32.3 C
ಪುತ್ತೂರು, ಬೆಳ್ತಂಗಡಿ
September 19, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಮಿತ್ತಬಾಗಿಲು ಕೋಳಿ ಅಂಕದ ಮೇಲೆ ಬೆಳ್ತಂಗಡಿ ಪೊಲೀಸ್ ದಾಳಿ

ಬೆಳ್ತಂಗಡಿ : ಅಕ್ರಮವಾಗಿ ಅರಣ್ಯ ಪ್ರದೇಶದಲ್ಲಿ ಕೋಳಿ ಅಂಕ ನಡೆಯುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಮೂವರನ್ನು ಬಂಧಿಸಿ, ಕೋಳಿ ಅಂಕ ನಡೆಸಲು ಬಳಸಿದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಕುಕ್ಕಾವು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿದ್ದ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಸಬ್ ಇನ್ಸ್‌ಪೆಕ್ಟರ್ ಆನಂದ್.ಎಂ ನೇತೃತ್ವದ ತಂಡ ಆ.4 ರಂದು ಮಧ್ಯಾಹ್ನ 2 ಗಂಟೆಗೆ ದಾಳಿ ಮಾಡಿದ್ದಾರೆ.ಪೊಲೀಸ್ ದಾಳಿ ವೇಳೆ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಚಂದ್ರಕಾಂತ, ಕುಕ್ಕಾವು ನಿವಾಸಿ ಶೇಖರ, ಕೊಲ್ಲಿ ನಿವಾಸಿ ನಾರಾಯಣ ಎಂಬವರನ್ನು ಬಂಧಿಸಿದ್ದು ಉಳಿದ ಆರೋಪಿಗಳು ಪೊಲೀಸರನ್ನು ನೋಡಿ ಪರಾರಿಯಾಗಿದ್ದು ಅವರಿಗಾಗಿ ಬಲೆ ಬಿಸಲಾಗಿದೆ.

ದಾಳಿ ವೇಳೆ ಒಂದು ಕೋಳಿ, ಒಂದು ಬಾಳು(ಸಣ್ಣಕತ್ತಿ), 1910 ರೂಪಾಯಿ ಹಣ,ಎರಡು ಮೋಟರ್ ಬೈಕ್, ಒಂದು ಆಟೋ ರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮೂವರು ಆರೋಪಿಗಳು ಮತ್ತು ಇತರ ಪರಾರಿಯಾದವರ ವಿರುದ್ಧ ಬಿಎನ್‌ಎಸ್‌ ಕಲಂ 112, ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 87 ಹಾಗೂ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ-1960ರ ಕಲಂ 11(1) ಅಡಿಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

Related posts

ಅಳದಂಗಡಿ: ಶ್ರೀ ಸತ್ಯದೇವತಾ ದೈವಸ್ಥಾನದ ವತಿಯಿಂದ ಪುಸ್ತಕ ವಿತರಣಾ ಸಮಾರಂಭ ಮತ್ತು ಶಿವಪ್ರಸಾದ್ ಅಜಿಲರಿಗೆ ಪೌರ ಸನ್ಮಾನ ಪೂರ್ವಭಾವಿ ಸಭೆ

Suddi Udaya

ವಲಯ ಉಪಾಧ್ಯಕ್ಷರ ಮೊದಲ ಅಧಿಕೃತ ಭೇಟಿ: ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

Suddi Udaya

ನಾರಾವಿ ಬಿಜೆಪಿ ಕಾರ್ಯಾಲಯದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ತಣ್ಣೀರುಪಂತ : ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ವಾಕಿಂಗ್ ಸ್ಟಿಕ್ ಹಸ್ತಾಂತರ

Suddi Udaya

ಎ.30 ಉಜಿರೆಯಲ್ಲಿ‌ ಬೃಹತ್ ರಕ್ತದಾನ ಶಿಬಿರ

Suddi Udaya

ಕೊಕ್ಕಡ ಜೇಸಿಐ ಕಪಿಲಾ ಘಟಕದಿಂದ ಶ್ರೀಧರ ರಾವ್ ಕೆ. ರವರಿಗೆ “ಕಪಿಲಾಶ್ರೀ 2025” ಪ್ರಶಸ್ತಿ

Suddi Udaya
error: Content is protected !!