26.2 C
ಪುತ್ತೂರು, ಬೆಳ್ತಂಗಡಿ
September 22, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಕಾರ್ಫ್ ದಿನ ಆಚರಣೆ

ಉಜಿರೆ: ಉಜಿರೆಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಸ್ಕಾರ್ಫ್ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯ ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿ ಪಡೆದ ಗೈಡ್ ಕ್ಯಾಪ್ಟನ್ ಶಿಕ್ಷಕಿ ಶ್ರೀಮತಿ ಉಷಾ ಕೆ. ಅವರು ಭಾಗವಹಿಸಿ, ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆಗಳ ಮೂಲಕ ಸ್ಕಾರ್ಫ್‌ನ ಮಹತ್ವವನ್ನು ತಿಳಿಸಿದರು. “ಸ್ಕಾರ್ಫ್ ಕೇವಲ ಒಂದು ಬಟ್ಟೆಯಲ್ಲ. ಅದು ಸ್ಕೌಟ್ಸ್-ಗೈಡ್ಸ್ ಪ್ರತಿಜ್ಞೆ, ಏಕತೆ, ಶಿಸ್ತು, ನಾಯಕತ್ವ ಹಾಗೂ ನಿಸ್ವಾರ್ಥ ಸೇವೆಯ ಪ್ರತೀಕವಾಗಿದೆ” ಎಂದು ಅವರು ವಿದ್ಯಾರ್ಥಿಗಳಿಗೆ ಮನದಟ್ಟಾಗುವಂತೆ ವಿವರಿಸಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ಶಾಲೆಯ ಹಿರಿಯ ಶಿಕ್ಷಕಿ ಹಾಗೂ ಗೈಡ್ ಕ್ಯಾಪ್ಟನ್ ಶ್ರೀಮತಿ ಶೇಕ್ ಶಮೀಮ್ ಬಾನು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಗೈಡ್ ವಿದ್ಯಾರ್ಥಿನಿ ಧೃತಿ ಅವರು ನಿರೂಪಿಸಿದರು. ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ಸ್ಕೌಟ್ಸ್ ಮತ್ತು ಗೈಡ್ಸ್‌ನ ಆದರ್ಶಗಳನ್ನು ಪಾಲಿಸುವ ಸಂಕಲ್ಪ ಮಾಡಿದರು. ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.

Related posts

ಮದ್ದಡ್ಕ ಶ್ರೀ ರಾಮ ಸೇವಾ ಸಮಿತಿ, ವಿ.ಹಿಂ.ಪ. ಭಜರಂಗದಳ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಠಮಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಲವಂತಿಗೆ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಅ.4: ಕೊಕ್ಕಡ ಜೇಸಿಐಗೆ ಜೇಸಿ ವಲಯಾಧ್ಯಕ್ಷರ ಭೇಟಿ

Suddi Udaya

ಬಂಟ್ವಾಳ ನಗರ ಠಾಣೆಯ ಇರ್ಷಾದ್ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಪ್ರತಿಷ್ಠಿತ ಬಿಲ್ಲವ ಗುತ್ತು ಮನೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!