25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕವರದಿ

ಬೆಂಗಳೂರಿನ ವ್ಯಾಸರಾಜ ಮಠದ ಶ್ರೀ ವಿದ್ಯಾಶ್ರೀಶತೀರ್ಥ ಸ್ವಾಮೀಜಿ ಧರ್ಮಸ್ಥಳ ಭೇಟಿ

ಬೆಳ್ತಂಗಡಿ : ಬೆಂಗಳೂರಿನ ವ್ಯಾಸರಾಜ ಮಠದ (ಸೋಸಲೆ) ಪೂಜ್ಯ ಶ್ರೀ ಶ್ರೀ ೧೦೦೮ ವಿದ್ಯಾಶ್ರೀಶತೀರ್ಥ ಶ್ರೀಪಾದಂಗಳವರು ಬುಧವಾರ ಧರ್ಮಸ್ಥಳಕ್ಕೆ ಆಗಮಿಸಿದಾಗ ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು. ಪೂಜ್ಯ ಸ್ವಾಮೀಜಿವರು ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.

ಕ್ಷೇತ್ರದ ಪರವಾಗಿ ಡಿ. ಹರ್ಷೇಂದ್ರ ಕುಮಾರ್ ಪೂಜ್ಯ ಸ್ವಾಮೀಜಿಯವರನ್ನು ಭಕ್ತಿಪೂರ್ವಕ ಸ್ವಾಗತಿಸಿದರು. ಬಳಿಕ ಸ್ವಾಮೀಜಿಯವರ ಪಾದಪೂಜೆ ನೆರವೇರಿಸಲಾಯಿತು. ಸುಪ್ರಿಯಾ ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು. ಬಳಿಕ ಸಂಪ್ರದಾಯದಂತೆ ಪೂಜ್ಯ ಸ್ವಾಮೀಜಿಯವರನ್ನು ಹೆಗ್ಗಡೆಯವರ ನಿವಾಸ (ಬೀಡು) ಕ್ಕೆ ಗೌರವಪೂರ್ವಕ ಕರೆತಂದು ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಪೂಜ್ಯ ಸ್ವಾಮೀಜಿಯವರಿಗೆ ಗೌರವಾರ್ಪಣೆ ಮಾಡಿದರು.

ಧರ್ಮಸ್ಥಳದ ಚತುರ್ವಿಧ ದಾನಪರಂಪರೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕೆರೆಗಳಿಗೆ ಕಾಯಕಲ್ಪ, ಸ್ವ-ಉದ್ಯೋಗ ತರಬೇತಿ ಕೇಂದ್ರಗಳು, ಮಹಿಳಾಸಬಲೀಕರಣ ಮೊದಲಾದ ಬಹುಮುಖಿ ಸೇವಾಕಾರ್ಯಗಳ ಬಗ್ಗೆ ಡಿ. ಹರ್ಷೇಂದ್ರ ಕುಮಾರ್ ಪೂಜ್ಯ ಸ್ವಾಮೀಜಿಯವರಿಗೆ ಮಾಹಿತಿ ನೀಡಿದರು.

ಪೂಜ್ಯ ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಮಾಡುತ್ತಿರುವ ಲೋಕಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಪೂಜ್ಯ ಸ್ವಾಮೀಜಿಯವರು ಮೆಚ್ಚುಗೆ ವ್ಯಕ್ತಪಡಿಸಿ ಶುಭ ಹಾರೈಸಿದರು,ದೇವಳ ಪಾರುಪತ್ಯಗಾರ್ ಲಕ್ಷ್ಮೀನಾರಾಯಣ ರಾವ್, ಮಣೆಗಾರ್ ವಸಂತ ಭಟ್ ಮತ್ತು ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದು ಸಹಕರಿಸಿದರು.

Related posts

ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಕ್ಷೇತ್ರದ ಉಸ್ತುವಾರಿಗಳ ಸಭೆ

Suddi Udaya

ಓಡಿಲ್ನಾಳ ಶಾಲೆಯಲ್ಲಿ ನಡೆಯುತ್ತಿರುವ ವಾಣಿ ಪ.ಪೂ. ಕಾಲೇಜಿನ ಎನ್ನೆಸ್ಸೆಸ್‌ ಶಿಬಿರಕ್ಕೆ ವಿಭಾಗಾಧಿಕಾರಿ ಸವಿತಾ ಎರ್ಮಾಳ್ ಭೇಟಿ

Suddi Udaya

ಮರೋಡಿ: ದೇರಾಜೆ ಬೆಟ್ಟ ಎಂಬಲ್ಲಿಗೆ ಹೋಗುವ ಸಂಪರ್ಕ ರಸ್ತೆ ಕುಸಿತ

Suddi Udaya

ಉಜಿರೆಯ ಸ್ನೇಕ್ ಜಾಯ್ ರವರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವ ಇಂದಬೆಟ್ಟುವಿನಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಡ ಕನ್ಯಾಡಿ ಅಯುಷ್ಮಾನ್ ಆರೋಗ್ಯ ಕೇಂದ್ರ ದಾರಿದೀಪ ವ್ಯವಸ್ಥೆ ಹಾಗೂ ಹೈ ಮಾಸ್ಕ್ ದೀಪ ಅಳವಡಿಕೆ: ರಕ್ಷಿತ್ ಶಿವರಾಂ

Suddi Udaya
error: Content is protected !!