26.9 C
ಪುತ್ತೂರು, ಬೆಳ್ತಂಗಡಿ
September 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಆ.6ರಂದು ಜರಗಿತು.

ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ರೋ. ಶ್ರೀಧರ್ ಕೆ.ವಿ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಈಗಿಂದಲೇ
ಸೇವಾ ಮನೋಭಾವ ಹೊಂದಬೇಕು. ಜೀವನದಲ್ಲಿ ಶಿಸ್ತು, ಮೌಲ್ಯ, ಸಂಸ್ಕಾರಗಳನ್ನು ಅಳವಡಿಸಿಕೊಂಡು ಸಮಾಜದಲ್ಲಿ ಒಳ್ಳೆಯ ಮಾನವರಾಗಿ ಬದುಕಬೇಕು ಎಂದು ತಿಳಿಸಿದರು.


ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ನಿವೃತ್ತ ಮುಖ್ಯೋಪಾಧ್ಯಾಯರಾದ ಸೋಮಶೇಖರ ಶೆಟ್ಟಿ ಮಾತನಾಡಿ, ಶಿಸ್ತು ಶಿಕ್ಷಣದ ಅವಿಭಾಜ್ಯ ಅಂಗವಾಗಬೇಕು, ಸಹವಾಸದಂತೆ ವ್ಯಕ್ತಿತ್ವವಿರುತ್ತದೆ ಒಳ್ಳೆಯ ಗೆಳೆಯರನ್ನು ಆಯ್ಕೆ ಮಾಡಿಕೊಂಡಾಗ ಒಳ್ಳೆಯ ಗುಣವಿರುತ್ತದೆ, ಮಾದಕ ವಸ್ತುಗಳಿಂದ ದೂರವಿದ್ದು, ಯಾವುದೇ ಕಾರಣಕ್ಕೂ ಯಾವುದೇ ಸಂದರ್ಭದಲ್ಲಿ ದುಶ್ಚಟಕ್ಕೆ ಬೀಳಬಾರದು ಎಂದು ತಿಳಿಸಿದರು.

ಇಂಟ್ರಾಕ್ಟ್ ಕ್ಲಬ್ಬಿನ ಹೊಸ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಲಾಯಿತು.

ಬೆಳ್ತಂಗಡಿ ರೋಟರಿ ಕ್ಲಬ್ಬಿನ ವತಿಯಿಂದ 8, 9 ಮತ್ತು 10ನೇ ತರಗತಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಅಧ್ಯಕ್ಷತೆ ವಹಿಸಿದ್ದ ದೈಹಿಕ ಶಿಕ್ಷಣ ಶಿಕ್ಷಕರಾದ ಕೃಷ್ಣಾನಂದ ನೂತನ ಪದಾಧಿಕಾರಿಗಳಿಗೆ ಶುಭ ಕೋರಿದರು.
ವೇದಿಕೆಯಲ್ಲಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಪ್ರಮೀಳಾ, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಸಫೀರ ಸ್ವಾಗತಿಸಿ, ಚೇತನ ವಂದಿಸಿದರು. ಆತ್ಮಿ ಮತ್ತು ನೇತ್ರಾವತಿ ಕಾರ್ಯಕ್ರಮ ನಿರೂಪಿಸಿದರು.

Related posts

ವಕ್ಫ್ ಕಾಯ್ದೆಗೆ ಅಸಂವಿಧಾನಿಕ ತಿದ್ದುಪಡಿ: ಕಕ್ಕಿಂಜೆಯಲ್ಲಿ ಮೂರು ಪಂಚಾಯತ್ ವ್ಯಾಪ್ತಿಯ ಮಸ್ಜಿದ್ ಗಳ ಜಂಟಿ ಪ್ರತಿಭಟನೆ

Suddi Udaya

ಆಪರೇಷನ್ ಸಿಂದೂರ: ಪೆರಾಲ್ದರಕಟ್ಟೆ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಕಳೆಂಜ: ಅಸೌಖ್ಯದಿಂದ ನಿಧನರಾದ ಕಮಲಾ ಶೀನಪ್ಪ ಗೌಡ ಮತ್ತು ಕುಶಾಲಪ್ಪ ನಾಯ್ಕ ರವರಿಗೆ ಬಿಜೆಪಿ ವತಿಯಿಂದ ಶ್ರದ್ಧಾಂಜಲಿ

Suddi Udaya

ಲಾಯಿಲ: ಬಜಕ್ರೆಸಾಲು ಸೇತುವೆ ಅಡಿ ಎರಡು ಕಾಣಿಕೆ ಡಬ್ಬಗಳು ಒಡೆದ ರೀತಿಯಲ್ಲಿ ಪತ್ತೆ: ಡಬ್ಬಗಳನ್ನು ಒಡೆದು ಹಣ ಕಳವು ಗೈದಿರುವ ಶಂಕೆ

Suddi Udaya

ಮದ್ದಡ್ಕ ಶ್ರೀರಾಮ ಸೇವಾ ಸಮಿತಿ ಆಶ್ರಯದಲ್ಲಿ ನಡೆಯುವ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪ್ರಬಂಧ ಸ್ಪರ್ಧೆ: ಅರ್ಪಿತಾ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!