26.9 C
ಪುತ್ತೂರು, ಬೆಳ್ತಂಗಡಿ
September 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉತ್ತರ ಕನ್ನಡ ಉಸ್ತುವಾರಿ ಅಭಿನಂದನ್ ಹರೀಶ್ ಕುಮಾರ್ ನೇತೃತ್ವದಲ್ಲಿ ಕಾರವಾರದಲ್ಲಿ ಮೊದಲ ಜಿಲ್ಲಾ ಕಾರ್ಯಕಾರಿಣಿ ಸಭೆ

ಬೆಳ್ತಂಗಡಿ: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ನ ರಾಜ್ಯ ಕಾರ್ಯದರ್ಶಿ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿಯಾಗಿ ನೇಮಕಗೊಂಡಿರುವ ಬೆಳ್ತಂಗಡಿಯ ಅಭಿನಂದನ್ ಹರೀಶ್ ಕುಮಾರ್ ಅವರು ಜವಾಬ್ದಾರಿ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಕಾರವಾರದಲ್ಲಿರುವ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಜಿಲ್ಲಾ ಕಾರ್ಯಕಾರಿಣಿ ಸಭೆಯನ್ನು ನಡೆಸಿದರು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಉತ್ತರ ಕನ್ನಡ ಜಿಲ್ಲೆಯಲ್ಲಿ ಯುವ ಕಾಂಗ್ರೆಸ್ ಸಂಘಟನೆಯನ್ನು ಇನ್ನಷ್ಟು ಸದೃಢಗೊಳಿಸುವ ನಿಟ್ಟಿನಲ್ಲಿ ಎಲ್ಲ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಪಕ್ಷದ ತತ್ವ-ಸಿದ್ಧಾಂತಗಳನ್ನು ಯುವಜನರ ನಡುವೆ ಪರಿಣಾಮಕಾರಿಯಾಗಿ ತಲುಪಿಸುವ ಜೊತೆಗೆ ಸಂಘಟನೆಯನ್ನು ಗ್ರಾಮ ಮಟ್ಟದಿಂದಲೇ ಬಲಿಷ್ಠಗೊಳಿಸುವ ಅಗತ್ಯವಿದೆ ಎಂದು ಹೇಳಿದರು.

ಜಿಲ್ಲೆಯ ಸಂಘಟನಾ ಚಟುವಟಿಕೆಗಳು, ಮುಂಬರುವ ಕಾರ್ಯಕ್ರಮಗಳು, ಸದಸ್ಯತ್ವ ಅಭಿಯಾನ ಹಾಗೂ ಪಕ್ಷದ ಬಲವರ್ಧನೆಗೆ ಸಂಬಂಧಿಸಿದಂತೆ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಸಿದರು.

ಸಭೆಯಲ್ಲಿ ಯುವ ಕಾಂಗ್ರೆಸ್‌ನ ಜಿಲ್ಲಾ ಪದಾಧಿಕಾರಿಗಳು, ಮುಖಂಡರು, ಪ್ರಮುಖ ಕಾರ್ಯಕರ್ತರು ಹಾಗೂ ವಿವಿಧ ಘಟಕಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಸೇವಾ ನಿವೃತ್ತಿ; ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ದೆಯಿಂದ ಶುಭಹಾರೈಕೆ

Suddi Udaya

ಕನ್ಯಾಡಿ 2 ಸ.ಉ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಎ.6-11: ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಜಾತ್ರೋತ್ಸವ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ವಸತಿ ಶಾಲೆ ಮತ್ತು ಕಾಲೇಜಿನ ಸಂಸ್ಥಾಪಕ ಗಿರೀಶ್ ಕೆ ಹೆಚ್ ರವರು ಶಿಕ್ಷಣ ಸಿಂಧೂರ ಪ್ರಶಸ್ತಿಗೆ ಆಯ್ಕೆ

Suddi Udaya

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ ಆಚರಣೆ

Suddi Udaya

ಗುರುವಾಯನಕೆರೆಯಲ್ಲಿ ಎಂ.ಆರ್.ಪಿ.ಎಲ್ ಸಂಸ್ಥೆಯ ಸಹಕಾರದೊಂದಿಗೆ ಕಾರ್ಯಾರಂಭಗೊಂಡ ಶ್ರೀ ಶಾಂತೀಶ್ವರ ಫ್ಯೂಯಲ್ ನ ಉದ್ಘಾಟನೆ

Suddi Udaya
error: Content is protected !!