September 19, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಬೆಳ್ತಂಗಡಿ: ಮಾದಕ ವಸ್ತು ಸೇವನೆ ಮತ್ತು ಮಾರಾಟ ನಾಲ್ವರ ವಿರುದ್ಧ ಪ್ರಕರಣ ದಾಖಲು; ಓರ್ವ ಅಂದರ್

ಬೆಳ್ತಂಗಡಿ : ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಸಿಕಂದರ್ ಪಾಷಾ ಅವರು ಸಿಬ್ಬಂದಿಯೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಆ.3 ರಂದು ಸಂಜೆ ಸುಮಾರು 6:45 ಗಂಟೆಗೆ ಬೆಳ್ತಂಗಡಿ ತಾಲೂಕು ಕಸಬಾ ಗ್ರಾಮದ ಜೈನ್ ಪೇಟೆ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಅನುಮಾನಾಸ್ಪದವಾಗಿ ನಿಲ್ಲಿಸಿದ್ದ KA-70-9065 ಸಂಖ್ಯೆಯ ಆಟೋ ರಿಕ್ಷಾವನ್ನು ಪರಿಶೀಲಿಸಿದಾಗ ಆಟೋದಲ್ಲಿದ್ದ ವ್ಯಕ್ತಿಯೊಬ್ಬರು ಅಮಲಿನಲ್ಲಿರುವುದು ಕಂಡುಬಂದಿರುತ್ತಾನೆ.

ವಿಚಾರಣೆ ನಡೆಸಿದಾಗ ಆತನ ಹೆಸರು ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಅಲಾದಿಕೊಟ್ಟಿಗೆ ನಿವಾಸಿ ಕೆ.ಹೆಚ್.ಅಬ್ದುಲ್ ಹಮೀದ್ ಮಗ ಮಹಮ್ಮದ್ ನೌಶಾದ್ (29) ಎಂಬುವುದಾಗಿ ತಿಳಿಸಿದ್ದು ಅಲ್ಲದೆ ತನ್ನ ಸಹೋದರರಾದ ಬೆಳ್ತಂಗಡಿ ತಾಲೂಕಿನ ನಟೋರಿಯಾಸ್ ಮಾದಕವಸ್ತು ಸಾಗಾಟ ಮತ್ತು ಮಾರಾಟಗಾರನಾದ ಹಮ್ಜತ್ ಖರಾರ್, ಲತೀಫ್ ಹಾಗೂ ಸಿದ್ದೀಕ್ ಅವರು ಮಾದಕ ವಸ್ತುವನ್ನು ತಲಾ ಒಂದು ಗ್ರಾಂ ಪ್ಯಾಕೆಟ್‌ಗಳಲ್ಲಿ ನೀಡಿ ಪ್ರತಿ ಗ್ರಾಂಗೆ 2 ಸಾವಿರದಂತೆ ಮಾರಾಟ ಮಾಡಲು ತನ್ನ ಬಳಿ ನೀಡುತ್ತಿದ್ದು, ಆಟೋ ರಿಕ್ಷಾದ ಮೂಲಕ ಗಿರಾಕಿಗಳಿಗೆ ಸಾಗಿಸಿ ಮಾರಾಟ ಮಾಡುತ್ತಿರುವುದಾಗಿ ಹಾಗೂ ಇದೇ ದಿನ ಅವರು ನೀಡಿದ್ದ ಮಾದಕ ವಸ್ತುವನ್ನು ತಾನು ಸೇವಿಸಿರುವುದಾಗಿ ತಿಳಿಸಿದ್ದಾನೆ.

ಬಳಿಕ ಮಹಮ್ಮದ್ ನೌಶಾದ್ ನನ್ನು ಬೆಳ್ತಂಗಡಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಆರೋಪಿ THC-Marujuana ಮತ್ತು AMP- Amphetamine ನನ್ನು ಸೇವಿಸಿರುವುದನ್ನು ದೃಢಪಡಿಸಿ ಪ್ರಮಾಣಪತ್ರ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮಾದಕ ವಸ್ತು ಸೇವನೆ ಹಾಗೂ ಮಾರಾಟದಲ್ಲಿ ತೊಡಗಿದ್ದ ಆರೋಪದಡಿ ಮಹಮ್ಮದ್ ನೌಶಾದ್ ಹಾಗೂ ಆರೋಪಿತನಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ಸಹೋದರರಾದ ಹಮ್ಜತ್ ಖರಾರ್, ಲತೀಫ್ ಮತ್ತು ಸಿದ್ದೀಕ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆ.3 ರಂದು ಎನ್‌ಡಿಪಿಎಸ್‌ ಕಾಯ್ದೆ ಕಲಂ 27(b), 22(a) ಹಾಗೂ 20(b)(ii)(A) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ವಾರಂಟ್ ನಲ್ಲಿ ಬಂಧನ: ಮಹಮ್ಮದ್ ನೌಷದ್ ವಿರುದ್ಧ ಈ ಹಿಂದೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ 03-01-2026 ರಂದು ಕುವೆಟ್ಟು ಗ್ರಾಮದಲ್ಲಿ ಪತ್ತೆಯಾದ ಎಮ್.ಡಿ.ಎಮ್.ಎ ಮಾದಕವಸ್ತು ಮಾರಾಟ ಹಾಗೂ ಸಾಗಾಟ ಮಾಡಿದ ಪ್ರಕರಣ ದಾಖಲಾಗಿದ್ದು .ಮಂಗಳೂರು ಸೆಷನ್ಸ್ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದರಿಂದ ನ್ಯಾಯಾಲಯ ಬಂಧನದ ವಾರಂಟ್ ಕೂಡ ಜಾರಿ ಮಾಡಿದ್ದರು. ಈ ವಾರಂಟ್ ಪ್ರಕರಣದಲ್ಲಿ ಬೆಳ್ತಂಗಡಿ ಪೊಲೀಸರು ಆರೋಪಿ ಮಹಮ್ಮದ್ ನೌಷದ್ ನನ್ನು ಬಂಧಿಸಿ ಆ.4 ರಂದು ಮಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಪ್ರಕೃತಿ ಚಿಕಿತ್ಸಾ ಹಾಗೂ ಯೋಗ ವಿಜ್ಞಾನ ಕಾಲೇಜು: ಬಿಎನ್‌ವೈಎಸ್ ವಿದ್ಯಾರ್ಥಿಗಳ ಮತ್ತು ಪಿಜಿ ವಿದ್ಯಾರ್ಥಿಗಳ ಶಿಷ್ಯೋಪನಯನ

Suddi Udaya

ಉಜಿರೆ ಶ್ರೀ ಧ. ಮಂ.ಪದವಿ ಪೂರ್ವ ಕಾಲೇಜಿನಲ್ಲಿ “ಭಿತ್ತಿಪತ್ರಿಕೆ ಅನಾವರಣ”

Suddi Udaya

ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಬೆಳ್ತಂಗಡಿ ಶಾಂತಾ ಬಂಗೇರರವರಿಗೆ ಸನ್ಮಾನ

Suddi Udaya

ರಾಜ್ಯದ ಟಾಪ್ 10 ರ‍್ಯಾಂಕ್‌ಗಳಲ್ಲಿ ಆಳ್ವಾಸ್‌ನ 45 ವಿದ್ಯಾರ್ಥಿಗಳು

Suddi Udaya

ರಾಯಚೂರು ವೀರಸಾವರ್ಕರ್ ಯೂಥ್ ಅಸೋಸಿಯೇಷನ್ ವತಿಯಿಂದ ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಅರಸಿನಮಕ್ಕಿ ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya
error: Content is protected !!