September 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕು ಮಟ್ಟದ ಪ್ರಾಥಮಿಕ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ: ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದ ವಿದ್ಯಾರ್ಥಿಗಳ ಸಾಧನೆ

ಉಜಿರೆಯ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಧರ್ಮಸ್ಥಳದ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ನೀಡಿ ಶಾಲೆಗೆ ಕೀರ್ತಿ ತಂದಿದ್ದಾರೆ.

ಪ್ರಾಥಮಿಕ ಬಾಲಕರ 14 ವರ್ಷದೊಳಗಿನ (U-14) ವಿಭಾಗದಲ್ಲಿ 7ನೇ ತರಗತಿಯ ಸಂಸ್ಕಾರ್, ಗೌತಮ್ ಹಾಗೂ ಸಂಕಲ್ಪ್ ಅವರನ್ನೊಳಗೊಂಡ ತಂಡವು ದ್ವಿತೀಯ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದೆ.

ಅದೇ ರೀತಿ, ಬಾಲಕಿಯರ 14 ವರ್ಷದೊಳಗಿನ (U-14) ವಿಭಾಗದಲ್ಲಿ 8ನೇ ತರಗತಿಯ ವಿದ್ಯಾರ್ಥಿನಿ ಸನ್ನಿಧಿ ಅವರು ಉತ್ತಮ ಪ್ರದರ್ಶನದ ಮೂಲಕ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಗಿರೀಶ್ ಅವರು ತರಬೇತಿ ಹಾಗೂ ಮಾರ್ಗದರ್ಶನ ನೀಡಿದ್ದು, ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ.ವಿ. ಅವರು ವಿದ್ಯಾರ್ಥಿಗಳನ್ನು ಹಾಗೂ ಶಿಕ್ಷಕರನ್ನು ಅಭಿನಂದಿಸಿ, ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿಯೂ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದರು

Related posts

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ಮಹಿಳೆಯ ಬ್ಯಾಗಿನಲ್ಲಿದ್ದ ಪರ್ಸಿನಿಂದ ರೂ 2.16ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ರೂ. 5 ಸಾವಿರ ನಗದು ಕಳವು

Suddi Udaya

ಕಕ್ಕಿಂಜೆ: ಅಣಿಯೂರು ಸ.ಉ.ಹಿ. ಪ್ರಾ. ಶಾಲಾ ಹಳೆ ವಿದ್ಯಾರ್ಥಿ ಸಂಘ-ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಅರಸಿನಮಕ್ಕಿ: ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ಶ್ರೀರಾಮೋತ್ಸವ ಮತ್ತು ಹೋಳಿಗೆ ಹಬ್ಬ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಸಿಎಸ್ಇಇಟಿ ಪರೀಕ್ಷೆಯಲ್ಲಿ ಎಕ್ಸೆಲ್ ಅಮೋಘ ಸಾಧನೆ ರಾಜ್ಯಕ್ಕೆ ಮಾದರಿಯಾದ ಎಕ್ಸೆಲ್ ಪದವಿಪೂರ್ವ ಕಾಲೇಜಿನ ಫಲಿತಾಂಶ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪದವಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ ಸಮಾರಂಭ

Suddi Udaya
error: Content is protected !!