26.9 C
ಪುತ್ತೂರು, ಬೆಳ್ತಂಗಡಿ
September 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮವನ್ನು ಬೆಳಾಲು ಗ್ರಾಮ ಪಂಚಾಯಿತಿಯ ನಿಕಟಪೂರ್ವ ಅಧ್ಯಕ್ಷ ವಿದ್ಯಾ ಶ್ರೀನಿವಾಸ್ ಗೌಡ ಉದ್ಘಾಟಿಸಿ, ಶಾಲೆಯ ಪರಿಸರದಲ್ಲಿ ಇಂಗು ಗುಂಡಿಗಳ ನಿರ್ಮಾಣದಿಂದ ಸುತ್ತಲಿನ ಪರಿಸರಕ್ಕೆ ಪ್ರಯೋಜನವಾಗಿದೆ ಮತ್ತು ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿಯ ಅರಿವು ಮೂಡಿದೆ ಎಂದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಕೃಷಿ ಅಧಿಕಾರಿ ರಾಮ್ ಕುಮಾರ್ ಮಾತನಾಡಿ ವಿದ್ಯಾರ್ಥಿ ದೆಸೆಯಲ್ಲಿ ಗಿಡಗಳನ್ನು ನೆಡುವುದು, ಸ್ವಚ್ಛತೆಯನ್ನು ಕಾಪಾಡುವುದು, ನೀರನ್ನು ಇಂಗಿಸುವ ಕಾರ್ಯಗಳನ್ನು ಕೈಗೊಂಡಾಗ ಮುಂದಿನ ಪೀಳಿಗೆಗೆ ಪರಿಸರವನ್ನು ಉಳಿಸಬಹುದು ಎಂದರು.


ಶೌರ್ಯ ವಿಪತ್ತು ತಂಡದ ಸದಸ್ಯರಾದ ಸುಲೇಮಾನ್ ಭೀಮಂಡೆ ಮಾತನಾಡಿ ಪರಿಸರ ಸಂರಕ್ಷಣೆ ಎನ್ನುವುದು ಒಂದು ದಿನದ ಕಾರ್ಯಕ್ರಮವಾಗದೆ ಅದು ನಿರಂತರವಾಗಿರಲಿ ಎಂದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮುಖ್ಯೋಪಾಧ್ಯಾಯರಾದ ಜಯರಾಮ ಮಯ್ಯ ಮಾತನಾಡಿ, ಪರಿಸರ ಸಂರಕ್ಷಣೆ ನಮ್ಮಿಂದಲೇ ಆಗಬೇಕು ಪರಿಸರದ ಜೊತೆಗೆ ಹೊಂದಾಣಿಕೆ ಬದುಕು ರೂಡಿಸಿಕೊಳ್ಳಬೇಕು ಎಂದರು.
ವೇದಿಕೆಯಲ್ಲಿ ಪ್ರಗತಿಬಂಧು ಒಕ್ಕೂಟದ ಅಧ್ಯಕ್ಷ ರತ್ನಾಕರ ಆಚಾರ್ಯ, ನಿಕಟ ಪೂರ್ವ ಅಧ್ಯಕ್ಷರಾದ ಸಂಜೀವ ಗೌಡ, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ ಅಂಗವಾಗಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಂಡಿದ್ದು ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಪ್ರೋತ್ಸಾಹಿಸಲಾಯಿತು.
ಶಿಕ್ಷಕಿ ಕೋಕಿಲ ಬಹುಮಾನ ಪಟ್ಟಿ ವಾಚಿಸಿದರು. ಶಿಕ್ಷಕ ಕಿರಣ್ ಸ್ವಾಗತಿಸಿದರು. ಉಜಿರೆ ವಲಯದ ಮೇಲ್ವಿಚಾರಕರಾದ ಪ್ರೇಮ್ ಪ್ರಸಾದ್ ವಂದಿಸಿದರು. ಶಿಕ್ಷಕ ಸುಮನ್ ಯು. ಎಸ್ ಕಾರ್ಯಕ್ರಮ ನಿರೂಪಿಸಿದರು.

Related posts

ಆ.18 : ಪ್ರವಾದಿಯವರ 1501 ನೇ ಜನ್ಮದಿನದ ಅಂಗವಾಗಿ ಗುರುವಾಯನಕೆರೆಯಲ್ಲಿ ಗ್ರ್ಯಾಂಡ್ ಹುಬ್ಬುರ್ರಸೂಲ್ ಮಜ್ಲಿಸ್

Suddi Udaya

ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆ ಪ್ರಥಮ ಸ್ಥಾನ

Suddi Udaya

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ , ಮುಂಡಾಜೆಯಲ್ಲಿ ಟಯರ್ ಹೊತ್ತಿಸಿ ಆಕ್ರೋಶ

Suddi Udaya

ಇಂದಬೆಟ್ಟು ಪಲ್ಲದಕೋಡಿ ನಿವಾಸಿ ಜಗದೀಶ್ ನಿಧನ

Suddi Udaya

ಉಜಿರೆ ಎಸ್ . ಡಿ.ಎಂ. ಪಾಲಿಟೆಕ್ನಿಕ್ ನಲ್ಲಿ “ಸರ್ಕ್ಯೂಟ್ ಎಕ್ಸ್ಪೋ “

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!