26.9 C
ಪುತ್ತೂರು, ಬೆಳ್ತಂಗಡಿ
September 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಿಲ್ಲಾ ಮಟ್ಟದ ಸಾಹಿತ್ಯ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ

ಉಜಿರೆ: ಮಂಗಳೂರಿನ ಕೆನರ ಪ್ರೌಢಶಾಲೆಯಲ್ಲಿ “ಕಾನ್ ಮಂಥನ 2026” ಎಂಬ ಶೀರ್ಷಿಕೆಯಲ್ಲಿ ನಡೆದ ಐಕ್ಸ್ (Association of ICSE and CBSE Schools) ಅಂತರ ಶಾಲಾ ಜಿಲ್ಲಾ ಮಟ್ಟದ ಸಾಹಿತ್ಯ ಸ್ಪರ್ಧೆಯಲ್ಲಿ ಉಜಿರೆಯ ಎಸ್.ಡಿ.ಎಮ್. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ.

ಹಿರಿಯ ಪ್ರಾಥಮಿಕ ವಿಭಾಗದಲ್ಲಿ ನಡೆದ ಕನ್ನಡ ನಿರೂಪಣಾ ಚತುರ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿಯರಾದ ಅನ್ವಿ ಮತ್ತು ಶಾರ್ವಿ ರೈ ಪ್ರಥಮ ಸ್ಥಾನ ಪಡೆದರು.

ಪ್ರೌಢಶಾಲಾ ವಿಭಾಗದಲ್ಲಿ ನಡೆದ “ಸುಳಿವು ಕಂಡುಹಿಡಿಯಿರಿ” ಸ್ಪರ್ಧೆಯಲ್ಲಿ ವಿದ್ಯಾರ್ಥಿನಿ ಪೃಥ್ವಿ ಎಸ್. ಶೆಟ್ಟಿ ತೃತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.

ಸ್ಪರ್ಧೆಯಲ್ಲಿ ಭಾಗವಹಿಸಿದ ಹಾಗೂ ವಿಜೇತರಾದ ವಿದ್ಯಾರ್ಥಿಗಳನ್ನು ಶಾಲೆಯ ಪ್ರಾಂಶುಪಾಲರು ಮತ್ತು ಶಿಕ್ಷಕ ವೃಂದವು ಅಭಿನಂದಿಸಿ, ಮುಂದಿನ ಸ್ಪರ್ಧೆಗಳಲ್ಲಿಯೂ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದರು.

Related posts

ಬೆಳ್ತಂಗಡಿ: ರೈತರು ಫ್ರುಟ್ಸ್ ಐ.ಡಿ. ಮಾಡಿಸಿಕೊಳ್ಳುವಂತೆ ತಹಶೀಲ್ದಾರ್ ಪೃಥ್ವಿ ಸಾನಿಕಂ ಮನವಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ಕ್ರಿಕೆಟಿಗ ಕೆ.ಎಲ್‌.ರಾಹುಲ್ ಭೇಟಿ

Suddi Udaya

ಅಪರ ಜಿಲ್ಲಾಧಿಕಾರಿಯಾಗಿ ಡಾ. ಸಂತೋಷ್ ಕುಮಾರ್ ಅಧಿಕಾರ ಸ್ವೀಕಾರ

Suddi Udaya

ನಡ: ಪರಾರಿ ನಿವಾಸಿ ಅರುಣ್ ನಿಧನ

Suddi Udaya

ಉಜಿರೆ ವಿಶಾಲ್ ಸೇವಾ ಟ್ರಸ್ಟ್ ನಿಂದ ಬದನಾಜೆ ಶಾಲೆಗೆ ಕೊಡುಗೆ ಹಸ್ತಾಂತರ

Suddi Udaya

ರಾಜಕೇಸರಿ ಸಂಘಟನೆಯಿಂದ ವಿಶೇಷ ರೀತಿಯಲ್ಲಿ ಹುಟ್ಟುಹಬ್ಬ ಆಚರಣೆ: ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ಬರೆಯುವ ಪುಸ್ತಕ ವಿತರಣೆ

Suddi Udaya
error: Content is protected !!