27.4 C
ಪುತ್ತೂರು, ಬೆಳ್ತಂಗಡಿ
September 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ. ವಸತಿ ಪದವಿ ಪೂರ್ವ ಕಾಲೇಜಿನ ಇಕೋ ಕ್ಲಬ್ ನ ವತಿಯಿಂದ ಗಿಡ ನೆಡುವ ಕಾರ್ಯಕ್ರಮ

ಉಜಿರೆ : ‘ಪರಿಸರವನ್ನು ಹಸಿರಾಗಿ ಉಳಿಸುವ ಉದ್ದೇಶದಿಂದ ಪರಿಸರ ಮಾತೆಯ ರಕ್ಷಣೆಯ ಕುರಿತು ತಾಯಂದಿರು ಕಾಳಜಿ ಹಾಗೂ ಜಾಗೃತಿ ಮೂಡಿಸಿ ತಮ್ಮ ಮಕ್ಕಳಿಗೆ ಪರಿಸರ ಉಳಿಸಲು ದಾರಿದೀಪವಾಗುವಂತಹ ಕೇಂದ್ರ ಸರಕಾರದ ಪ್ರಧಾನ ಮಂತ್ರಿಗಳ ಮಹತ್ವಾಕಾಂಕ್ಷಿ ಯೋಜನೆಯಾದ, ‘ಏಕ್ ಪೇಡ್ ಮಾ ಕೇ ನಾಮ್’ ಸಲುವಾಗಿ ಎಸ್.ಡಿ.ಎಂ. ವಸತಿ ಪದವಿ ಪೂರ್ವ ಕಾಲೇಜಿನ ಇಕೋ ಕ್ಲಬ್ ನ ವತಿಯಿಂದ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾಲೇಜಿಗೆ ಸರ್ವ ರೀತಿಯಲ್ಲೂ ಮಾರ್ಗದರ್ಶಕರಾಗಿರುವ ನಿನಾದದ ಶ್ರೀಮತಿ ಸೋನಿಯಾ ಯಶೋವರ್ಮರವರು ಗಿಡ ನೆಟ್ಟು ಪರಿಸರ ಕಾಳಜಿ ಬಗ್ಗೆ ತಿಳಿ ಹೇಳಿದರು.


ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ವಿದ್ಯಾರ್ಥಿಗಳ ಜೊತೆ ಸೇರಿ ಗಿಡ ನೆಟ್ಟು, ಮಾಹಿತಿ ನೀಡಿದರು.
ಕಾಲೇಜಿನ ವಿದ್ಯಾರ್ಥಿಗಳು, ಬೋಧಕ ಬೋಧಕೇತರ ಸಿಬ್ಬಂದಿಗಳು ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಉತ್ತಮ ತಳಿಯ ಗಿಡಗಳನ್ನು, ನೆಟ್ಟು ಬೆಳೆಸುವಂತೆ, ಉಪನ್ಯಾಸಕರಿಗೆ ಹಸ್ತಾಂತರಿಸಲಾಯಿತು.
ಇಕೋ ಕ್ಲಬ್ ನ ಸಂಯೋಜಕಿ ಹಾಗೂ ಜೀವಶಾಸ್ತ್ರ ವಿಭಾಗದ ಮುಖ್ಯಸ್ಥೆ ಶ್ರೀಮತಿ ವಾಣಿ ಎಂ. ಎ. ಕಾರ್ಯಕ್ರಮ ನಿರ್ವಹಿಸಿದರು.

Related posts

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಮಾಸಿಕ ಸಭೆ ಮತ್ತು ಇಫ್ತಾರ್ ಸಮ್ಮಿಲನ

Suddi Udaya

ವಲಯಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿ ಶ್ರೀ ಧ. ಮಂ. ಆಂ.ಮಾ. ಶಾಲೆಗೆ ಹಲವಾರು ಪ್ರಶಸ್ತಿ

Suddi Udaya

ಅಕ್ರಮ ಸಕ್ರಮ ಭೂ ಮಂಜೂರಾತಿ ಆ್ಯಪ್ ನಲ್ಲಿ ಇರುವ ತೊಡಕನ್ನು ಬದಲಾಯಿಸುವಂತೆ ಆಗ್ರಹಿಸಿ ಕೃಷಿಕರಿಂದ ಸಚಿವ ಕೃಷ್ಣ ಬೈರೆ ಗೌಡರಿಗೆ ಪತ್ರ ಚಳುವಳಿ ಮೂಲಕ ಮನವಿ

Suddi Udaya

ಪದವಿಪೂರ್ವ ಕಾಲೇಜುಗಳ ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ : ಉಜಿರೆ ಎಸ್ ಡಿ ಎಮ್ ಪದವಿ ಪೂರ್ವ ಕಾಲೇಜಿನ ಮೂರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ಕಾರ್ಯಕ್ರಮದ ಅಂಗವಾಗಿ ಮನೆಮನೆ ಸಂಪರ್ಕ ದ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya
error: Content is protected !!