28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿಯಲ್ಲಿ ಮಧ್ಯವರ್ಜನ ಶಿಬಿರ ಉದ್ಘಾಟನೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳವು ಕೇವಲ ಧಾರ್ಮಿಕ ಕ್ಷೇತ್ರವಷ್ಟೇ ಅಲ್ಲ, ಸಮಾಜ ಸೇವೆಯ ಮಹಾನ್ ಕೇಂದ್ರವಾಗಿದೆ. ಶಿಕ್ಷಣ, ಆರೋಗ್ಯ, ಗ್ರಾಮಾಭಿವೃದ್ಧಿ, ಮಹಿಳಾ ಸಬಲೀಕರಣ, ಪರಿಸರ ಸಂರಕ್ಷಣೆ, ಸ್ವ-ಉದ್ಯೋಗ, ಯುವಜನರ ಅಭಿವೃದ್ಧಿ ಹಾಗೂ ಮದ್ಯವರ್ಜನೆಯಂತಹ ಅನೇಕ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಲಕ್ಷಾಂತರ ಜನರ ಬದುಕಿನಲ್ಲಿ ಆಶಾಕಿರಣ ಮೂಡಿಸಿದೆ ಎಂದು ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ ವಸಂತ್ ಸಾಲ್ಯಾನ್ ನುಡಿದರು.

ಪಡಂಗಡಿ ಸಹಕಾರಿ ಸಂಘದ ಸಭಾಭವನದಲ್ಲಿ ಆ.4 ರಿಂದ ಆರಂಭಗೊಂಡ ಮಧ್ಯವರ್ಜನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. “ಸೇವೆ ಪರಮೋ ಧರ್ಮಃ” ಎಂಬ ಧ್ಯೇಯವನ್ನು ಜೀವನದಲ್ಲಿ ಅಳವಡಿಸಿಕೊಂಡಿರುವ ಶ್ರೀ ಕ್ಷೇತ್ರ ಧರ್ಮಸ್ಥಳವು ಸಮಾಜದ ಪ್ರತಿಯೊಂದು ವರ್ಗಕ್ಕೂ ಸ್ಪಂದಿಸುತ್ತಾ, ಮಾನವೀಯ ಮೌಲ್ಯಗಳನ್ನು ಬೆಳೆಸುವ ಕಾರ್ಯದಲ್ಲಿ ನಿರಂತರವಾಗಿ ತೊಡಗಿಕೊಂಡಿದೆ. ಹೆಗ್ಗಡೆಯವರ ಈ ನಿಸ್ವಾರ್ಥ ಸೇವೆ, ದೂರದೃಷ್ಟಿ ಹಾಗೂ ಜನಪರ ಚಟುವಟಿಕೆಗಳು ನಿಜಕ್ಕೂ ಶ್ಲಾಘನೀಯವಾದದ್ದು ಎಂದವರು ಹೇಳಿದರು.


ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ
ಅಂಥೋನಿ ಫೆರ್ನಾಂಡಿಸ್ ವಹಿಸಿದ್ದರು.

ಮುಖ್ಯ ಅತಿಥಿಗಳಾದ ಪ್ರಶಾಂತ್ ಸುವರ್ಣ ನಿಕಟಪೂರ್ವ ಅಧ್ಯಕ್ಷರು, ಗ್ರಾಮ ಪಂಚಾಯತ್ ಪಡಂಗಡಿ, ಕೆ ಎಸ್ ಗಿರೀಶ್ ಅಧ್ಯಕ್ಷರು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ರಿ ಬೆಳ್ತಂಗಡಿ, ದಿನೇಶ್ ನಿರ್ದೇಶಕರು SKDRDP ಟ್ರಸ್ಟ್ ದಕ್ಷಿಣ ಕನ್ನಡ, ಸುಕೇಶಿನಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ ಪಡಂಗಡಿ, ಜನಜಾಗೃತಿ ವೇದಿಕೆ ಬೆಳ್ತಂಗಡಿ ಮಾಜಿ ಅಧ್ಯಕ್ಷರುಗಳಾದ ಪಿ.ಕೆ ರಾಜು ಪೂಜಾರಿ, ಶಾರದ ಆರ್ ರೈ, ಕಿಶೋರ್ ಹೆಗ್ಡೆ, ಕಾಸಿಂ ಮಲ್ಲಿಗೆಮನೆ, ಸುರೇಶ್ ಪೂಜಾರಿ ಅಧ್ಯಕ್ಷರು ವ್ಯವಸ್ಥಾಪನ ಸಮಿತಿ ಪಡಂಗಡಿ, ವರದರಾಜ ವಲಯಾಧ್ಯಕ್ಷರು ಗರ್ಡಾಡಿ, ಹರೀಶ್ ಕೋಟ್ಯಾನ್ ಜನಜಾಗೃತಿ ವಲಯಾಧ್ಯಕ್ಷರು ಗರ್ಡಾಡಿ ಉಪಸ್ಥಿತರಿದ್ದರು.

ಗಣೇಶ್ ಆಚಾರ್ಯ ಯೋಜನಾಧಿಕಾರಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪ್ರಾದೇಶಿಕ ವಿಭಾಗ ಉಡುಪಿ ಇವರು ಜನಜಾಗೃತಿ ವೇದಿಕೆ ಪ್ರಾರಂಭ, ಜನಜಾಗೃತಿ ವೇದಿಕೆ ಮೂಲಕ ಸಾಮಾಜಿಕ ಆಂದೋಲನ, ಮದ್ಯವರ್ಜನ ಶಿಬಿರ ಅನುಷ್ಠಾನ, ಮದ್ಯವರ್ಜನ ಶಿಬಿರದ ರೂಪುರೇಷೆ, ಮದ್ಯವರ್ಜನ ಶಿಬಿರದ ದೈನಂದಿನ ದಿನಚರಿ ಕಾರ್ಯಕ್ರಮಗಳ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.


ಸಭಾ ಕಾರ್ಯಕ್ರಮದಲ್ಲಿ ಯೋಜನಾಧಿಕಾರಿ ಹರೀಶ್ ಆರ್ ಎಸ್ ಸ್ವಾಗತಿಸಿ, ಮೇಲ್ವಿಚಾರಕಿ ಯಶೋಧ ವಂದಿಸಿ, ಶಿಬಿರಾಧಿಕಾರಿ ದೇವಿಪ್ರಸಾದ್ ನಿರೂಪಿಸಿದರು. ವೇದಿಕೆಯಲ್ಲಿ ವ್ಯವಸ್ಥಾಪನ ಸಮಿತಿಯ ಉಪಾಧ್ಯಕ್ಷರು, ಗೌರವ ಸಲಹೆಗಾರರು ಕೋಶಾಧಿಕಾರಿ ಪದಾಧಿಕಾರಿಗಳು, ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು ಉಪಸಿತರಿದ್ದರು.
ಕಾರ್ಯಕ್ರಮದಲ್ಲಿ ತಾಲೂಕಿನ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು, ಒಕ್ಕೂಟದ ಪದಾಧಿಕಾರಿಗಳು, ನವಜೀವನ ಸಮಿತಿ ಸದಸ್ಯರು, ಶೌರ್ಯ ವಿಪತ್ತು ನಿರ್ವಹಣಾ ಸಮಿತಿ ಸದಸ್ಯರು, ಶಿಬಿರಾರ್ಥಿಗಳು ಭಾಗವಹಿಸಿದ್ದರು.

Related posts

ಅಪರ ಸರಕಾರಿ ವಕೀಲ ಮನೋಹರ್ ಕುಮಾರ್ ಅವರ ನೂತನ ಕಚೇರಿ ಉದ್ಘಾಟನೆ

Suddi Udaya

ಪಡಂಗಡಿಯಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಮತ್ತೆ ವಿಚಾರಣೆಗೆ ಹಾಜರಾಗಲು ನಾಲ್ಕು ಮಂದಿಗೆ ಎಸ್.ಐ.ಟಿ ನೋಟಿಸ್ ಜಾರಿ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ನಡ: ಪ್ರಭಾಕರ ಗೌಡ ಭೋಜಾರ ನಿಧನ

Suddi Udaya

ಕಡಿರುದ್ಯಾವರದಲ್ಲಿ ಒಂಟಿ ಸಲಗ ಹಾವಳಿ

Suddi Udaya
error: Content is protected !!