September 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪಡೆದ ಶಾಸಕ ಹರೀಶ್ ಪೂಂಜಾ ರವರಿಗೆ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವತಿಯಿಂದ ಗೌರವಾರ್ಪಣೆ

ಬೆಳ್ತಂಗಡಿ : ಇತ್ತೀಚೆಗೆ ರಾಜ್ಯದ ಪ್ರತಿಷ್ಠಿತ ವಾರ್ತಾ ವಾಹಿನಿಗಳಲ್ಲಿ ಒಂದಾದ ಕರ್ನಾಟಕ ಟಿವಿಯವರು ಬೆಳ್ತಂಗಡಿ ತಾಲೂಕಿನ ಹಾಗೂ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಅವರು ಕೈಗೊಂಡ ಜನಸ್ನೇಹಿ ಕಾರ್ಯಕ್ರಮಗಳನ್ನು ಗುರುತಿಸಿ, ಕರಾವಳಿ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗದ “ಬೆಸ್ಟ್ ಎಂಎಲ್ಎ” ಅವಾರ್ಡ್ ಪಡೆದ ಹಿನ್ನಲೆಯಲ್ಲಿ ಶಾಸಕ ಹರೀಶ್ ಪೂಂಜರವರನ್ನು ಅವರ ಸ್ವಗೃಹ ಮಿಥಿಲಾದಲ್ಲಿ ಬೆಳ್ತಂಗಡಿ ಮಂಡಲ ಭಾರತೀಯ ಜನತಾ ಪಾರ್ಟಿಯ ಯುವಮೋರ್ಚಾ ವತಿಯಿಂದ ಗೌರವಾರ್ಪಣೆ ಮತ್ತು ಸನ್ಮಾನ ಕಾರ್ಯಕ್ರಮ ನೆರವೇರಿಸಲಾಯಿತು.

ಈ ಪ್ರಶಸ್ತಿಯು ಕೇವಲ ಶಾಸಕರಿಗೆ ಮಾತ್ರವಲ್ಲದೆ, ಬೆಳ್ತಂಗಡಿ ತಾಲೂಕಿನ ಪ್ರತಿಯೊಬ್ಬ ನಾಗರಿಕರಿಗೂ ಸಿಕ್ಕ ಗೌರವವಾಗಿದೆ ಎಂದು ಬೆಂಬಲಿಗರು, ಹಾಗೂ ಮುಖಂಡರು ಹರ್ಷ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಬಿಜೆಪಿ ಅಧ್ಯಕ್ಷ ಶ್ರೀನಿವಾಸ್ ರಾವ್ ಧರ್ಮಸ್ಥಳ, ಜಿಲ್ಲಾ ವಿಭಾಗ ಸಹ ಪ್ರಭಾರಿ ಜಯಂತ್ ಕೋಟ್ಯಾನ್ ಮರೋಡಿ, ಬೆಳ್ತಂಗಡಿ ಮಂಡಲ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್ ಗುರುವಾಯನಕೆರೆ, ಮಂಡಲ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ವಿನೀತ್ ಕೋಟ್ಯಾನ್ ಸಾವ್ಯ, ಜಯಪ್ರಸಾದ್ ಗೌಡ ಕಡಮ್ಮಾಜೆ ಫಾರ್ಮ್ಸ್ ಮೊಗ್ರು, ಉಪಾಧ್ಯಕ್ಷರುಗಳಾದ ಗಣೇಶ್ ಆರ್ ಲಾಯಿಲ, ಹರೀಶ್ ಗೌಡ ಸಂಭೋಲ್ಯ, ಪ್ರಕಾಶ್ ಪೂಜಾರಿ ಬಾರ್ಯ, ಸುಜಿತ್ ಪೆರಾಡಿ ,ಕಾರ್ಯದರ್ಶಿಗಳಾದ ಗಿರೀಶ್ ಗೌಡ. ಬಿ.ಕೆ. ಬಂದಾರು, ಸುಧೀರ್ ಪೂಜಾರಿ ಚಾರ್ಮಾಡಿ,ರಂಜು ಕೊಕ್ಕಡ, ಜಗದೀಶ್ ಕನ್ನಾಜೆ, ಕೋಶಾಧಿಕಾರಿ ಸ್ವಸ್ತಿಕ್ ಗೌಡ ಹಟತ್ತೋಡಿ-ಕುಕ್ಕಳ, ಕಣಿಯೂರು ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಮಹೇಶ್ ಜೇಂಕ್ಯಾರ್,ಕಾರ್ಯಕಾರಿಣಿ ಸಮಿತಿ ಸದಸ್ಯರುಗಳಾದ ಅಶ್ವಿನ್ ಅಂಡಿಂಜೆ, ಪ್ರಸಾದ್ ಸುಧೇಮುಗೇರು, ಮನೀಷ್ ಡಿ. ಎ. ಧರ್ಮಸ್ಥಳ, ಜಯಕುಮಾರ್ ಶಿರ್ಲಾಲು, ಪವನ್ ಬಂಗೇರ ನಗರ, ಪ್ರದೀಪ್ ಕುಲಾಲ್ ಕಾಯರ್ತಡ್ಕ, ಸಂತೋಷ್ ಕುಮಾರ್ ಇಂದಬೆಟ್ಟು,ಪವನ್ ಶೆಟ್ಟಿ ಉಜಿರೆ ಹಾಗೂ ಮಹಾಶಕ್ತಿ ಪ್ರಮುಖರಾದ ಲೋಕ್ಷತ್, ಹರೀಶ್ ಕಾಶಿಪಟ್ಣ, ಪದಾಧಿಕಾರಿಗಳು, ಸದಸ್ಯರುಗಳು ಹಾಗೂ ಪ್ರಮುಖರು,ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಮೇಲಂತಬೆಟ್ಟು ತ್ರಿವೇಣಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನಲ್ಲಿ ಗಣೇಶೋತ್ಸವ

Suddi Udaya

ದೇಶದ ಪ್ರತಿಷ್ಠಿತ “ಎಮಿನೆಂಟ್ ಎಂಜಿನಿಯರ್ ಅವಾರ್ಡ್”ಗೆ ಭಾಜನರಾದ ಇಂಜಿನಿಯರ್ ಜಗದೀಶ್ ಪ್ರಸಾದ್ ಎನ್.

Suddi Udaya

ತುಂಗಪ್ಪ ಬಂಗೇರ ನೇತೃತ್ವದಲ್ಲಿ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ 17 ನೇ ವರ್ಷದ ಸಾಮೂಹಿಕ ವಿವಾಹ: ಸತಿ ಪತಿಗಳಾಗಿ 7 ಜೋಡಿ ಗೃಹಾಸ್ಥಶ್ರಮಕ್ಕೆ,ಸಾಧಕರಿಗೆ ಸ್ವಸ್ತಿ ಸಿರಿ ರಾಜ್ಯಪ್ರಶಸ್ತಿ, ಸ್ವಸ್ತಿಕ್ ಸಂಭ್ರಮ ಪ್ರಶಸ್ತಿ ಪ್ರದಾನ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಸೂಪರ್ 30 – ಪ್ರವೇಶ ಪರೀಕ್ಷೆ

Suddi Udaya
error: Content is protected !!