26.9 C
ಪುತ್ತೂರು, ಬೆಳ್ತಂಗಡಿ
September 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಅಧ್ಯಕ್ಷರು ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯಕ್ಕೆ ಭೇಟಿ

ಧರ್ಮಸ್ಥಳ : ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರಿಯ ಅಧ್ಯಕ್ಷರಾದ ಅಲೋಕ್ ಕುಮಾರ್ ಅವರು ಗುರುವಾರ ಬೆಳಿಗ್ಗೆ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದರು.


ಹಿಂದೂ ಧರ್ಮದ ಚಟುವಟಿಕೆಗಳ ಬಗ್ಗೆ ಹಾಗೂ ಧಾರ್ಮಿಕ ವಿಚಾರಗಳ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ದೇವಸ್ಥಾನ ಪ್ರಮುಖರು, ಸಂತರ ಜೊತೆ ಸಮಾಲೋಚನೆ ನಡೆಸುವ ಉದ್ದೇಶದಿಂದ ಭೇಟಿ ನೀಡಿರುವ ವಿಹಿಂಪ ಅಂತಾರಾಷ್ಟ್ರೀಯ ಅಧ್ಯಕ್ಷರ ಕಾರ್ಯಕ್ರಮ ಮಹತ್ವ ಪಡೆದುಕೊಂಡಿದೆ.


ಗುರುವಾರ ಬೆಳಿಗ್ಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿಯಾಗಿ, ದೇವರ ದರ್ಶನ ಪಡೆದುಕೊಂಡರು. ಬಳಿಕ ಮಠಕ್ಕೆ ಭೇಟಿ ನೀಡಿ, ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅವರ ಜೊತೆ ಸಮಾಲೋಚನೆ ನಡೆಸಿ, ಮಂತ್ರಾಕ್ಷತೆ ಪಡೆದುಕೊಂಡರು. ನಂತರ ಧರ್ಮಸ್ಥಳಕ್ಕೆ ಕ್ಷೇತ್ರಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದುಕೊಂಡು ಹರ್ಷೆಂದ್ರ ಕುಮಾರ್ ಧರ್ಮಸ್ಥಳ ಅವರ ಜೊತೆ ಮಾತುಕತೆ ನಡೆಸಿದರು.
ಮೂಲತಃ ದೆಹಲಿಯವರಾದ ಅಲೋಕ್ ಕುಮಾರ್ ಅವರು ನವದೆಹಲಿಯ ಶಾಸಕರಾಗಿ, ವಿಧಾನಸಭೆ ಉಪಸಭಾಪತಿ ಆಗಿ ಗಮನಾರ್ಹ ಕೆಲಸ ಮಾಡಿದವರು. ದೆಹಲಿ ಹೈಕೋರ್ಟ್ ಹಾಗೂ ಸರ್ವೋಚ್ಛ ನ್ಯಾಯಾಲಯದ ಹಿರಿಯ ವಕೀಲರಾಗಿರುವ ಇವರು, ವಿದ್ಯಾರ್ಥಿ ಜೀವನದಿಂದಲೇ ನಾಯಕತ್ವ ಮೈಗೂಡಿಸಿಕೊಂಡವರು. ಆರ್.ಎಸ್.ಎಸ್., ಬಿಜೆಪಿಯಲ್ಲಿ ಹಲವು ರಾಜ್ಯ, ರಾಷ್ಟ್ರಮಟ್ಟದ ಹುದ್ದೆಗಳನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ದೆಹಲಿಯ ಆರ್.ಎಸ್.ಎಸ್. ಸಹಸಂಘಚಾಲಕರಾಗಿಯೂ ಕೆಲಸ ಮಾಡಿದ್ದಾರೆ. ಭಾರತೀಯತೆಯನ್ನು ಉತ್ತೇಜಿಸುವ ಹಲವು ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದಾರೆ.


ವಿಹಿಂಪ ಅಂತಾರಾಷ್ಟ್ರೀಯ ಅಧ್ಯಕ್ಷರ ಭೇಟಿ ಸಂದರ್ಭ ವಿಹಿಂಪ ಪುತ್ತೂರು ಜಿಲ್ಲಾಧ್ಯಕ್ಷ ಡಾ. ಕೃಷ್ಣಪ್ರಸನ್ನ, ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್ ವೆಲ್, ವಿಭಾಗ ಸಾಮರಸ್ಯ ಪ್ರಮುಖ್ ಭಾಸ್ಕರ್ ಧರ್ಮಸ್ಥಳ, ವಿಭಾಗ ಮಠ ಮಂದಿರ ಪ್ರಮುಖ್ ಗುರುರಾಜ್ ತಂತ್ರಿ, ಮಂಗಳೂರು ಜಿಲ್ಲಾ ಉಪಾಧ್ಯಕ್ಷ ಮನೋಹರ್ ಸುವರ್ಣ, ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಜಿಲ್ಲಾ ಸಹಕಾರ್ಯದರ್ಶಿ ಪ್ರಮೋದ್ ರೈ, ಕಡಬ ತಾಲೂಕಿನ ಪ್ರಮುಖರು ಮತ್ತಿತರರು ಉಪಸ್ಥಿತರಿದ್ದರು.

Related posts

ಓಡಿಲ್ನಾಳ : ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮನೆಯೊಳಗೆ ಅಕ್ರಮ ಗಾಂಜಾ ದಾಸ್ತಾನು: ಪುಂಜಾಲಕಟ್ಟೆ ಪೊಲೀಸರಿಂದ ದಾಳಿ

Suddi Udaya

ಮೀಯಾರು ಕೆಮ್ಮಟ್ಟೆಯಲ್ಲಿ ಎಸ್.ಕೆ.ಡಿ.ಆರ್.ಡಿ.ಪಿ ಟ್ರಸ್ಟ್ ವತಿಯಿಂದ ನೀರು ಉಳಿಸಿ ಭವಿಷ್ಯದ ನೀರು ಇಂದಿನ ಕಾಳಜಿ ಅಭಿಯಾನ

Suddi Udaya

ಶಿಬಾಜೆ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕೈರಂಡ ಶ್ರೀಮತಿ ಸಂಗೀತಾ ಮತ್ತು ಸನತ್ ಕುಮಾರ್ ದಂಪತಿ ಹಾಗೂ ಮನೆಯವರಿಂದ ಬೆಳ್ಳಿಯ ಮಂಟಪ ಸಮರ್ಪಣೆ

Suddi Udaya

ಮುಂಡಾಜೆ: ರಾಷ್ಟ್ರೀಯ ಹೆದ್ದಾರಿ ಬದಿ ತ್ಯಾಜ್ಯ ರಾಶಿ

Suddi Udaya

ರಾಜಕಾರಣದ ಗಂಡೆದೆಯ ನಾಯಕ ಮಾಜಿ‌ ಶಾಸಕ ಕೆ.ವಸಂತ ಬಂಗೇರರ ನಿಧನಕ್ಕೆ ಭಾರತೀಯ ಮಜ್ದೂರು ಸಂಘ ಜಿಲ್ಲಾಧ್ಯಕ್ಷ,ನ್ಯಾಯವಾದಿ ಅನಿಲ್ ಕುಮಾರ್ ರವರಿಂದ ಸಂತಾಪ

Suddi Udaya
error: Content is protected !!