28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆಯ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ಮನೋವಿಜ್ಞಾನ ವಿಭಾಗಕ್ಕೆ ಪ್ರತಿಷ್ಠಿತ “ಇನ್‌ಸ್ಪಾ” ಶೈಕ್ಷಣಿಕ ಉತ್ಕೃಷ್ಟತಾ ಪ್ರಶಸ್ತಿ

ಉಜಿರೆ: ಭಾರತೀಯ ಶಾಲಾ ಮನೋವಿಜ್ಞಾನ ಸಂಘಟನೆ ವತಿಯಿಂದ ಉಜಿರೆಯ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ಮನೋವಿಜ್ಞಾನ ವಿಭಾಗಕ್ಕೆ ದೊರೆತ ಪ್ರತಿಷ್ಠಿತ “ಇನ್‌ಸ್ಪಾ” ಶೈಕ್ಷಣಿಕ ಉತ್ಕೃಷ್ಟತಾ ಪ್ರಶಸ್ತಿಯನ್ನು ಆ.5 ರಂದು ಚೆನ್ನೈನಲ್ಲಿ ಎನ್.ಕೆ.ಟಿ. ನೇಶನಲ್ ಮಹಿಳಾ ಕಾಲೇಜಿನಲ್ಲಿ ನಡೆದ ಹದಿನಾರನೆ “ಇನ್‌ಸ್ಪಾ” ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಎಸ್.ಡಿ.ಎಂ. ಕಾಲೇಜಿನ ಮನೋವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ. ವಂದನಾ ಜೈನ್ ಮತ್ತು ಉಪನ್ಯಾಸಕಿ ಅಶ್ವಿನಿ ಸ್ವೀಕರಿಸಿದರು.

ಎಸ್.ಡಿ.ಎಂ. ಕಾಲೇಜಿನ ಮನೋವಿಜ್ಞಾನ ವಿಭಾಗದ ಶೈಕ್ಷಣಿಕ ಗುಣಮಟ್ಟ, ತರಬೇತಿ, ಸಂಶೋಧನಾ ಸಾಧನೆ, ವಿದ್ಯಾರ್ಥಿಕೇಂದ್ರಿತ ಚಟುವಟಿಕೆಗಳು ಹಾಗೂ ಸಮಾಜಮುಖಿ ಸೇವೆ, ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ.
 ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಡೀನ್ ಹಾಗೂ ಎಲ್ಲಾ ಪ್ರಾಧ್ಯಾಪಕರು ಮನೋವಿಜ್ಞಾನ ವಿಭಾಗದ ಮುಖ್ಯಸ್ಥರು ಮತ್ತು ಎಲ್ಲಾ ಪ್ರಾಧ್ಯಾಪಕರನ್ನು ಅಭಿನಂದಿಸಿದ್ದಾರೆ.

Related posts

ನಾಳೆ ಬೆಳ್ತಂಗಡಿಗೆ ಜಿಲ್ಲಾಧಿಕಾರಿ ಭೇಟಿ

Suddi Udaya

ಬಂದಾರು: 9ನೇ ತರಗತಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಸುಲ್ಕೇರಿ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ವತಿಯಿಂದ ಆರೋಗ್ಯ ವಿಮೆಯ ಮಂಜೂರಾತಿ ಪತ್ರ ವಿತರಣೆ

Suddi Udaya

ವಾಣಿ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಪ.ಪೂ. ಕಾಲೇಜುಗಳ ಯೋಗಾಸನ ಸ್ಪರ್ಧೆ

Suddi Udaya

ಬೆಳಾಲಿನಲ್ಲಿ, ಹದಿನೆಂಟು ದಿನಗಳ ಭಗವದ್ಗೀತೆ ತರಗತಿಯ ಸಮಾರೋಪ

Suddi Udaya

ನೆರಿಯ : ಬೆಂಕಿ ತಗುಲಿ ಹಾನಿಯಾದ ಮನೆಗೆ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸಂಘ ಹಾಗೂ ವಾಣಿ ಶಿಕ್ಷಣ ಸಂಸ್ಥೆಯಿಂದ ಭೇಟಿ

Suddi Udaya
error: Content is protected !!