30.5 C
ಪುತ್ತೂರು, ಬೆಳ್ತಂಗಡಿ
September 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು ಮಳೆ ಹಾನಿ ಪ್ರದೇಶಕ್ಕೆ ರಕ್ಷಿತ್ ಶಿವರಾಂ ಭೇಟಿ : ಬೆಸ್ಟ್ ಫೌಂಡೇಶನ್ ವತಿಯಿಂದ ನೀರಿನ ಟ್ಯಾಂಕ್ ವಿತರಣೆ

ಬೆಳ್ತಂಗಡಿ: ತಾಲೂಕಿನ ಕೊಯ್ಯೂರು ಗ್ರಾಮದ ಕೋಡಿಬೆಟ್ಟು ಪ್ರದೇಶಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ, ಇತ್ತೀಚಿನ ಭಾರೀ ಮಳೆಯಿಂದ ಉಂಟಾದ ಹಾನಿಯನ್ನು ಪರಿಶೀಲಿಸಿದರು.

ಕೋಡಿಬೆಟ್ಟು ನಿವಾಸಿ ಹೈದರ್ ಅವರ ಮನೆಗೆ ಮರ ಬಿದ್ದ ಪರಿಣಾಮ ಕುಡಿಯುವ ನೀರಿನ ಟ್ಯಾಂಕ್ ಸಂಪೂರ್ಣವಾಗಿ ಹಾನಿಗೊಳಗಾಗಿತ್ತು. ಈ ಹಿನ್ನೆಲೆಯಲ್ಲಿ ಬೆಸ್ಟ್ ಫೌಂಡೇಶನ್ ವತಿಯಿಂದ ಅವರಿಗೆ ಹೊಸ ನೀರಿನ ಟ್ಯಾಂಕ್ ವಿತರಿಸಿ ನೆರವು ನೀಡಲಾಯಿತು.

ಈ ಸಂದರ್ಭದಲ್ಲಿ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಫೆರ್ನಾಂಡಿಸ್, ಮಾಜಿ ತಾಲೂಕು ಪಂಚಾಯತ್ ಸದಸ್ಯ ಪ್ರವೀಣ್ ಗೌಡ, ಪಕ್ಷದ ಮುಖಂಡ ಮಹಮ್ಮದ್ ಸಿದ್ದೀಕ್ ಮಲೆಬೆಟ್ಟು ಬೂತ್ ಸಮಿತಿ ಅಧ್ಯಕ್ಷ ಸಲೀಂ ಪಾತ್ರಾಲಾ, ಬೆಳ್ತಂಗಡಿ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅರುಣ್ ಲೋಬೊ ಹಾಗೂ ನವೀನ್ ಗೌಡ ಉಪಸ್ಥಿತರಿದ್ದರು.

ಸ್ಥಳೀಯರ ಸಮಸ್ಯೆಗಳನ್ನು ಆಲಿಸಿದ ರಕ್ಷಿತ್ ಶಿವರಾಂ, ಮಳೆಯಿಂದ ಹಾನಿಗೊಳಗಾದ ಕುಟುಂಬಗಳಿಗೆ ಅಗತ್ಯ ನೆರವು ತಲುಪಿಸುವ ನಿಟ್ಟಿನಲ್ಲಿ ತಮ್ಮಿಂದ ಸಾಧ್ಯವಾದ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.

Related posts

ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗೆ ನೂತನ ಕಟ್ಟಡ ನಿರ್ಮಾಣಕ್ಕೆ ರೂ.2 ಕೋಟಿ ಅನುದಾನ ಬಿಡುಗಡೆ: ಹರೀಶ್ ಪೂಂಜ

Suddi Udaya

ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯದಲ್ಲಿ ಎರಡನೇ ಸ್ಥಾನ ಪಡೆದ ಚಿನ್ಮಯ್ ಗೆ ಡಿ ವೀರೇಂದ್ರ ಹೆಗ್ಗಡೆ ದಂಪತಿಗಳು, ಹಾಗೂ ಡಿ. ಹರ್ಷೇಂದ್ರ ಕುಮಾರ್ ರವರಿಂದ ಅಭಿನಂದನೆ

Suddi Udaya

ಗಂಡಿಬಾಗಿಲು ಧರ್ಮೋಪದೇಶ ಶಾಲೆಯ ಮುಖ್ಯೋಪಾಧ್ಯಾಯ ಶಿಜು ಸಿ.ವಿ. ಗೆ ಸನ್ಮಾನ ಮತ್ತು ಬೀಳ್ಕೊಡುಗೆ

Suddi Udaya

ಆರಂಬೋಡಿ 137ನೇ ಬೂತ್ ನಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮ : ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆ

Suddi Udaya

ಬೆಳ್ತಂಗಡಿ: ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗಿರೀಶ್ ಮಟ್ಟಣ್ಣನವರ್, ಪ್ರದೀಪ್, ಜಯಂತ್ ಟಿ.

Suddi Udaya
error: Content is protected !!