27.4 C
ಪುತ್ತೂರು, ಬೆಳ್ತಂಗಡಿ
September 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಪರಿಶಿಷ್ಟ ಪಂಗಡ ವಿಭಾಗದ ಅಧ್ಯಕ್ಷರಾಗಿ ಜಿನ್ನಪ್ಪ ನಾಯ್ಕ ನೇಮಕ

ಬೆಳ್ತಂಗಡಿ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಪರಿಶಿಷ್ಟ ಪಂಗಡ ವಿಭಾಗದ ಅಧ್ಯಕ್ಷರಾಗಿ ಉಜಿರೆ ಗ್ರಾಮ ಪಂಚಾಯತ್‌ನ ಮಾಜಿ ಸದಸ್ಯರು ಹಾಗೂ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾದ ಜಿನ್ನಪ್ಪ ನಾಯ್ಕ ಅವರನ್ನು ನೇಮಕ ಮಾಡಲಾಗಿದೆ.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಇಂದು ಜಿನ್ನಪ್ಪ ನಾಯ್ಕ ಅವರಿಗೆ ನೇಮಕಾತಿ ಪತ್ರವನ್ನು ಹಸ್ತಾಂತರಿಸಿ, ಪಕ್ಷ ಸಂಘಟನೆಗೆ ಇನ್ನಷ್ಟು ಬಲ ತುಂಬುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವಂತೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷ ಸತೀಶ್ ಕೆ. ಕಾಶಿಪಟ್ಟಣ, ಗ್ರಾಮೀಣ ಸಮಿತಿಯ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲಿಯನ್ ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಕುಮಾರ್ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿ ಪ್ರವೀಣ್ ಫೆರ್ನಾಂಡಿಸ್, ಬ್ಲಾಕ್ ಕಾಂಗ್ರೆಸ್ ನಗರ ಕಾರ್ಯದರ್ಶಿ ಮಹಮ್ಮದ್ ಶಫಿ ಹಾಗೂ ಅಬ್ದುಲ್ ರೆಹಮಾನ್ ಪಡ್ಪು ಉಪಸ್ಥಿತರಿದ್ದರು.

Related posts

ಬಳಂಜ: ಶ್ರೀ ಶಾರದೋತ್ಸವದ ಅಂಗವಾಗಿ ವಾಲಿಬಾಲ್ ಪಂದ್ಯಾಟ, ಯುವ ಉದ್ಯಮಿ ರಾಕೇಶ್ ಹೆಗ್ಡೆಯವರಿಂದ ಕ್ರೀಡಾಂಗಣ ಉದ್ಘಾಟನೆ

Suddi Udaya

ಶಿರ್ಲಾಲು ಕೃಷಿಕ ಶಿವಪ್ಪ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಲಯನ್ಸ್ ಝೋನ್ ಮಟ್ಟದ ಸೆಮಿನಾರ್

Suddi Udaya

ಧರ್ಮಸ್ಥಳ: ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ ಹಾಗೂ ಖ್ಯಾತ ಚಲನಚಿತ್ರ ನಟ ಸಿಹಿಕಹಿ ಚಂದ್ರು ರವರಿಂದ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ: ಉಜಿರೆಯ ಮೋಹನ್ ರಿಗೆ ಪ್ರಶಸ್ತಿ

Suddi Udaya

2023-24ನೇ ಸಾಲಿನಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕ ಗಳಿಸಿದ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

Suddi Udaya
error: Content is protected !!