September 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಕೊಂಕದಡ್ಕ ಉಮೇಶ್ ಗೌಡ ಮೃತದೇಹ ನದಿಯಲ್ಲಿ ಪತ್ತೆ

ಬೆಳ್ತಂಗಡಿ; ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಕಣಿಯೂರು ಗ್ರಾಮದ ಪೆರಡಾಳ ಎಂಬಲ್ಲಿ ಆ 8 ರಂದು ಪತ್ತೆಯಾಗಿದೆ.ಮೃತ ವ್ಯಕ್ತಿ ಕೊಯ್ಯೂರು ಗ್ರಾಮದ ಕೊಂಕದಡ್ಕ ನಿವಾಸಿ ಚಿದಾನಂದ ಯಾನೆ ಉಮೇಶ್ ಗೌಡ (52) ಎಂಬವರಾಗಿದ್ದಾರೆ.

ಈತ ಚಿಕ್ಕಮಗಳೂರು ಜಿಲ್ಲೆಯ ಆಲ್ದೂರಿನಲ್ಲಿ ಕೆಲಸಕ್ಕೆಂದು ಹೋಗಿದ್ದವರು ಆ 5 ರಂದು ಅಲ್ಲಿಂದ ಮನೆಗೆಂದು ಹೊರಟು ಬಂದಿದ್ದು ಮನೆಗೆ ಬಂದಿರಲಿಲ್ಲ ಇವರಿಗಾಗಿ ಹುಡುಕಾಟ ನಡೆಸಿದರೂ ಯಾವುದೇ ಮಾಹಿತಿ ಲಭ್ಯವಾಗಿರಲಿಲ್ಲ. ನಾಪತ್ತೆಯಾಗಿದ್ದ ಚಿದಾನಂದ ಯಾನೆ ಉಮೇಶ ಅವರ ಮೃತದೇಹ ಆ 8ರಂದು ಕಣಿಯೂರು ಗ್ರಾಮದ ಪೆರಡಾಳ ಎಂಬಲ್ಲಿ ನದಿ ಬದಿಯಲ್ಲಿ ಪೊದೆಯಲ್ಲಿ ಸಿಲುಕಿಕೊಂಡ ರೀತಿಯಲ್ಲಿ ಪತ್ತೆಯಾಗಿದ್ದು ಆತನ‌ ಪತ್ನಿಭವಾನಿ ಮೃತದೇಹವನ್ನು ಗುರುತಿಸಿದ್ದು ಈ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.

ವಿಪರೀತ ಕುಡಿತದ ಚಟ ಹೊಂದಿದ್ದ ಈತ ನೀರಿಗೆ ಕಾಲುಜಾರಿ ಬಿದ್ದು ಅಥವಾ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಕಡಬದ ಮರ್ದಾಳ ಜಂಕ್ಷನ್ ನಲ್ಲಿ ಅಕ್ರಮ ಗೋಸಾಗಾಟದ ಕಾರು ಡಿಕ್ಕಿ, ಗಂಭೀರ ಗಾಯಗೊಂಡ ವ್ಯಕ್ತಿ ಸಾವು: ಹಿಂದೂ ಸಂಘಟನೆಯ ಕಾರ್ಯಕರ್ತರಿಂದ ಪ್ರತಿಭಟನೆ,

Suddi Udaya

ಕೆರೆಯಲ್ಲಿ ಸ್ನಾನಕ್ಕಿಳಿದ ಯುವಕ ಸಾವು

Suddi Udaya

ಆಕರ್ಷ ಗೆ ಪಿ. ಎಚ್. ಡಿ ಪ್ರದಾನ

Suddi Udaya

ಬಂಟರ ಯಾನೆ ನಾಡವರ ಸಂಘ, ಕಣಿಯೂರು ಗ್ರಾಮ ಸಮಿತಿ ವತಿಯಿಂದ ಪದಗ್ರಹಣ, ಪ್ರತಿಭಾ ಪುರಸ್ಕಾರ, ಪುಸ್ತಕ ವಿತರಣಾ ಕಾರ್ಯಕ್ರಮ

Suddi Udaya

ಅಳದಂಗಡಿಯಲ್ಲಿ “ನೊಚ್ಚ ಸೆರಾಮಿಕ್ಸ್” ಪ್ರಾರಂಭೋತ್ಸವ: ಶಾಸಕ ಹರೀಶ್ ಪೂಂಜ ಸೇರಿದಂತೆ ಹಲವು ಗಣ್ಯರಿಂದ ಶುಭ ಹಾರೈಕೆ

Suddi Udaya

ಗರ್ಡಾಡಿ: ಕೃಷಿಕ ಅಣ್ಣಿ ಪೂಜಾರಿ ಕೊಡ್ಡಂತ್ರೋಡಿ ನಿಧನ

Suddi Udaya
error: Content is protected !!