28.3 C
ಪುತ್ತೂರು, ಬೆಳ್ತಂಗಡಿ
September 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

ಪಡಂಗಡಿ : ಪಡಂಗಡಿ ಗ್ರಾಮ ಪಂಚಾಯತಿನ 2026-27ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಆ. 6ರಂದು ಗ್ರಾಮ ಪಂಚಾಯತ್ ಆವರಣದಲ್ಲಿ ಪಂಚಾಯತ್ ಆಡಳಿತಾಧಿಕಾರಿ ಮೆಸ್ಕಾಂ ಬೆಳ್ತಂಗಡಿ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕ್ಲೇಮೆಂಟ್ ಬೆಂಜಮಿನ್ ಬ್ರಾಗ್ಸ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ರಾಜೇಂದ್ರ ಪ್ರಸಾದ್‌ ಗ್ರಾಮ ಸಭೆಯ ಮುನ್ನಡೆಸಿದರು. ಸಭೆಯಲ್ಲಿ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ವಸಂತ ಪೂಜಾರಿ, ಮಾಜಿ ಅಧ್ಯಕ್ಷೆ ಮೀನಾಕ್ಷಿ ಶೆಟ್ಟಿ, ಪಂಚಾಯತ್ ಮಾಜಿ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಮುಖಂಡರು, ಹಾಗೂ ವಿವಿಧ ಇಲಾಖೆ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಸಿಬ್ಬಂದಿ ವರ್ಗದವರು ಸಹಕರಿಸಿದರು. ಪಂಚಾಯತ್ ಅಭಿವೃದ್ಧಿ ಪುರುಷೋತ್ತಮ ಜಿ. ಸ್ವಾಗತಿಸಿದರು. ಕಾರ್ಯದರ್ಶಿ ಗಣೇಶ್ ಅನುಪಾಲನಾ ವರದಿ ವಾಚಿಸಿ ಕಾರ್ಯಕ್ರಮ ನಿರೂಪಿಸಿದರು. ಸಿಬ್ಬಂದಿಗಳಾದ ಸುನಿಲ್ ವಾರ್ಡ್ ಸಭೆಯಲ್ಲಿ ಬಂದ ಬೇಡಿಕೆಗಳ ವಿವರ ನೀಡಿದರು. ಇಲಾಖೆಯ ಅಧಿಕಾರಿಗಳು ವಿವಿಧ ಇಲಾಖಾ ಮಾಹಿತಿ ನೀಡಿದರು.

Related posts

ಲಾರಿ-ಬೈಕ್ ನಡುವೆ ಅಪಘಾತ ; ಬೈಕ್ ಸವಾರ ಮೃತ್ಯು

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಸ್ಸಾಂ ಮುಖ್ಯಮಂತ್ರಿ ಗೌರವಾರ್ಪಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಚಿವ ಎನ್.ಎಸ್. ಬೋಸರಾಜು ಭೇಟಿ

Suddi Udaya

ಸುಲ್ಕೇರಿ ಶ್ರೀ ರಾಮ ಶಾಲೆಗೆ ಶೇ. 100 ಫಲಿತಾಂಶ: ವಿದ್ಯಾರ್ಥಿ ತ್ರಿಷಾ ರಾಜ್ಯಕ್ಕೆ 10 ನೇ ರ್‍ಯಾಂಕ್

Suddi Udaya

ಕಣಿಯೂರು ಗ್ರಾಮ ಪಂಚಾಯತಿಯಲ್ಲಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya

ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಬೆಂಗಳೂರು ರಾಜೀವ ಗಾಂಧಿ ವಿಶ್ವವಿದ್ಯಾಲಯ ಕುಲಪತಿ ಡಾ. ಭಗವಾನ್ ಬಿ.ಸಿ ಭೇಟಿ

Suddi Udaya
error: Content is protected !!