28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾವಳಿಯ ಕೋಳಿ ರೈತರ ಹಿತರಕ್ಷಣೆಗಾಗಿ ದನಿಯಾದ ‘ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟ: ಬೆಂಗಳೂರಿನಲ್ಲಿ ಪೂರ್ವಭಾವಿ ಸಭೆ

ಬೆಳ್ತಂಗಡಿ: ಬೆಂಗಳೂರು ಪಶುಭವನದಲ್ಲಿ ಕರ್ನಾಟಕ ಕೋಳಿ ಸಾಕಾಣಿಕೆ ರೈತರ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವದಲ್ಲಿ ಹಾಗೂ ಕುಕ್ಕುಟ ಮಂಡಳಿ ಅಧ್ಯಕ್ಷ ವಿಜಯ್ ಅವರ ಅಧ್ಯಕ್ಷತೆಯಲ್ಲಿ ಆ.03 ರಂದು ಜರುಗಿದ ಮುಖ್ಯಮಂತ್ರಿಗಳ ಭೇಟಿಯ ಪೂರ್ವಭಾವಿ ಸಭೆಯಲ್ಲಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಪ್ರತಿನಿಧಿಸಿದ ‘ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟ (ರಿ.)’ ಮುಂಚೂಣಿಯಲ್ಲಿ ನಿಂತು ಕರಾವಳಿ ಭಾಗದ ರೈತರ ಪರವಾಗಿ ಗಟ್ಟಿಯಾದ ಧ್ವನಿ ಮೊಳಗಿಸಿತು.

ಮುಂಬರುವ ದಿನಗಳಲ್ಲಿ ಮುಖ್ಯಮಂತ್ರಿಗಳಿಗೆ ಸಲ್ಲಿಸಲಿರುವ ಅಧಿಕೃತ ಮನವಿ ಪತ್ರದ ರೂಪುರೇಷೆ ರೂಪಿಸುವಲ್ಲಿ ಸಕ್ರಿಯ ಪಾತ್ರ ವಹಿಸಿದ ಒಕ್ಕೂಟದ ಅಧ್ಯಕ್ಷ ಸಯ್ಯದ್ ಹಸನ್, ಪ್ರಧಾನ ಕಾರ್ಯದರ್ಶಿ ಅಶ್ವಿನ್ ಕುಮಾರ್ ಬಿ.ಕೆ., ಸಂಘಟನಾ ಕಾರ್ಯದರ್ಶಿ ರಿತೇಶ್ ಕೊಕ್ಕಡ ಹಾಗೂ ಸದಸ್ಯ ಲಕ್ಷ್ಮಣ್ ಗೌಡ ಚಿಬಿದ್ರೆ ಅವರು ರೈತರ ಪ್ರಮುಖ ಬೇಡಿಕೆಗಳನ್ನು ಬಲವಾಗಿ ಮಂಡಿಸಿ ಗಮನ ಸೆಳೆದರು.

ಸಭೆಯಲ್ಲಿ ಕೋಳಿ ಸಾಕಾಣಿಕೆ ರೈತರಿಗೆ ಕನಿಷ್ಠ 10 ರೂಪಾಯಿಗಳ ಜಿಸಿ ದರ ಕಡ್ಡಾಯ ನಿಗದಿಪಡಿಸುವುದು, ಪ್ರಕೃತಿ ವಿಕೋಪದಿಂದ ಹಾನಿಗೊಳಗಾಗುವ ಕೋಳಿ ಕೇಂದ್ರಗಳಿಗೆ ಸೂಕ್ತ ಪರಿಹಾರ ನೀಡುವುದು ಹಾಗೂ ಕರಾವಳಿಯಲ್ಲಿ ತೀವ್ರವಾಗಿ ಕಾಡುತ್ತಿರುವ ‘ನೊಣದ ಸಮಸ್ಯೆ’ಯನ್ನು ವೈಜ್ಞಾನಿಕವಾಗಿ ನಿಯಂತ್ರಿಸಲು ಶಾಶ್ವತ ಕ್ರಮಕೈಗೊಳ್ಳುವಂತೆ ಒತ್ತಾಯಿಸಲಾಯಿತು. ರಾಜ್ಯ ಮಟ್ಟದ ಈ ಸಭೆಯಲ್ಲಿ ಕರಾವಳಿಯ ಕೋಳಿ ರೈತರ ಸಂಕಷ್ಟಗಳಿಗೆ ಧ್ವನಿಯಾಗುವ ಮೂಲಕ ಒಕ್ಕೂಟವು ಅತ್ಯಂತ ಮಹತ್ವದ ಮತ್ತು ಶ್ಲಾಘನೀಯ ಪಾತ್ರವನ್ನು ನಿರ್ವಹಿಸಿದೆ.

Related posts

ಬರೆಂಗಾಯ ಶಾಲಾ ಅಮೃತ ಮಹೋತ್ಸವದ ಪೂರ್ವಭಾವಿ ಸಭೆ: ಅಮೃತ ಮಹೋತ್ಸವಕ್ಕೆ ಲಕ್ಷ್ಮಿ ದೇವಧರ್ ಮತ್ತು ಮಕ್ಕಳು ಮೊಳಂಪಾಯ ರಿಂದ ರೂ. 1 ಲಕ್ಷ ದೇಣಿಗೆ

Suddi Udaya

ಅಳದಂಗಡಿ: ಬಡಗಕಾರಂದೂರು ನಿವಾಸಿ ಕೃಷ್ಣಪ್ಪ ಪೂಜಾರಿ ನಿಧನ

Suddi Udaya

ವನ್ಯಜೀವಿ ವಿಭಾಗದ ಅರಣ್ಯದಲ್ಲಿ ಹತೋಟಿಗೆ ಬಂದ ಬೆಂಕಿ

Suddi Udaya

ಬಿಷಪ್ ಲಾರೆನ್ಸ್ ಮುಕ್ಕುಯಿರವರಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಗೌರವಾಭಿನಂದನೆ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನಲ್ಲಿ ಅಕ್ಷರೋತ್ಸವ

Suddi Udaya

ನಿಡ್ಲೆ ನಾಗೇಶ್ ಕುಮಾರ್ ಕೆ.ಎಂ ಅಭಿಮಾನಿ ಬಳಗದಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ, ಕೊಡೆ ಹಾಗೂ ಹಣ್ಣು ಹಂಪಲು ಸಸಿಗಳ ವಿತರಣೆ

Suddi Udaya
error: Content is protected !!