26.9 C
ಪುತ್ತೂರು, ಬೆಳ್ತಂಗಡಿ
September 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಿಲ್ಲಾ ಮಟ್ಟದ ಟೇಬಲ್ ಟೆನಿಸ್ ಪಂದ್ಯಾಟ: ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯ ಇಬ್ಬರು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆ

ಧರ್ಮಸ್ಥಳ: ಬಂಟ್ವಾಳದ ಎಸ್‌ವಿ‌ಎಸ್ ದೇವಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಟೇಬಲ್ ಟೆನಿಸ್ ಪಂದ್ಯಾಟದಲ್ಲಿ ಧರ್ಮಸ್ಥಳದ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರು ಗಮನಾರ್ಹ ಸಾಧನೆ ಮಾಡಿದ್ದಾರೆ.

ಶಾಲೆಯ 10ನೇ ತರಗತಿಯ ಕುಮಾರಿ ಆದ್ಯ ರೈ, ಕುಮಾರಿ ದೃಷಾ ಮರಿಯಾ ಹಾಗೂ 9ನೇ ತರಗತಿಯ ಕುಮಾರಿ ಶ್ರಾವಣಿ ಅವರನ್ನು ಒಳಗೊಂಡ ಬಾಲಕಿಯರ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ಈ ಸಾಧನೆಯೊಂದಿಗೆ ಕುಮಾರಿ ಆದ್ಯ ರೈ ಹಾಗೂ ಕುಮಾರಿ ದೃಷಾ ಮರಿಯಾ ಅವರು ರಾಜ್ಯ ಮಟ್ಟದ ಟೇಬಲ್ ಟೆನಿಸ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿನಿಯರ ಈ ಸಾಧನೆಗೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಗಿರೀಶ್ ಅವರು ಸೂಕ್ತ ತರಬೇತಿ ಮತ್ತು ಮಾರ್ಗದರ್ಶನ ನೀಡಿದ್ದರು. ವಿದ್ಯಾರ್ಥಿನಿಯರ ಸಾಧನೆಯನ್ನು ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ.ವಿ. ಅವರು ಶ್ಲಾಘಿಸಿ, ವಿದ್ಯಾರ್ಥಿನಿಯರು ಹಾಗೂ ತರಬೇತುದಾರ ಶಿಕ್ಷಕರಿಗೆ ಅಭಿನಂದನೆ ಸಲ್ಲಿಸಿ, ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಇನ್ನಷ್ಟು ಯಶಸ್ಸು ಗಳಿಸುವಂತೆ ಶುಭ ಹಾರೈಸಿದರು

Related posts

ಚಾರ್ಮಾಡಿ ಘಾಟಿಯಲ್ಲಿ ಚಿರತೆ ಆತಂಕ: ಮಳೆಗಾಲದಲ್ಲಿ ಪ್ರವಾಸಿಗರಿಗೆ ಅರಣ್ಯ ಇಲಾಖೆ ಕಟ್ಟುನಿಟ್ಟಿನ ಎಚ್ಚರಿಕೆ

Suddi Udaya

ಹನುಮಾನ್ ಟೂರ್ ಆ್ಯಂಡ್ ಟ್ರಾವೆಲ್ಸ್ ಮಾಲಕ ರಾಮಕೃಷ್ಣ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪುದುವೆಟ್ಟು ಶಾಂತ್ಯಾಯ ಶ್ರೀ ಮಹಾಗಣಪತಿ ಭಜನಾಮಂದಿರದ ಅನ್ನಛತ್ರ ಕಟ್ಟಡದ ಕಾಮಗಾರಿಗೆ ರೂ. 1ಲಕ್ಷ ಮಂಜೂರು

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶಾರದ ಮಂಟಪ ಉಜಿರೆ 17ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ, ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿಯ ನ್ಯಾಯಾಲಯ ಮತ್ತು ವಕೀಲರ ಸಂಘಕ್ಕೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್ ಭೇಟಿ

Suddi Udaya

4ನೇ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್: ಉಜಿರೆ ತಂಡಕ್ಕೆ ಹಲವು ಪ್ರಶಸ್ತಿ

Suddi Udaya
error: Content is protected !!