28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಸಮಸ್ಯೆಗಳ ಪರಿಹಾರಕ್ಕೆ ಆರೋಗ್ಯ ಸಚಿವರಿಗೆ ಎಸ್‌ಡಿಪಿಐ ಮನವಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಇಂದು ಭೇಟಿ ನೀಡಿದ ಆರೋಗ್ಯ ಸಚಿವರಾದ ಯು.ಟಿ. ಖಾದರ್ ಅವರಿಗೆ ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ಕ್ಷೇತ್ರಧ್ಯಕ್ಷ ಅಕ್ಬರ್ ಬೆಳ್ತಂಗಡಿ ಅವರ ನೇತೃತ್ವದಲ್ಲಿ ಆಸ್ಪತ್ರೆಯ ವಿವಿಧ ಸಮಸ್ಯೆಗಳ ಕುರಿತು ಮನವಿ ಪತ್ರ ಸಲ್ಲಿಸಲಾಯಿತು.

ಮನವಿಯಲ್ಲಿ ಆಸ್ಪತ್ರೆಯಲ್ಲಿ ಅಗತ್ಯ ಔಷಧಿಗಳ ಕೊರತೆ, ರಕ್ತ ಪರೀಕ್ಷಾ ಕೇಂದ್ರದಲ್ಲಿ ಅಗತ್ಯ ಕಿಟ್‌ಗಳ ಅಭಾವ, ಹೊರರೋಗಿಗಳು ಹಾಗೂ ಹಿರಿಯ ನಾಗರಿಕರಿಗೆ ಸಮರ್ಪಕ ಆಸನ ವ್ಯವಸ್ಥೆಯ ಕೊರತೆ, ರೇಡಿಯಾಲಜಿ (ಸ್ಕ್ಯಾನಿಂಗ್) ಸೇವೆಯ ಅಲಭ್ಯತೆ, ಆಡಳಿತಾತ್ಮಕ ಸಮನ್ವಯದ ಕೊರತೆ ಸೇರಿದಂತೆ ಹಲವು ಸಮಸ್ಯೆಗಳನ್ನು ವಿವರಿಸಿ, ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ದೊರೆಯುವಂತೆ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಯಿತು.

ಅಲ್ಲದೆ, ಆಸ್ಪತ್ರೆಯಲ್ಲಿ ಅಗತ್ಯ ಸಿಬ್ಬಂದಿ ನೇಮಕ, ಔಷಧಿ ಹಾಗೂ ವೈದ್ಯಕೀಯ ಉಪಕರಣಗಳ ಸಮರ್ಪಕ ಲಭ್ಯತೆ ಕಲ್ಪಿಸುವುದು, ಸ್ಕ್ಯಾನಿಂಗ್ ಸೇರಿದಂತೆ ಅಗತ್ಯ ಸೇವೆಗಳನ್ನು ಪುನರಾರಂಭಿಸುವುದು ಹಾಗೂ ಆಸ್ಪತ್ರೆಯ ಆಡಳಿತ ವ್ಯವಸ್ಥೆಯನ್ನು ಸುಧಾರಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಯಿತು.

ಮನವಿ ಸ್ವೀಕರಿಸಿದ ಯು.ಟಿ. ಖಾದರ್ ಅವರು ಆಸ್ಪತ್ರೆಯ ಸಮಸ್ಯೆಗಳ ಕುರಿತು ಸಂಬಂಧಪಟ್ಟ ಅಪಕ್ಷದರಿಗಳಿಂದ ವರದಿ ಪಡೆದು, ಸಾರ್ವಜನಿಕರ ಹಿತದೃಷ್ಟಿಯಿಂದ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ನಮಾಝ್ ಶರೀಫ್ ಕಟ್ಟೆ, ಕ್ಷೇತ್ರ ಮುಖಂಡರಾದ ಸಾಲಿ ಮದ್ದಡ್ಕ, ಅಶ್ರಫ್ ಕಟ್ಟೆ, ಫಝಲ್ ಉಜಿರೆ, ಸಲೀಂ ಲಾಯಿಲಾ, ಉಪಸ್ಥಿತರಿದ್ದರು.

Related posts

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆಯುವ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ತೆಂಕಕಾರಂದೂರು: ಗಾಳಿ ಮಳೆಗೆ ನೆಲಕ್ಕುರುಳಿದ 200 ವರ್ಷದ ಪುರಾತನ ಮರ

Suddi Udaya

ತೋಟತ್ತಾಡಿ ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ ನಲ್ಲಿ ಗುರುಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ಪದಪ್ರಧಾನ

Suddi Udaya

ಓಡಿಲ್ನಾಳ ಸ.ಉ.ಪ್ರಾ. ಶಾಲಾ ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya

ಬೆಳ್ತಂಗಡಿ ಬಿಷಪ್ ರಿಗೆ ಲಯನ್ಸ್ ಕ್ಲಬ್ ನಿಂದ ಬೆಳ್ಳಿಹಬ್ಬ ವರ್ಷದ “ಗೌರವಾಭಿನಂದನೆ”

Suddi Udaya
error: Content is protected !!