September 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಕ್ಯಪದವು ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆ ಪದವಿ ವಿಭಾಗದಲ್ಲಿ ”ಕ್ವಿಝಾಡ್೯” ವಾಣಿಜ್ಯ ಚಟುವಟಿಕೆ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಶನ್‌ ಟ್ರಸ್ಟ್ ನಡೆಸುತ್ತಿರುವ ಎಲ್.ಸಿ.ಆರ್. ಇಂಡಿಯನ್ ಪದವಿ ಕಾಲೇಜಿನಲ್ಲಿ ಆ.08 ರಂದು ವಿದ್ಯಾರ್ಥಿಗಳಿಗಾಗಿ “ಕ್ವಿಝಾಡ್೯” ವಾಣಿಜ್ಯ ಚಟುವಟಿಕೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.

ವಿದ್ಯಾರ್ಥಿಗಳಲ್ಲಿ ವಾಣಿಜ್ಯ ನಿರ್ವಹಣಾ ಕೌಶಲ್ಯ, ಸೃಜನಾತ್ಮಕತೆ ಹಾಗೂ ವಾಣಿಜ್ಯ ಕ್ಷೇತ್ರದ ಅರಿವು ವೃದ್ಧಿಸುವ ಉದ್ದೇಶದಿಂದ, ಉಪನ್ಯಾಸಕರ ಮಾರ್ಗದರ್ಶನದಲ್ಲಿ ಹಳೆವಿದ್ಯಾರ್ಥಿಗಳ ವಿದ್ಯಾರ್ಥಿ ತಂಡವು ಈ ಚಟುವಟಿಕೆಯನ್ನು ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲ ಜೋಸ್ಟನ್ ಲೋಬೊ, ಸಂಯೋಜಕ ಯಶವಂತ ಜಿ. ನಾಯಕ, ವಾಣಿಜ್ಯ ವಿಭಾಗದ ಉಪನ್ಯಾಸಕರಾದ ದೀಕ್ಷಿತಾ ಎ, ಜಯಶ್ರೀ,ಚೈತ್ರಾ,ಆಂಗ್ಲ ಭಾಷಾ ಉಪನ್ಯಾಸಕರಾದ ಶುಭಕರ, ದೈಹಿಕ ಶಿಕ್ಷಣ ನಿರ್ದೆಶಕರಾದ ಪೃಥ್ವಿ ರಾಜ್ ಉಪಸ್ಥಿತರಿದ್ದರು.
ಹಳೆವಿದ್ಯಾರ್ಥಿನಿಯರಾದ ಫಾತಿಮಾ, ಸುರಕ್ಷಾ, ಶ್ರಾವ್ಯ, ನಿಶ್ಮಿತಾ,ಸಫಾ ತಸ್ಮಿಯಾ ಭಾಗವಹಿಸಿ ಕಾರ್ಯಕ್ರಮ ನಡೆಸಿಕೊಟ್ಟರು.
ವಿಜೇತ ತಂಡವನ್ನು ಬಹುಮಾನ ನೀಡಿ ಅಭಿನಂದಿಸಲಾಯಿತು.
ಪ್ರಥಮ, ದ್ವಿತೀಯಾ, ಅಂತಿಮ ಪದವಿ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಅಂತಿಮ ಬಿ.ಕಾಂ ತೇರ್ಗಡೆಗೊಂಡ ಹಳೆ ವಿದ್ಯಾರ್ಥಿನಿ ಸುರಕ್ಷಾ ಪ್ರಾಸ್ತಾವಿಕದೊಂದಿಗೆ ಸ್ವಾಗತಿಸಿ , ಹಳೆ ವಿದ್ಯಾರ್ಥಿನಿ ಫಾತಿಮಾ ಕಾರ್ಯಕ್ರಮ ನಿರೂಪಿಸಿ‌ ವಂದಿಸಿದರು.

Related posts

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಹಾಗೂ ವಾಣಿ ವಿದ್ಯಾ ಸಂಸ್ಥೆಗಳ ನೂತನ ಕಟ್ಟಡ ಹಾಗೂ ಸಭಾಭವನದ ಲೋಕಾರ್ಪಣಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆಯಲ್ಲಿ ದ.ಕ ಜಿಲ್ಲಾ ಪ.ಪೂ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರ

Suddi Udaya

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ 15ನೇ ವರ್ಷದ ಸಾಮೂಹಿಕ ವಿವಾಹವಧು-ವರರ ವೈಭವದ ದಿಬ್ಬಣ ಮೆರವಣಿಗೆಗೆ ಚಾಲನೆ,

Suddi Udaya

ಅಪ್ಸರಾ ಫ್ಯಾಶನ್ ಸೆಂಟರ್ ನಲ್ಲಿ ಆಷಾಡ ಹಾಗೂ ಮಾನ್ಸೂನ್ ಆಫರ್ ಡಿಸ್ಕೌಂಟ್ ಸೇಲ್: ಪ್ರತಿ ಖರೀದಿಯ ಮೇಲೆ ಶೇ.20 ಡಿಸ್ಕೌಂಟ್

Suddi Udaya

ಕರ್ನಾಟಕದ ಆರ್ಥಿಕ ಪರಿಸ್ಥಿತಿ ನಿಭಾಯಿಸುವಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿಫಲ: ವಿಧಾನಪರಿಷತ್ ಶಾಸಕ ಕೆ‌.ಪ್ರತಾಪ್ ಸಿಂಹ ನಾಯಕ್ ಆರೋಪ

Suddi Udaya

‘ವಿಕಸಿತ ಭಾರತ : ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಭಾಗವಹಿಸಲು ಉಜಿರೆ ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚರಿಗೆ ಆಹ್ವಾನ

Suddi Udaya
error: Content is protected !!