28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆ ಬರೆದ ‘ತ್ಯಾಗಮಯಿ ಮೊಳಹಳ್ಳಿ’ ಕೃತಿ ಬಿಡುಗಡೆ


ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿ ರಂಗಕ್ಕೆ ಭದ್ರಬುನಾದಿ ಹಾಕಿದ ಕೀರ್ತಿಶೇಷ ಮೊಳಹಳ್ಳಿ ಶಿವರಾವ್ ಅವರ ಜೀವನಾದರ್ಶ, ತ್ಯಾಗ, ಸಂಘಟನಾ ಶಕ್ತಿ ಸಮಾಜಕ್ಕೆ ಸದಾ ಪ್ರೇರಣೆ. ಕರಾವಳಿಯಲ್ಲಿ ಮೊಳಹಳ್ಳಿ ಶಿವರಾವ್ ಅವರು ಬಿತ್ತಿದ ಸಹಕಾರ ಬೀಜ ಇಂದು ಬೃಹತ್ ವೃಕ್ಷವಾಗಿ ಬೆಳೆದು ಸಾವಿರಾರು ಕುಟುಂಬಗಳ ಬದುಕಿಗೆ ಆಶ್ರಯವಾಗಿದೆ. ಇಂತಹ ಮಹಾನ್ ವ್ಯಕ್ತಿತ್ವದ ಸಾಧನೆ ಮತ್ತು ಸಹಕಾರಿ ಕ್ಷೇತ್ರಕ್ಕೆ ಅವರು ನೀಡಿದ ಅಮೂಲ್ಯ ಕೊಡುಗೆಗಳನ್ನು ಸಮಗ್ರವಾಗಿ ದಾಖಲಿಸಿರುವ ‘ತ್ಯಾಗಮಯಿ ಮೊಳಹಳ್ಳಿ’ ಗ್ರಂಥ ಯುವಪೀಳಿಗೆಗೆ ಸ್ಫೂರ್ತಿ ನೀಡುವ ಮೌಲಿಕ ಕೃತಿಯಾಗಿದೆ ಎಂದು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದರು.

ಅಂಕಣಕಾರ, ಕ್ರೀಡಾ ಲೇಖಕ ಎಸ್.ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆ ಬರೆದ ‘ತ್ಯಾಗಮಯಿ ಮೊಳಹಳ್ಳಿ’ ಕೃತಿಯನ್ನು ಸೋಮವಾರ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ಬಿಡುಗಡೆಗೊಳಿಸಿ ಮಾತನಾಡಿದರು. 

ಬ್ಯಾಂಕಿನ ಪ್ರಧಾನ ಕಚೇರಿಯ ಕಿರಿಯ ನಿರೀಕ್ಷಕರು ಹಾಗೂ ಪತ್ರಿಕೋದ್ಯಮದಲ್ಲಿ ಕ್ರೀಡಾ ಬರಹಗಾರರಾಗಿ ಸುಮಾರು 35 ವರ್ಷಗಳಿಂದ ಗುರುತಿಸಿಕೊಂಡಿರುವ ಜಗದೀಶ್ಚಂದ್ರ ಅಂಚನ್ ಅವರು ‘ತ್ಯಾಗಮಯಿ ಮೊಳಹಳ್ಳಿ’ ಕೃತಿಯ ಲೇಖಕರಾಗಿದ್ದಾರೆ.

ಈ ಸಂದರ್ಭದಲ್ಲಿ ನಬಾರ್ಡ್ ಸಿಜಿಎಂ ಸಂಗೀತಾ ಕರ್ತ, ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್‌ಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ವಿನಯಕುಮಾರ್ ಸೂರಿಂಜೆ, ನಿರ್ದೇಶಕ ಅಶೋಕ್ ಕುಮಾರ್ ಶೆಟ್ಟಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್, ಮಹಾಪ್ರಬಂಧಕ ಸುನೀಲ್ ಕುಮಾರ್ ಹೊಳ್ಳ, ಸಹಕಾರ ಸಂಘಗಳ ದ.ಕ. ಜಿಲ್ಲಾ ಉಪನಿಬಂಧಕ ರಮೇಶ್ ಎಚ್.ಎನ್., ಸಹಾಯಕ ನಿಬಂಧಕ ಸುಧೀರ್ ಕುಮಾರ್, ಕೃತಿಕಾರ ಎಸ್.ಜಗದೀಶ್ಚಂದ್ರ ಅಂಚನ್ ಸೂಟರ್‌ಪೇಟೆ ಉಪಸ್ಥಿತರಿದ್ದರು. ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರೂಪಿಸಿದರು.

Related posts

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿಯ ಸಾಧನೆ

Suddi Udaya

ಹಳೆಪೇಟೆಯಿಂದ ಕುತ್ರೋಟ್ಟು ರಸ್ತೆ ದುರಸ್ತಿಪಡಿಸುವ ಬಗ್ಗೆ ಕುಂಟಿನಿ ಕಾಂಗ್ರೆಸ್ ಬೂತ್ ಸಮಿತಿಯಿಂದ ಮನವಿ

Suddi Udaya

ಬೆಳ್ತಂಗಡಿ: ಜೈ ಕರ್ನಾಟಕ ಗಾಯಕರ ಬಳಗದಿಂದ ತಾಲೂಕು ಮಟ್ಟದ ಸದಸ್ಯತ್ವ ನೋಂದಾವಣೆ ಮತ್ತು ತಾಲೂಕು ಪದಾಧಿಕಾರಿಗಳ ಆಯ್ಕೆ

Suddi Udaya

ಕೊಕ್ಕಡ ಗ್ರಾ.ಪಂ. ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ತಿರುಮಲೇಶ್ವರ ಭಟ್ಟರಿಗೆ ರಾಷ್ಟ್ರಮಟ್ಟದ ಕ್ರೀಡಾಕೂಟ ಪ್ರಶಸ್ತಿ

Suddi Udaya

ಉಜಿರೆ: ಮಂಗಳೂರು ವಿ.ವಿ. ಅಂತರ ಕಾಲೇಜು ವಾಲಿಬಾಲ್ ಟೂರ್ನಿ

Suddi Udaya
error: Content is protected !!