is protected !!