32.3 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವಾರ್ಷಿಕ ಮಹಾಸಭೆ

ಕುವೆಟ್ಟು: ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ದಕ್ಷಿಣ ಕನ್ನಡ- ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ 24ನೇ ವಾರ್ಷಿಕ ಮಹಾಸಭೆಯು ಆ. 4 ರoದು ಗುರುವಾಯನಕೆರೆ ಛಾಯಾಭವನದಲ್ಲಿ ವಲಯದ ಅಧ್ಯಕ್ಷ ರವಿ ಪೂಜಾರಿ ನಾರಾವಿ ಇವರ‌ ಅಧ್ಯಕ್ಷತೆಯಲ್ಲಿ ಜರಗಿತು.

ಫೋಟೋಗ್ರಾಫರ್ ಅಸೋಸಿಯೇಷನ್ ದ ಕ ಉಡುಪಿ ಜಿಲ್ಲಾ ಅಧ್ಯಕ್ಷ ನವೀನ್ ರೈ ಪoಜಳ ವಾರ್ಷಿಕ ಮಹಾಸಭೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಅವರು ನಮ್ಮ ಸoಘಟನೆ ಇನ್ನಷ್ಟು ಬೆಳೆಯಬೇಕಾದರೆ ಸದಸ್ಯರ ಸಹಕಾರ ಅತ್ಯಗತ್ಯವಾಗಿದೆ ಮುoದಿನ ದಿನಗಳಲ್ಲಿ ನಮ್ಮ ಸದಸ್ಯರ ಕಷ್ಟಗಳಿಗೆ ಸ್ಪoದಿಸುವ ಮೂಲಕ ಸೌತ್ ಕೆನರಾ ಫೋಟೋಗ್ರಾಫರ್ ಆಸೋಸಿಯೇಷನ್ ಸಂಘಟನೆಯನ್ನು ಬಲಪಡಿಸೋಣ ಎoದು ನುಡಿದರು.

ಮುಖ್ಯ ಅತಿಥಿಗಳಾಗಿ ಎಸ್ ಕೆ ಪಿ ಎ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಜಯ್ ಮoಗಳೂರು, ಜಿಲ್ಲಾ ಉಪಾಧ್ಯಕ್ಷರಾದ ದೇವರಾಜ್ ಶೆಟ್ಟಿ ಸುರತ್ಕಲ್, ಜಿಲ್ಲಾ ಸಾoಸ್ಕ್ರತಿಕ ಕಾರ್ಯದರ್ಶಿ ಸುರೇಶ್ ಬಿ ಕೌಡoಗೆ, ಎಸ್ ಕೆ ಪಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕ ಭಾರದ್ವಾಜ್ ಉಜಿರೆ, ಜಿಲ್ಲಾ ಕಟ್ಟಡ ಸಮಿತಿಯ ಸದಸ್ಯರಾದ ಕೆ ವಸoತ್ ಶರ್ಮಾ ಉಜಿರೆ, ವಲಯದ ಗೌರವಾಧ್ಯಕ್ಷ ವಿಲ್ಸನ್ ಗೋನ್ಸಾಲಿಸ್ ಬೆಳ್ತಂಗಡಿ, ಸ್ಥಾಪಕಾಧ್ಯಕ್ಷ ಪಾಲಾಕ್ಷ ಪಿ ಸುವರ್ಣ, ವಲಯದ ಉಪಾಧ್ಯಕ್ಷ ಹರ್ಷ ಬಳ್ಳಮoಜ, ಉಮೇಶ್ ಕುಲಾಲ್, ಪ್ರಧಾನ ಕಾರ್ಯದರ್ಶಿ ದಾಮೋದರ್ ಗುರುವಾಯನಕೆರೆ, ಕೋಶಾಧಿಕಾರಿ ಸುಜಿತ್ ರೈ ಪದ್ಮುoಜ ಉಪಸ್ಥಿತರಿದ್ದರು.

ವಲಯದ ಪ್ರಧಾನ ಕಾರ್ಯದರ್ಶಿ ದಾಮೋದರ್ ವಾರ್ಷಿಕ ವರದಿ ವಾಚಿಸಿದರು. ಕೋಶಾಧಿಕಾರಿ ಸುಜಿತ್ ರೈ ಲೆಕ್ಕ ಪತ್ರ ಮoಡಿಸಿದರು. ಈ ಸಂದರ್ಭದಲ್ಲಿ ವಾರ್ಷಿಕ ಮಹಾಸಭೆಗೆ ಆಗಮಿಸಿದ ಜಿಲ್ಲಾ ಪದಾಧಿಕಾರಿಗಳನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು. ಉಮೇಶ್ ಕುಮಾರ್ ಮದ್ದಡ್ಕ ಕಾರ್ಯಕ್ರಮ ನಿರೂಪಿಸಿದರು. ಗಣೇಶ್ ಹೆಗ್ಡೆ ನಾರಾವಿ ಪ್ರಾರ್ಥನೆ ಗೈದರು ವಲಯದ ಉಪಾಧ್ಯಕ್ಷ ಹರ್ಷ ಬಳ್ಳಮoಜ ಸ್ವಾಗತಿಸಿ. ಉಮೇಶ್ ಕುಲಾಲ್ ಧನ್ಯವಾದ ನೀಡಿದರು.

Related posts

ಉಜಿರೆ: ಮೌಲ್ಯ ನಾಯಕ್ ರವರಿಗೆ ಸ್ವರ್ಣಪದಕ ಹಸ್ತಾಂತರ

Suddi Udaya

ಕೊಕ್ರಾಡಿ: ಮನ್ಯೋಡಿಗುತ್ತು ನಿವಾಸಿ ರವಿ ಪೂಜಾರಿ ನಿಧನ

Suddi Udaya

ಕನ್ಯಾಡಿ-2 ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಸರಕಾರಿ ಸೇವೆಯಿಂದ ನಿವೃತ್ತರಾದ ಡಾ. ಕೆ. ಜಯಕೀರ್ತಿ ಜೈನ್ ರವರಿಗೆ ಅಭಿನಂದನಾ ಸಮಾರಂಭ

Suddi Udaya

ಮಾ.8: ಗುರುವಾಯನಕೆರೆ ಶಶಿಧರ ಶೆಟ್ಟಿಯವರ ನೇತೃತ್ವದಲ್ಲಿ ಭಾರತೀಯರ ಹೃದಯ ಸಾಮ್ರಾಟ್ “ಛತ್ರಪತಿ ಶಿವಾಜಿ” ಪ್ರಥಮ ನಾಟಕ : ನವಶಕ್ತಿ ಕ್ರೀಡಾಂಗಣದಲ್ಲಿ ಪ್ರದರ್ಶನ

Suddi Udaya
error: Content is protected !!