28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬ್ರೈಟ್ ಹೊರೈಝನ್ ಇಂಟರ್‌ನ್ಯಾಷನಲ್ ಸ್ಕೂಲ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭೆಗೆ ‘ವಿಂಗ್ಸ್ ಆಫ್ ವಿಸ್ಡಮ್’ ವೇದಿಕೆ

ವೇಣೂರು: ಬ್ರೈಟ್ ಹೊರೈಝನ್ ಇಂಟರ್‌ನ್ಯಾಷನಲ್ ಸ್ಕೂಲ್‌ನಲ್ಲಿ ಆ. 5ರಂದು ಶಾಲೆಯ ಮಾಸಿಕ ನಿಯತಕಾಲಿಕೆಯ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು.

ಮಾಸಿಕ ನಿಯತಕಾಲಿಕೆಯನ್ನು ಬರೋಡ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಅವರು ಲೋಕಾರ್ಪಣೆಗೊಳಿಸಿದರು. ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿರುವ ಸಾಹಿತ್ಯಾಸಕ್ತಿ, ಬರವಣಿಗೆ ಕೌಶಲ್ಯ ಹಾಗೂ ಸೃಜನಶೀಲ ಪ್ರತಿಭೆಯನ್ನು ಬೆಳೆಸುವಲ್ಲಿ ಇಂತಹ ಮಾಸಿಕ ನಿಯತಕಾಲಿಕೆಗಳು ಮಹತ್ವದ ಪಾತ್ರ ವಹಿಸುತ್ತವೆ. ವಿದ್ಯಾರ್ಥಿಗಳ ಪ್ರತಿಭೆಯನ್ನು ಸಮಾಜದ ಮುಂದೆ ಪರಿಚಯಿಸುವ ಉತ್ತಮ ವೇದಿಕೆಯಾಗಿರುವ ಈ ಪ್ರಯತ್ನ ಶ್ಲಾಘನೀಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶಾಲೆಯ ಅಧ್ಯಕ್ಷ ಡಾ. ಶರತ್ ಗೋರೆ, ಪ್ರಾಂಶುಪಾಲರಾದ ಡಾ. ಶಶಿಧರ್, ಕಾರ್ಯದರ್ಶಿ ಶಾಂಭವಿ ಗೋರೆ, ಯು.ಕೆ. ಕನ್ಸ್ಟ್ರಕ್ಷನ್‌ನ ಮಾಲೀಕರಾದ ಮಹಮ್ಮದ್ ಇರ್ಫಾನ್ ಸೇರಿದಂತೆ ಶಾಲೆಯ ಶಿಕ್ಷಕ ವೃಂದ, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಮಕ್ಕಳ ದಿನಾಚರಣೆ: ಹೆತ್ತವರ ಪೋಷಕರ/ಮಹಾಸಭೆ

Suddi Udaya

ಬೆಳ್ತಂಗಡಿ ಒಕ್ಕಲಿಗ ಗೌಡರ ಯುವ ವೇದಿಕೆ ನೇತೃತ್ವದಲ್ಲಿ,ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಕೆಂಪೇಗೌಡ ಜಯಂತಿ ಆಚರಣೆ, ಬೃಹತ್ ರಕ್ತದಾನ ಶಿಬಿರ ಮತ್ತು ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಸಿ.ಬಿ.ಎಸ್.ಇ ಫಲಿತಾಂಶ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಸಹಯೋಗದಲ್ಲಿರೋಟಾಲಯ ಸಂಗೀತ ಸ್ಪರ್ಧೆ

Suddi Udaya

ಚೆಕ್ ಬೌನ್ಸ್ ಪ್ರಕರಣ: ನ್ಯಾಯಾಲಯಕ್ಕೆ ಐದು ವರ್ಷ ಹಾಜರಾಗದ ಆರೋಪಿಯ ಬಂಧನ

Suddi Udaya

ವಾಲಿಬಾಲ್ ಪಂದ್ಯಾಟ : ಬೆಳ್ತಂಗಡಿ ಶ್ರೀ ಗುರುದೇವ ಪದವಿ ಕಾಲೇಜಿನ ವಿದ್ಯಾರ್ಥಿ ನಿಸಾರ್ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!