28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ರುಡ್‌ಸೆಟ್ ನಲ್ಲಿ ಸಿ.ಸಿ. ಕ್ಯಾಮೆರಾ ಅಳವಡಿಸುವಿಕೆ ಮತ್ತು ಸರ್ವಿಸ್ ತರಬೇತಿ ಸಮಾರೋಪ ಸಮಾರಂಭ

ಉಜಿರೆ : ಉದ್ಯಮದಲ್ಲಿ ಯಶಸ್ಸು ಸಾಧಿಸಲು ಬೇರೆಯವರ ಬೆಂಬಲವನ್ನು ನಿರೀಕ್ಷಿಸದೆ ಸ್ವಂತ ಪರಿಶ್ರಮ, ಆತ್ಮವಿಶ್ವಾಸ ಹಾಗೂ ದೃಢ ಸಂಕಲ್ಪದೊಂದಿಗೆ ಮುನ್ನಡೆಯಬೇಕು ಎಂದು ಉಜಿರೆಯ “ರಮ್ಯ ಫ್ಯಾನ್ಸಿ ಮಾಲಕರು ಹಾಗೂ ಉಜಿರೆ ವರ್ತಕರ ಸಂಘದ ಅಧ್ಯಕ್ಷ ಪ್ರಸಾದ್ ಬಿ.ಎಸ್ ಅವರು ಹೇಳಿದರು.

ಅವರು ರುಡ್‌ಸೆಟ್ ಸಂಸ್ಥೆ, ಸಿದ್ಧವನ, ಉಜಿರೆಯಲ್ಲಿ ಆಯೋಜಿಸಲಾದ ಸಿ.ಸಿ. ಕ್ಯಾಮೆರಾ ಅಳವಡಿಸುವಿಕೆ ಮತ್ತು ಸರ್ವಿಸ್ ತರಬೇತಿ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ತರಬೇತಿ ಪೂರ್ಣಗೊಳಿಸಿದ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಿ ಮಾತನಾಡಿದರು. ತಮ್ಮ ಉದ್ಯಮ ಪಯಣದ ಅನುಭವಗಳನ್ನು ಹಂಚಿಕೊಂಡ ಅವರು, ಉದ್ಯಮದ ಬೆಳವಣಿಗೆ, ಸವಾಲುಗಳನ್ನು ಎದುರಿಸುವ ಬಗೆ ಹಾಗೂ ಯಶಸ್ಸಿನ ಸೂತ್ರಗಳ ಕುರಿತು ಶಿಬಿರಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ರುಡ್‌ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಪಿ. ವಿಜಯ ಕುಮಾರ್ ಅವರು ಮಾತನಾಡಿ, ಇಂದಿನ ಆಧುನಿಕ ತಂತ್ರಜ್ಞಾನಗಳನ್ನು ಸಮರ್ಥವಾಗಿ ಬಳಸಿಕೊಂಡು ಉದ್ಯಮದಲ್ಲಿ ಪ್ರಗತಿ ಸಾಧಿಸಬೇಕು ಎಂದು ಕರೆ ನೀಡಿದರು.

ತರಬೇತಿಯ ಅತಿಥಿ ಉಪನ್ಯಾಸಕಾ ಗುರುರಾಜ್ ಕೆ.ಎಸ್ ಅವರು ಮಾತನಾಡಿ ತರಬೇತಿಯನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಶುಭ ಹಾರೈಸಿದರು. ಸಂಸ್ಥೆಯ ನಿರ್ದೇಶಕ ಸುನಿಲ್ ಜಿ. ನಾಯ್ಕೆ ಸ್ವಾಗತಿಸಿದರು. ಸಂಸ್ಥೆಯ ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.  ಉಪನ್ಯಾಸಕ ಕೆ. ಕರುಣಾಕರ ಜೈನ್ ಅವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮವು ರಮೇಶ್, ನಿಖಿಲ್ ಹಾಗೂ ಜಗನ್ನಾಥ ಅವರ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ಈ ಸಂದರ್ಭದಲ್ಲಿ ಶಿಬಿರಾರ್ಥಿಗಳಾದ ಜಗದೀಶ್ ಹಾಗೂ ಅಶೋಕ್ ಅವರು ತರಬೇತಿಯ ಅನುಭವಗಳನ್ನು ಹಂಚಿಕೊಂಡರು.

Related posts

ವಾಣಿ ಶಿಕ್ಷಣ ಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕೊಡಿಯಾಲಬೈಲು ಸ.ಹಿ.ಪ್ರಾ. ಶಾಲೆಯಲ್ಲಿ ಕೈ ತೊಳೆಯುವ ನೀರಿನ ಘಟಕ ಉದ್ಘಾಟನೆ

Suddi Udaya

ಮಧ್ಯಪ್ರದೇಶದಲ್ಲಿ ನಡೆದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ: ಎಸ್. ಡಿ. ಎಂ ಆಂ.ಮಾ. ಶಾಲೆ ರಾಜ್ಯ ಪಠ್ಯಕ್ರಮದ, ವಿದ್ಯಾರ್ಥಿಗಳಾದ ಅಧಿಶ್ ಬಿ. ಸಿ ಮತ್ತು ಸಚಿತ್ ಭಟ್ ಅತ್ಯುತ್ತಮ ಸಂಶೋಧನೆ ಯ ಹೆಗ್ಗಳಿಕೆ

Suddi Udaya

ಚಾರ್ಮಾಡಿ : ಅನ್ನಾರ್ ನದಿಯ ಸೇತುವೆಯ ಅಡಿಯಲ್ಲಿ ದನದ ತಲೆ ಸೇರಿದಂತೆ ಅವಶೇಷಗಳು ಪತ್ತೆ

Suddi Udaya

ಭಾರಿ ಮಳೆಗೆ ಸುಲ್ಕೇರಿ ಅಣ್ಣು ಪೂಜಾರಿ ರವರ ಮನೆ ಸಂಪೂರ್ಣ ಹಾನಿ: ಸ್ಥಳಕ್ಕೆ ರಕ್ಷಿತ್ ಶಿವಾರಂ ಭೇಟಿ

Suddi Udaya

ಧರ್ಮಸ್ಥಳ: ಡಾ.ಹೆಗ್ಗಡೆಯವರ ರಾಜ್ಯ ಸಭಾ ನಿಧಿಯಿಂದ 100 ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಮಂಜೂರು

Suddi Udaya
error: Content is protected !!