November 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಕ್ರೀಡಾಪಟುವಿಗೆ ಅಭಿನಂದನಾ ಸಮಾರಂಭ

ಉಜಿರೆ: ಜುಲೈ 15ರಿಂದ 26ರವರೆಗೆ ಚೀನಾದ ಚುಝೌ (Chuzhou) ನಗರದಲ್ಲಿ ನಡೆದ 19ನೇ ಏಷ್ಯನ್ ಕಿರಿಯ ಪುರುಷರ ಹ್ಯಾಂಡ್‌ಬಾಲ್ ಪಂದ್ಯಾವಳಿಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿ ಮೂಲಕ ಅತ್ಯುತ್ತಮ ಪ್ರದರ್ಶನ ನೀಡಿದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್‌ಡಿಎಂ) ಸ್ವಾಯತ್ತ ಕಾಲೇಜಿನ ವಿದ್ಯಾರ್ಥಿ ಹಾಗೂ ಎಸ್.ಡಿ.ಎಂ ಕ್ರೀಡಾ ಸಂಘದ ಹ್ಯಾಂಡ್‌ಬಾಲ್ ಆಟಗಾರ ಅಭಿಷೇಕ್ ಎಚ್ ಅವರನ್ನು ಎಸ್.ಡಿ.ಎಂ ಶಿಕ್ಷಣ ಸಂಸ್ಥೆ ಹಾಗೂ ಕಾಲೇಜಿನ ವತಿಯಿಂದ ಗೌರವಿಸುವ ಅಭಿನಂದನಾ ಸಮಾರಂಭವು ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್ ವಿದ್ಯಾರ್ಥಿಯನ್ನು ಸನ್ಮಾನಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಜಪಾನ್ ದೇಶದ ಕ್ಯೋಟೋ ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಇನ್ಫೋರ್ಮೆಟಿಕ್ಸ್ ಪ್ರೋಗ್ರಾಮ್ ಸ್ಪೆಸಿಫಿಕ್ ರಿಸರ್ಚ್ರ್ ಡಾ. ಶಶಾಂಕ ಕುಳಮರ್ವ,ಕಾಲೇಜಿನ ಪ್ರಾಚಾರ್ಯರಾದ ಪ್ರೋ. ವಿಶ್ವನಾಥ್ ಪಿ, ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್, ದೈಹಿಕ ಶಿಕ್ಷಣ ಉಪನ್ಯಾಸಕಿ ಶಾರದಾ , ತರಬೇತುದಾರ ಸುದೀನ್ ಪುಜಾರಿ ಸೇರಿದಂತೆ ಕಾಲೇಜಿನ ವಿದ್ಯಾರ್ಥಿ ಪ್ರತಿನಿಧಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಮೊದಲು ವಿದ್ಯಾರ್ಥಿ ಅಭಿಷೇಕ್ ಅವರನ್ನು ಎಸ್.ಡಿ.ಎಂ ಸಿದ್ದಾವನ ಗುರುಕುಲ ಜೀವನ ಶಿಕ್ಷಣ ವಸತಿ ನಿಲಯದಲ್ಲಿ ವಿದ್ಯಾರ್ಥಿಗಳು ಅದ್ದೂರಿಯಾಗಿ ಸ್ವಾಗತಿಸಿ, ಬರಮಾಡಿಕೊಂಡರು.

ಹಾಸನ ಮೂಲದ ಚನ್ನರಾಯಪಟ್ಟಣ ತಾಲೂಕಿನ ಹನುಮಂತ ಮತ್ತು ಲಕ್ಷ್ಮೀ ಬಿಜಿ ದಂಪತಿಗಳ ಮಗನಾದ ಅಭಿಷೇಕ್, ಕಳೆದ ಏಪ್ರಿಲ್ 12 ಮತ್ತು 13 ರಂದು ಜಾರ್ಖಂಡ್ ನಲ್ಲಿ ನಡೆದ ಭಾರತೀಯ ಕಿರಿಯ ಪುರುಷರ ಹ್ಯಾಂಡ್‌ಬಾಲ್ ತಂಡದ ಆಯ್ಕೆ ಪ್ರಕ್ರಿಯೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಭಾರತ ತಂಡಕ್ಕೆ ಆಯ್ಕೆಯಾಗಿದ್ದರು. ಪ್ರಸ್ತುತ ಉಜಿರೆಯ ಎಸ್.ಡಿ.ಎಂ ಕಾಲೇಜಿನ ತೃತೀಯ ವರ್ಷದ ಬಿಬಿಎ ವಿದ್ಯಾಭ್ಯಾಸ ಮಾಡುತ್ತಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತ ದೇಶದ ಕಿರಿಯ ಪುರುಷರ ಹ್ಯಾಂಡ್‌ಬಾಲ್ ತಂಡವನ್ನು ಪ್ರತಿನಿಧಿಸುತ್ತಿದ್ದರು.

ಇವರ ಈ ಸಾಧನೆಗೆ ಭಾರತೀಯ ಹ್ಯಾಂಡ್‌ಬಾಲ್ ಸಂಸ್ಥೆ, ಕರ್ನಾಟಕ ರಾಜ್ಯ ಹ್ಯಾಂಡ್‌ಬಾಲ್ ಸಂಸ್ಥೆ ಹಾಗೂ ಎಸ್‌.ಡಿ.ಎಂ ಕ್ರೀಡಾ ಸಂಘ ವಿಶೇಷ ಸಹಕಾರ ಮತ್ತು ಪ್ರೊತ್ಸಾಹ ನೀಡಿದ್ದು, ಎಸ್‌.ಡಿ.ಎಂ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕರಾದ ಸುದೀನ ಪೂಜಾರಿ ನಿರಂತರ ತರಬೇತಿ ಹಾಗು ಮಾರ್ಗದರ್ಶನ ನೀಡಿದ್ದಾರೆ. ಅಭಿಷೇಕ್ ಅವರ ಈ ಸಾಧನೆಗೆ ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಅಪಾರ ಮೆಚ್ಚುಗೆ ವ್ಯಕ್ತಪಡಿಸಿದರು.

ಅಭಿಷೇಕ್ ಎಚ್. ಇವರಿಗೆ ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್., ಐಟಿ ಮತ್ತು ಹಾಸ್ಟೆಲ್ ಆಡಳಿತ ವಿಭಾಗದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪೂರನ್ ವರ್ಮ, ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಶ್ವನಾಥ್ ಪಿ., ಎಸ್‌.ಡಿ.ಎಂ ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್ ಎಚ್., ಉಪನ್ಯಾಸಕರು, ಪೋಷಕರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿ, ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತ ಹಾಗೂ ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಯ ಕೀರ್ತಿಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲಿ ಎಂದು ಎಲ್ಲರೂ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಮುಖ್ಯಸ್ಥರು, ವಿವಿಧ ವಿಭಾಗಗಳ ಉಪನ್ಯಾಸಕರು ಸೇರಿದಂತೆ ಸಾವಿರಾರು ವಿದ್ಯಾರ್ಥಿಗಳು ಭಾಗಿಯಾಗಿದ್ದರು. ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ
ಕವನ ಮತ್ತು ಅನ್ವಿತಾ ನಿರೂಪಿಸಿ, ವಿದ್ಯಾರ್ಥಿ
ನೆವಿಲ್ ನವೀನ್ ಮೋರಸ್ ವಂದಿಸಿದರು.

ಹ್ಯಾಂಡ್‌ಬಾಲ್ ನಲ್ಲಿ ಅಭಿಷೇಕ್ ಹಲವು ಸಾಧನೆ :

19ನೇ ಏಷ್ಯನ್ ಕಿರಿಯ ಪುರುಷರ ಹ್ಯಾಂಡ್‌ಬಾಲ್ ಪಂದ್ಯಾಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸುತ್ತಿರುವ ಉಜಿರೆಯ ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿ ಅಭಿಷೇಕ್, ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ನಡೆದ ಜೂನಿಯರ್ ರಾಷ್ಟ್ರೀಯ ಹ್ಯಾಂಡ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ನಡೆದ 54ನೇ ಹಿರಿಯರ ರಾಷ್ಟ್ರೀಯ ಹ್ಯಾಂಡ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲೂ ಭಾಗವಹಿಸಿದ್ದಾರೆ. ಈ ಹಿಂದೆ
2025–26ನೇ ಸಾಲಿನಲ್ಲಿ ತಮಿಳುನಾಡಿನ ವೆಲ್ಲೂರಿನ VIT ವಿಶ್ವವಿದ್ಯಾಲಯದಲ್ಲಿ ನಡೆದ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯ ಹ್ಯಾಂಡ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಮಂಗಳೂರು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿದ್ದಾರೆ.
2024–25ನೇ ಸಾಲಿನಲ್ಲಿ ತಮಿಳುನಾಡಿನ ಸೇಲಂನ ಪೆರಿಯಾರ್ ವಿಶ್ವವಿದ್ಯಾಲಯದಲ್ಲಿ ನಡೆದ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯ ಹ್ಯಾಂಡ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಮಂಗಳೂರು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿದ್ದಾರೆ.

Related posts

ರಾಜ್ಯ ಮಟ್ಟದ ಅಥ್ಲೆಟಿಕ್ ಸ್ಪರ್ಧೆ: ಎಸ್ ಡಿ ಎಂ ಶಾಲಾ ವಿದ್ಯಾರ್ಥಿನಿಗೆ ಕಂಚಿನ ಪದಕ

Suddi Udaya

ಕಾಲೇಜಿಗೆ ಹೋಗಿದ್ದ ಅರಸಿನಮಕ್ಕಿಯ ತೀರ್ಥೇಶ್ ನಾಪತ್ತೆ

Suddi Udaya

ಉಜಿರೆಯ ಶ್ರೀ ಧ.ಮಂ ಪ.ಪೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರ ಸಮಾರೋಪ ಸಮಾರಂಭ

Suddi Udaya

ಅಸ್ಸಾಂನಲ್ಲಿ ನಡೆದ ರಾಷ್ಟ್ರೀಯ ಯೋಗಾಸನ ಕ್ರೀಡಾ ಛಾಂಪಿಯನ್ ಶಿಪ್ ನ್ನು ಉದ್ಘಾಟಿಸಿದ ಶ್ರೀ ಧ.ಮಂ.ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್

Suddi Udaya

ಅರಸಿನಮಕ್ಕಿ: ಶಿವಾನಿ ಸಂಜೀವಿನಿ ಒಕ್ಕೂಟದ 34ನೇ ಸ್ವಸಹಾಯ ಸಂಘ ಉದ್ಘಾಟನೆ

Suddi Udaya

ಧರ್ಮಸ್ಥಳ ಯಕ್ಷಗಾನ ಮೇಳದ ನಿವೃತ್ತ ಚಾಲಕ ಪದ್ಮಯ್ಯ ಗೌಡ ನಿಧನ

Suddi Udaya
error: Content is protected !!