30.5 C
ಪುತ್ತೂರು, ಬೆಳ್ತಂಗಡಿ
September 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ಅಂಬೇಡ್ಕರ್ ಭವನ ದುರಸ್ತಿಗೆ ಪರಿಶಿಷ್ಟ ಜಾತಿ, ಪಂಗಡಗಳ ಸಭೆಯಲ್ಲಿ ಚರ್ಚೆ, ಅಧಿಕಾರಿಗಳ ತಂಡ ಪರಿಶೀಲನೆ

ಬೆಳ್ತಂಗಡಿ: ಅತ್ಯಂತ ನಾದುರಸ್ತಿಯಲ್ಲಿರುವ ಲಾಯಿಲ ಗ್ರಾಮದ ಪಡ್ಲಾಡಿ ಡಾ.ಬಿ.ಆರ್ ಅಂಬೇಡ್ಕರ್ ಭವನವನ್ನು ದುರಸ್ತಿ ಪಡಿಸುವ ನಿಟ್ಟಿನಲ್ಲಿ ಅಧಿಕಾರಿಗಳ ತಂಡ ಆ.5ರಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇತ್ತೀಚೆಗೆ ಲಾಯಿಲ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ ಪರಿಶಿಷ್ಟ ಜಾತಿ/ಪಂಗಡಗಳ ವಿಶೇಷ ಗ್ರಾಮಸಭೆಯಲ್ಲಿ ಪಡ್ಲಾಡಿ ಅಂಬೇಡ್ಕರ್ ಭವನದ ದುರಸ್ತಿ ಬಗ್ಗೆ ಗಂಭೀರ ಚರ್ಚೆ ನಡೆಯಿತು. ಲಾಯಿಲ ಗ್ರಾಮದ ಏಕೈಕ ಅಂಬೇಡ್ಕರ್ ಭವನವನ್ನು ತಕ್ಷಣ ದುರಸ್ತಿಗೊಳಿಸುವಂತೆ ಸಾಮಾಜಿಕ ಹೋರಾಟಗಾರ ಶೇಖರ್ ಲಾಯಿಲ ಒತ್ತಾಯಿಸಿದರು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ತಂಡವು ಭೇಟಿ ನೀಡಿ ಪರಿಶೀಲನೆ ನಡೆಸಿತು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಧೀರಜ್ ಕುಮಾರ್ , ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗದ ಇಂಜಿನಿಯರ್ ಹರೀಶ್ ಕಾರಿಂಜ , ಲಾಯಿಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ತಾರಾನಾಥ ನಾಯ್ಕ್ , ಸಹಾಯಕ ಲೆಕ್ಕಾಧಿಕಾರಿ ಸುಪ್ರೀತಾ ಶೆಟ್ಟಿ , ಮಾಜಿ ಗ್ರಾಮ ಪಂಚಾಯತ್ ಸದಸ್ಯ ಪ್ರಸಾದ್ ಶೆಟ್ಟಿ ಏಣಿಂಜೆ, ಅಂಬೇಡ್ಕರ್ ಭವನ ಉಸ್ತುವಾರಿ ಸಮಿತಿ ಅಧ್ಯಕ್ಷ ಹರೀಶ್ ನೆನಪು , ಸ್ಥಳೀಯ ದಲಿತ ಮುಖಂಡರಾದ ಸುಮನ್ ಪಡ್ಲಾಡಿ , ಸುರೇಂದ್ರ ಪಡ್ಲಾಡಿ ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂಸ್ಕೃತೋತ್ಸವ

Suddi Udaya

ಚಾರ್ಮಾಡಿ: ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ಕುಂಕುಮಾರ್ಚನೆ; ದುರ್ಗ ನಮಸ್ಕಾರ ಪೂಜೆ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕಳೆಂಜ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯರಿಗೆ ಮನವಿ

Suddi Udaya

ನಾಳೆ(ಜ.31) ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ “ಭಾಸ್ಕರ ಪರ್ವ”: ಪ್ರಾಧ್ಯಾಪಕ ಡಾ.ಭಾಸ್ಕರ ಹೆಗಡೆಗೆ ಅಭಿನಂದನೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಅಕ್ಕಪಡೆ ತಂಡ ಭೇಟಿ : ಸುರಕ್ಷತೆಯ ಬಗ್ಗೆ ಮಾಹಿತಿ

Suddi Udaya

ವೇಣೂರು: ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಮಂತ್ರಿ ಮಂಡಲ ರಚನೆ

Suddi Udaya
error: Content is protected !!